Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:28 - ಕನ್ನಡ ಸತ್ಯವೇದವು C.L. Bible (BSI)

28 ಇದನ್ನೆಲ್ಲಾ ಹೇಳಿ ಆದಮೇಲೆ ಯೇಸುಸ್ವಾಮಿ ಅವರೆಲ್ಲರಿಗಿಂತ ಮುಂದಾಗಿ ನಡೆದು ಜೆರುಸಲೇಮಿನತ್ತ ತೆರಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇಮಿಗೆ ಮುಂದಾಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆತನು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇವಿುಗೆ ಮುಂದೆ ಮುಂದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸು ಈ ಸಂಗತಿಗಳನ್ನು ಹೇಳಿದ ನಂತರ ಜೆರುಸಲೇಮಿನ ಕಡೆಗೆ ಪ್ರಯಾಣ ಮುಂದುವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೇಸು ಹೀಗೆ ಹೇಳಿದ ತರುವಾಯ, ಶಿಷ್ಯರಿಗೆ ಮುಂದಾಗಿ, ಯೆರೂಸಲೇಮಿಗೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಹೆ ಸಗ್ಳೆ ಸಾಂಗುನ್ ಹೊಲ್ಲ್ಯಾ ಮಾನಾ, ಜೆಜು ತೆಂಚ್ಯಾ ಫಿಡೆ-ಫಿಡೆ ಜೆರುಜಲೆಮಾಕ್ ಜಾವ್ಕಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:28
9 ತಿಳಿವುಗಳ ಹೋಲಿಕೆ  

ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖವಾಗಿ ಹೊರಡಲು ನಿರ್ಧರಿಸಿದರು.


ಕ್ರಿಸ್ತಯೇಸು ದೈಹಿಕವಾಗಿ ಹಿಂಸೆಬಾಧೆಯನ್ನು ಅನುಭವಿಸಿದ್ದರಿಂದ ನೀವೂ ಅವರಲ್ಲಿದ್ದ ಅದೇ ಭಾವನೆಯಿಂದ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ದೈಹಿಕವಾಗಿ ಹಿಂಸೆಪಡುವವನು ಪಾಪ ಜೀವನದೊಡನೆ ಸಂಬಂಧವನ್ನು ಕಡಿದುಕೊಂಡವನು.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಯೇಸುಸ್ವಾಮಿ ಹನ್ನೆರಡುಮಂದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು, “ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ನರಪುತ್ರನ ವಿಷಯವಾಗಿ ಪ್ರವಾದಿಗಳು ಬರೆದಿರುವುದೆಲ್ಲವೂ ನೆರವೇರುವುದು.


ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕ ನನಗೆ ನೆಮ್ಮದಿಯಿಲ್ಲ.


ಆಗ ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು, ನನ್ನ ಪಿತನೇ ಕೊಟ್ಟಿರುವ ಕಷ್ಟದ ಕೊಡವಿದು; ಇದರಲ್ಲಿರುವುದನ್ನು ನಾನು ಕುಡಿಯದೆಹೋದರೆ ಹೇಗೆ?” ಎಂದು ನುಡಿದರು.


ಆಗ ಯೇಸು ಅವನಿಗೆ ಹೀಗೆಂದು ವಿವರಿಸಿದರು: “ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆಮಾಡಿ, ಹೊಡೆದು ಬಡಿದು, ಅರೆಜೀವ ಮಾಡಿ ಅಲ್ಲೇ ಬಿಟ್ಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು