Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:44 - ಕನ್ನಡ ಸತ್ಯವೇದವು C.L. Bible (BSI)

44 ನಿನ್ನನ್ನೂ ನಿನ್ನೊಳಗಿನ ಜನರನ್ನೂ ಧ್ವಂಸಮಾಡುವರು; ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ, ದೇವರು ನಿನ್ನನ್ನು ಅರಸಿ ಬಂದ ಕಾಲವನ್ನು ನೀನು ಅರಿತುಕೊಳ್ಳದೆಹೋದೆ,” ಎಂದು ಅದರ ಸಲುವಾಗಿ ಕಣ್ಣೀರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಇದಲ್ಲದೆ ಅವರು ಗೋಡೆಯೊಳಗಿನ ನಿನ್ನನ್ನೂ ನಿನ್ನ ಮಕ್ಕಳನ್ನೂ ನೆಲಕ್ಕೆ ಬಡಿಯುವರು. ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ ದೇವರು ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಅನಿ ತೆನಿ ತುಜ್ಯಾ ಭುತ್ತುರ್ ಹೊತ್ತ್ಯಾ ಸಗ್ಳ್ಯಾ ಲೊಕಾಕ್ನಿ ನಾಸ್ ಕರ್‍ತ್ಯಾತ್; ತುಜ್ಯಾ ಭೊತ್ಯಾನ್ಲ್ಯಾ ಭಿತ್ತಿಚೊ ಎಕ್ ಗುಂಡ್ಯಾರ್ ಗುಂಡೊ ಸೈತ್ ಥೈನಸ್ತಾನಾ ಕೊಸ್ಳುನ್ ಘಾಲ್ತ್ಯಾತ್, ಕಶ್ಯಾಕ್ ಮಟ್ಲ್ಯಾರ್, ದೆವ್ ತುಕಾ ಬಚಾವ್ ಕರುಕ್ ಮನುನ್ ಯೆಲ್ಲೊ ಎಳ್ ತಿಯಾ ವಳ್ಕುಕ್‍ ನೈ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:44
19 ತಿಳಿವುಗಳ ಹೋಲಿಕೆ  

ಆಗ ಯೇಸು, “ಇವುಗಳನ್ನು ನೀವು ನೋಡುತ್ತಿದ್ದೀರಲ್ಲವೆ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವ ಕಾಲವೊಂದು ಬರುವುದು,” ಎಂದರು.


ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


“ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ.


ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II


ಆಗ ಯೇಸು, “ಇವುಗಳನ್ನೆಲ್ಲಾ ನೀವು ನೋಡುತ್ತಾ ಇದ್ದೀರಲ್ಲವೆ? ನಾನು ನಿಮಗೆ ಹೇಳುತ್ತೇನೆ ಕೇಳಿ: ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವರು,” ಎಂದರು.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಕೃಪಾಸಾಗರ, ದಯಾಮಯ ನಮ್ಮ ದೇವನು I ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು II


ಅದಕ್ಕೆ ಯೇಸು, “ಈ ಮಹಾಕಟ್ಟಡಗಳನ್ನು ನೀನು ನೋಡುತ್ತಿರುವೆಯಲ್ಲವೆ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವನ್ನೂ ಕೆಡವಿಹಾಕುವರು,” ಎಂದರು.


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?


ನಾನು ನಿನ್ನ ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೊತ್ತಲ ಕಟ್ಟುವೆನು. ದಿಬ್ಬವನ್ನೆಬ್ಬಿಸಿ ನಿನ್ನನ್ನು ಮುತ್ತುವೆನು.


ದಂಡನೆಯ ಕಾಲವನ್ನು ಗೊತ್ತುಮಾಡಿರುವೆನು. ಅದು ಬಂದಾಗ ಅವರಲ್ಲಿ ಯಾರೂ ಉಳಿಯರು. ಇದು ನನ್ನ ತೀರ್ಮಾನ,” ಎಂದರು.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು