Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:14 - ಕನ್ನಡ ಸತ್ಯವೇದವು C.L. Bible (BSI)

14 “ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ಮನುಷ್ಯರೊಳಗೆ ಸಮಾಧಾನ ದೇವರು ಅವರಿಗೆ ಒಲಿಯುತ್ತಾನೆ ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಮೇಲಿನಲೋಕಗಳಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ” ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 “ಎಗ್ದಮ್ ವೈಲ್ಯಾ ಸರ್‍ಗಾತ್ ದೆವಾಕ್ ಮಹಿಮಾ ಹೊಂವ್ದಿ, ಅನಿ ಹ್ಯಾ ಜಿಮ್ನಿರ್ ತೆನಿ ಸಾಂಗಲ್ಲ್ಯಾ ಸರ್ಕೆ ಜಿವನ್ ಕರ್‍ತಲ್ಯಾಂಚ್ಯಾ ವಾಂಗ್ಡಾ ಅಸಲ್ಲ್ಯಾಕ್ನಿ ಶಾಂತಿ ಹೊಂವ್ದಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:14
36 ತಿಳಿವುಗಳ ಹೋಲಿಕೆ  

ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.


“ಸರ್ವೇಶ್ವರನ ನಾಮದಲಿ ಬರುವ ಅರಸನಿಗೆ ಜಯಜಯವಾಗಲಿ! ಶಾಂತಿ ಸ್ವರ್ಗದಲಿ, ಮಹಿಮೆ ಮಹೋನ್ನತದಲಿ!” ಎಂದು ಜಯಘೋಷ ಮಾಡುತ್ತಿದ್ದರು.


ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.


ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು I ನಮ್ಮ ಕಾಲುಗಳನ್ನೂರಿಸಿ ನಡೆಯಲು ಶಾಂತಿಪಥದೊಳು II


ಇದಲ್ಲದೆ, ಸ್ವರ್ಗ, ಭೂಮಿ, ಪಾತಾಳಗಳಲ್ಲೂ ಸಮುದ್ರದಲ್ಲೂ ಇರುವ ಸಮಸ್ತ ಸೃಷ್ಟಿಗಳು ಹೀಗೆ ಹಾಡುವುದನ್ನು ಕೇಳಿಸಿಕೊಂಡೆ : “ಸಿಂಹಾಸನದಲ್ಲಿ ಕುಳಿತವನಿಗೆ, ಯಜ್ಞಕುರಿಮರಿಯಾದಾತನಿಗೆ ಸಲ್ಲಲಿ ಯುಗಯುಗಾಂತರಕ್ಕೆ ಘನಮಾನ, ಗೌರವ, ಪರಾಕ್ರಮ, ಮತ್ತು ಮಹಿಮೆ.”


ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.


ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


ನೀವು ನನಗೆ ಕೊಟ್ಟ ಕಾರ್ಯವನ್ನು ನಾನು ಮಾಡಿ ಮುಗಿಸಿ ನಿಮ್ಮ ಮಹಿಮೆಯನ್ನು ಜಗತ್ತಿಗೆಲ್ಲ ತೋರ್ಪಡಿಸಿದೆನು.


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.


ಆಗ ಪವಿತ್ರಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು. ಅಲ್ಲದೆ, “ನೀನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.


ಆದರೆ ಕರುಣಾಮಯ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿ,


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ಆತನೇ ನಮಗೆ ಶಾಂತಿದಾತನು, ಅಸ್ಸೀರಿಯದವರು ನಮ್ಮ ಮೇಲೆ ದಾಳಿಮಾಡಿ ಆಕ್ರಮಣ ಮಾಡುವಾಗ, ಅವರಿಗೆ ವಿರುದ್ಧ ಏಳುಮಂದಿ ಪಾಲಕರನ್ನು ಹಾಗೂ ಎಂಟುಮಂದಿ ಪುರುಷೋತ್ತಮರನ್ನು ನೇಮಿಸುವೆನು.


ತಕ್ಷಣವೇ ಆ ದೂತನ ಸಂಗಡ ಸ್ವರ್ಗದ ದೂತಪರಿವಾರವೊಂದು ಕಾಣಿಸಿಕೊಂಡಿತು.


ದೇವದೂತರು ಸ್ವರ್ಗಕ್ಕೆ ಹಿಂದಿರುಗಿದ ಮೇಲೆ ಕುರುಬರು, ‘ಬನ್ನಿ, ಸರ್ವೇಶ್ವರ ನಮಗೆ ತಿಳಿಸಿದ ಘಟನೆಯನ್ನು ನೋಡಲು ಈಗಲೇ ಬೆತ್ಲೆಹೇಮಿಗೆ ಹೋಗೋಣ,’ ಎಂದು ಒಬ್ಬರಿಗೆ ಒಬ್ಬರು ಹೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು