Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:38 - ಕನ್ನಡ ಸತ್ಯವೇದವು C.L. Bible (BSI)

38 “ಸರ್ವೇಶ್ವರನ ನಾಮದಲಿ ಬರುವ ಅರಸನಿಗೆ ಜಯಜಯವಾಗಲಿ! ಶಾಂತಿ ಸ್ವರ್ಗದಲಿ, ಮಹಿಮೆ ಮಹೋನ್ನತದಲಿ!” ಎಂದು ಜಯಘೋಷ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 “ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಮಂಗಳ, ಮೇಲಣಲೋಕಗಳಲ್ಲಿ ಮಹಿಮೆ ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವದಕ್ಕೆ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಅವರು, “‘ಪ್ರಭುವಿನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದವಾಗಲಿ!’ ಪರಲೋಕದಲ್ಲಿ ಸಮಾಧಾನವಾಗಲಿ; ದೇವರಿಗೆ ಮಹಿಮೆಯಾಗಲಿ” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 “ಕರ್ತದೇವರ ಹೆಸರಿನಲ್ಲಿ ಬರುವ ಅರಸನು ಆಶೀರ್ವಾದ ಹೊಂದಲಿ!” “ಪರಲೋಕದಲ್ಲಿ ಸಮಾಧಾನ, ಅತ್ಯುನ್ನತದಲ್ಲಿ ಮಹಿಮೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಸಗ್ಳಿ ಲೊಕಾ , ಸರ್ವೆಸ್ವರಾಚ್ಯಾ ನಾವಾನ್ ಯೆತಲ್ಯಾ ರಾಜಾಕ್ ದೆವ್ ಆಶಿರ್ವಾದ್ ದಿಂವ್ದಿ! ಸರ್‍ಗಾ ವರ್‍ತಿ ಶಾಂತಿ, ಅನಿ ದೆವಾಕ್ ಮಹಿಮಾ ಹೊಂವ್ದಿ! ಮನುಕ್‍ಲಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:38
21 ತಿಳಿವುಗಳ ಹೋಲಿಕೆ  

ಆದರೆ ನೀನು ಒಪ್ಪಲಿಲ್ಲ. ಇಗೋ, ನಿಮ್ಮ ದೇವಾಲಯ ಪಾಳುಬೀಳುವುದು. ‘ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು,’ ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಕಾಣಲಾರಿರಿ, ಎಂಬುದು ನಿಶ್ಚಯ,” ಎಂದರು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.


ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.


ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.


“ಯೆಹೂದ್ಯರ ಅರಸ ಹುಟ್ಟಿದ್ದಾರಲ್ಲವೇ, ಅವರೆಲ್ಲಿ?” ಎಂದು ವಿಚಾರಿಸಿದರು; “ಅವರನ್ನು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಅವರನ್ನು ಆರಾಧಿಸಲು ಇಲ್ಲಿಗೆ ಬಂದಿದ್ದೇವೆ,” ಎಂದರು.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು