Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:7 - ಕನ್ನಡ ಸತ್ಯವೇದವು C.L. Bible (BSI)

7 ಇದನ್ನು ನೋಡಿದವರೆಲ್ಲರು, “ಯೇಸು ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ?” ಎಂದು ಗೊಣಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದನ್ನು ನೋಡಿದವರೆಲ್ಲರು - ಈತನು ಪಾಪಿಯಾಗಿರುವವನ ಬಳಿಯಲ್ಲಿ ಇಳುಕೊಳ್ಳುವದಕ್ಕೆ ಹೋಗಿದ್ದಾನೆ ಎಂದು ಗುಣುಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜನರೆಲ್ಲರೂ ಇದನ್ನು ನೋಡಿ, “ಯೇಸು ಎಂಥವನ ಮನೆಯಲ್ಲಿ ಇಳಿದುಕೊಳ್ಳುತ್ತಾನೆ. ಜಕ್ಕಾಯನು ಪಾಪಿ!” ಎಂದು ಆಕ್ಷೇಪಣೆ ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದನ್ನು ಕಂಡವರೆಲ್ಲರೂ, “ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ,” ಎಂದು ಗೊಣಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹೆ ಬಗಟಲ್ಲೆ ಸಗ್ಳೆ ಜಾನಾ, “ಹ್ಯೊ ಮಾನುಸ್, ಎಕ್ ಪಾಪಿ ಮಾನ್ಸಾಚ್ಯಾ ಘರಾತ್ ಸೊಯ್ರೊ ಹೊವ್ನ್ ಗೆಲಾ” ಮನುನ್ ಪುಸ್ಪುಸುನ್ ಬೊಲುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:7
11 ತಿಳಿವುಗಳ ಹೋಲಿಕೆ  

ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು.


ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು’ ಎಂದು ತನ್ನೊಳಗೇ ಅಂದುಕೊಂಡನು.


ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,’ ಎನ್ನುತ್ತೀರಿ.


ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮ ಗುರು ಇಂತಹ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇ?’ ಎಂದು ಆಕ್ಷೇಪಿಸಿದರು.


ಇದನ್ನು ಕಂಡ ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಧರ್ಮಶಾಸ್ತ್ರಜ್ಞರು ಗೊಣಗಾಡುತ್ತಾ, ಯೇಸುವಿನ ಶಿಷ್ಯರ ಬಳಿಗೆ ಬಂದು, “ನೀವು ಸುಂಕದವರ ಮತ್ತು ಪಾಪಿಷ್ಠರ ಜೊತೆಯಲ್ಲಿ ಏಕೆ ತಿನ್ನುತ್ತೀರಿ, ಕುಡಿಯುತ್ತೀರಿ?” ಎಂದು ಪ್ರಶ್ನಿಸಿದರು.


ಅದನ್ನು ತೆಗೆದುಕೊಂಡಾಗ ಅವರು ದಣಿಯ ವಿರುದ್ಧ ಗೊಣಗಲಾರಂಭಿಸಿದರು.


ಜಕ್ಕಾಯನು ತಕ್ಷಣವೇ ಇಳಿದುಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು.


ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ನೀವೂ ನನ್ನ ದ್ರಾಕ್ಷಿತೋಟಕ್ಕೆ ಹೋಗಿರಿ; ನ್ಯಾಯವಾದ ಕೂಲಿಯನ್ನು ನಿಮಗೆ ಕೊಡುತ್ತೇನೆ,’ ಎಂದ. ಅವರೂ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು