Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:5 - ಕನ್ನಡ ಸತ್ಯವೇದವು C.L. Bible (BSI)

5 ಯೇಸು ಆ ಸ್ಥಳಕ್ಕೆ ಬಂದು, ತಲೆಯೆತ್ತಿ ನೋಡಿ, “ಜಕ್ಕಾಯಾ, ಒಡನೆ ಇಳಿದು ಬಾ; ಈ ದಿನ ನಿನ್ನ ಮನೆಯಲ್ಲಿ ನಾನು ತಂಗಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ, “ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಉಳಿದುಕೊಳ್ಳಬೇಕು” ಎಂದು ಅವನಿಗೆ ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ - ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಇಳುಕೊಳ್ಳಬೇಕು ಎಂದು ಅವನಿಗೆ ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೇಸು ಆ ಸ್ಥಳಕ್ಕೆ ಬಂದಾಗ, ಮರದ ಮೇಲೆ ಕುಳಿತಿದ್ದ ಜಕ್ಕಾಯನನ್ನು ಕಣ್ಣೆತ್ತಿ ನೋಡಿ ಅವನಿಗೆ, “ಜಕ್ಕಾಯನೇ ಬೇಗನೆ ಕೆಳಗಿಳಿದು ಬಾ! ಈ ದಿನ ನಾನು ನಿನ್ನ ಮನೆಯಲ್ಲಿ ಇಳಿದುಕೊಳ್ಳಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೇಸು ಆ ಸ್ಥಳಕ್ಕೆ ಬಂದು, ಮೇಲಕ್ಕೆ ನೋಡಿ ಅವನಿಗೆ, “ಜಕ್ಕಾಯನೇ, ತಕ್ಷಣವೇ ಇಳಿದು ಬಾ. ನಾನು ಇಂದು ನಿನ್ನ ಮನೆಯಲ್ಲಿ ತಂಗಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಜೆಜುನ್ ತ್ಯಾ ಜಾಗ್ಯಾರ್ ಯೆವ್ನ್ ಪಾವಲ್ಲ್ಯಾ, ತನ್ನಾ ವೈರ್ ಬಗಟ್ಲ್ಯಾನ್ ಅನಿ ಜಾಕ್ಕೆವ್ಸಾಕ್, ಜಾಕ್ಕೆವ್ಸ್, ಲಗ್ಗುನಾ ಖಾಲ್ತಿ ಉತ್ರುನ್ ‍ಯೆ, ಕಶ್ಯಾಕ್ ಮಟ್ಲ್ಯಾರ್, ಆಜ್ ತುಜ್ಯಾ ಘರಾತ್ ಮಾಕಾ ವಸ್ತಿ ರ್‍ಹಾವ್ಕ್ ಪಾಜೆ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:5
17 ತಿಳಿವುಗಳ ಹೋಲಿಕೆ  

ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ಅತಿಥಿಸತ್ಕಾರ ಮಾಡುವುದನ್ನು ಮರೆಯದಿರಿ. ಅದನ್ನು ಮಾಡುವಾಗ ಅರಿಯದೆ ಕೆಲವರು ದೇವದೂತರನ್ನೇ ಉಪಚರಿಸಿದ್ದಾರೆ.


ನತಾನಿಯೇಲನು, “ನನ್ನ ಪರಿಚಯ ನಿಮಗೆ ಹೇಗಾಯಿತು?” ಎಂದು ಕೇಳಲು ಯೇಸು, “ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ,” ಎಂದು ಉತ್ತರಕೊಟ್ಟರು.


ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.


ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.


“ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿದೆ; ಹೌದು, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ಅಲ್ಲಿ ಜಕ್ಕಾಯ ಎಂಬವನಿದ್ದನು. ಅವನು ಸುಂಕವಸೂಲಿಯವರ ಮುಖಂಡ ಹಾಗೂ ಧನಾಢ್ಯ.


ಆದಕಾರಣ ಮುಂದಕ್ಕೆ ಓಡಿಹೋಗಿ ಯೇಸು ಬರುತ್ತಿದ್ದ ಆ ಮಾರ್ಗದಲ್ಲಿ ಒಂದು ಆಲದ ಮರವನ್ನು ಕಂಡು ಅದನ್ನು ಹತ್ತಿದನು.


ಜಕ್ಕಾಯನು ತಕ್ಷಣವೇ ಇಳಿದುಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು