Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:3 - ಕನ್ನಡ ಸತ್ಯವೇದವು C.L. Bible (BSI)

3 ಯೇಸು ಯಾರೆಂದು ನೋಡಬೇಕೆಂಬ ಅಪೇಕ್ಷೆ ಅವನದು. ಆದರೆ ಅವನು ಗಿಡ್ಡ ವ್ಯಕ್ತಿ. ಜನಜಂಗುಳಿಯ ಮಧ್ಯೆ ಯೇಸುವನ್ನು ನೋಡಲು ಪ್ರಯತ್ನಿಸಿದರೂ ಅವನಿಂದಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಯೇಸು ಹೇಗಿದ್ದಾನೆಂದು ನೋಡಲು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದುದರಿಂದ, ಜನರ ಗುಂಪಿನ ನಿಮಿತ್ತ ನೋಡಲಾರದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಯೇಸು ಎಂಥವನೆಂದು ನೋಡಲಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನರ ಗುಂಪಿನ ನಿವಿುತ್ತ ನೋಡಲಾರದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವನು ಯೇಸುವನ್ನು ನೋಡಲು ಬಯಸಿದನು. ಯೇಸುವನ್ನು ನೋಡುವುದಕ್ಕಾಗಿ ಇತರ ಅನೇಕ ಜನರೂ ಅಲ್ಲಿದ್ದರು. ಜಕ್ಕಾಯನು ಬಹಳ ಗಿಡ್ಡನಾಗಿದ್ದುದರಿಂದ ಆ ಜನರ ಗುಂಪಿನ ದೆಸೆಯಿಂದ ಯೇಸುವನ್ನು ನೋಡಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಯೇಸು ಯಾರೆಂದು ಕಾಣಬೇಕೆಂದು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದದರಿಂದ ಜನರ ಗುಂಪಿನ ನಿಮಿತ್ತವಾಗಿ ಅವರನ್ನು ಕಾಣಲಾರದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೊ ಜೆಜು ಕೊನ್ ಕಾಯ್ ಮನುನ್ ಬಗುಕ್ ಖಟ್‍ಪಟಿ. ಖರೆ ತೊ ಗಿಡ್ಡೊ ಹೊತ್ತೊ, ತಸೆ ಮನುನ್ ತ್ಯಾ ಲೊಕಾಂಚ್ಯಾ ದಾಟ್ನಿತ್ ತೆಕಾ ಜೆಜುಕ್ ಬಗುಕ್ ಗಾವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:3
7 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿಯನ್ನು ಕಂಡೊಡನೆ ಹೆರೋದನಿಗೆ ತುಂಬ ಸಂತೋಷವಾಯಿತು. ಆತನು ಅವರನ್ನು ಕಾಣಲು ಬಹಳ ದಿನಗಳಿಂದ ಕಾತರನಾಗಿದ್ದನು. ಏಕೆಂದರೆ ಅವರ ವಿಷಯವಾಗಿ ಈಗಾಗಲೇ ಎಷ್ಟೋ ಕೇಳಿದ್ದನು. ಅವರು ಯಾವುದಾದರೊಂದು ಪವಾಡಕಾರ್ಯ ಮಾಡುವುದನ್ನು ನೋಡಬೇಕೆಂಬ ಅಪೇಕ್ಷೆ ಆತನಿಗಿತ್ತು.


ಇವರು ಗಲಿಲೇಯದ ಬೆತ್ಸಾಯಿದ ಎಂಬ ಊರಿನವನಾದ ಫಿಲಿಪ್ಪನ ಬಳಿಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದು ಕೇಳಿಕೊಂಡರು.


ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?


ಇದನ್ನೆಲ್ಲಾ ದೂರದಿಂದ ನೋಡುತ್ತಿದ್ದ ಕೆಲವು ಮಹಿಳೆಯರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಕೋಬ ಮತ್ತು ಯೋಸೆಯ ತಾಯಿ ಮರಿಯಳು ಹಾಗೂ ಸಲೋಮೆ ಇದ್ದರು.


ಅಲ್ಲಿ ಜಕ್ಕಾಯ ಎಂಬವನಿದ್ದನು. ಅವನು ಸುಂಕವಸೂಲಿಯವರ ಮುಖಂಡ ಹಾಗೂ ಧನಾಢ್ಯ.


ಆದಕಾರಣ ಮುಂದಕ್ಕೆ ಓಡಿಹೋಗಿ ಯೇಸು ಬರುತ್ತಿದ್ದ ಆ ಮಾರ್ಗದಲ್ಲಿ ಒಂದು ಆಲದ ಮರವನ್ನು ಕಂಡು ಅದನ್ನು ಹತ್ತಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು