Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:10 - ಕನ್ನಡ ಸತ್ಯವೇದವು C.L. Bible (BSI)

10 ಆ ದೂತನು ಅವರಿಗೆ, “ಭಯಪಡಬೇಡಿ, ಇಗೋ, ಜನರೆಲ್ಲರಿಗೂ ಪರಮಾನಂದವನ್ನು ತರುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ದೂತನು ಅವರಿಗೆ - ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭಸಮಾಚಾರವನ್ನು ನಿಮಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವದೂತನು ಅವರಿಗೆ, “ಹೆದರಬೇಡಿರಿ, ಜನರೆಲ್ಲರಿಗೆ ಮಹಾಸಂತೋಷವನ್ನು ಉಂಟುಮಾಡುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆ ದೂತನು ಅವರಿಗೆ, “ಹೆದರಬೇಡಿರಿ. ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಶುಭಸಮಾಚಾರವನ್ನು ನಾನು ನಿಮಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ದೆವಾಚ್ಯಾ ದುತಾನ್ “ಭಿಂವ್‌ನಕಾಶಿ ಸಗ್ಳ್ಯಾ ಲೊಕಾಕ್ನಿ ಖುಶಿ ಹಾನ್ತಲಿ ಬರಿ ಖಬರ್ ಮಿಯಾ ತುಮ್ಕಾ ಘೆವ್ನ್ ಯೆಲಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:10
30 ತಿಳಿವುಗಳ ಹೋಲಿಕೆ  

ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ತಕ್ಷಣವೇ ಯೇಸು, “ಭಯಪಡಬೇಡಿ, ನಾನೇ ಬೇರೆ ಯಾರೂ ಅಲ್ಲ, ಧೈರ್ಯದಿಂದಿರಿ,” ಎಂದು ಅವರೊಡನೆ ಮಾತನಾಡಿದರು.


ದೂತನು ಆಕೆಗೆ, “ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ;


ಕೇಳಿ, ಇದನ್ನು ಮೊದಲು ತಿಳಿಸಿದವನು ನಾನೇ ಸಿಯೋನಿಗೆ; ಶುಭಸಂದೇಶಕ ದೂತನನ್ನು ಕಳುಹಿಸಿದವನು ನಾನೇ ಜೆರುಸಲೇಮಿಗೆ.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ನಾವೀಗ ನಿಮಗೆ ಸಾರುವ ಶುಭಸಂದೇಶ ಇದು: ದೇವರು ಯೇಸುಸ್ವಾಮಿಯನ್ನು ಪುನರುತ್ಥಾನಗೊಳಿಸಿದ್ದಾರೆ. ಈ ಮೂಲಕ ನಮ್ಮ ಪೂರ್ವಜರಿಗೆ ಮಾಡಿದ ವಾಗ್ದಾನವನ್ನು ಅವರ ಸಂತತಿಯಾದ ನಮಗಿಂದು ಈಡೇರಿಸಿದ್ದಾರೆ. ಎರಡನೆಯ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ‘ನೀನೇ ನನ್ನ ಪುತ್ರ, ನಾನಿಂದು ನಿನ್ನ ಜನಕ.’


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ತರುವಾಯ ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರಮಾಡಿದರು. ಹನ್ನೆರಡು ಮಂದಿ ಶಿಷ್ಯರೂ ಅವರೊಡನೆ ಇದ್ದರು.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ಆಗ ದೇವದೂತನು, “ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡುಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು.


“ಕಾಲವು ಪರಿಪಕ್ವವಾಗಿದೆ, ದೇವರ ಸಾಮ್ರಾಜ್ಯವು ಸಮೀಪಿಸಿದೆ; ಪಶ್ಚಾತ್ತಾಪಪಟ್ಟು ಪಾಪಜೀವನಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ. ಶುಭಸಂದೇಶದಲ್ಲಿ ವಿಶ್ವಾಸವಿಡಿ,” ಎಂದು ಘೋಷಿಸಿದರು.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಬೋಧಿಸುವವರನ್ನು ಕಳುಹಿಸದೆಹೋದರೆ, ಅವರು ಶುಭಸಂದೇಶವನ್ನು ಬೋಧಿಸುವುದಾದರೂ ಹೇಗೆ? “ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ,” ಎಂದು ಪವಿತ್ರಗ್ರಂಥದಲ್ಲೇ ಬರೆಯಲಾಗಿದೆ.


ಬಳಿಕ ಅವರಿಗೆ, “ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ.


ಆಗ ದೂತನು ಆ ಮಹಿಳೆಯರಿಗೆ, “ಹೆದರಬೇಡಿ, ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆ. ಅವರು ಇಲ್ಲಿಲ್ಲ;


ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು