Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:2 - ಕನ್ನಡ ಸತ್ಯವೇದವು C.L. Bible (BSI)

2 ಮೊಟ್ಟ ಮೊದಲನೆಯ ಆ ಜನಗಣತಿ, ಕುರೇನ್ಯನು ಸಿರಿಯ ನಾಡಿಗೆ ರಾಜ್ಯಪಾಲನಾಗಿದ್ದಾಗ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದು ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ನಡೆದ ಮೊದಲನೆಯ ಜನಗಣತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕುರೇನ್ಯನು ಸುರಿಯಕ್ಕೆ ಅಧಿಪತಿಯಾಗಿದ್ದಾಗ ಈ ಮೊದಲನೆಯ ಖಾನೆಷುಮಾರಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇದು ಮೊಟ್ಟಮೊದಲನೆಯ ಜನಗಣತಿಯಾಗಿತ್ತು. ಕುರೇನ್ಯನು ಸಿರಿಯ ದೇಶದ ರಾಜ್ಯಪಾಲನಾಗಿದ್ದಾಗ ಇದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕುರೇನ್ಯನು ಸಿರಿಯ ಪ್ರಾಂತಕ್ಕೆ ಅಧಿಪತಿಯಾಗಿದ್ದಾಗ, ಈ ಜನಗಣತಿಯು ಮೊದಲನೆಯ ಸಾರಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕ್ವಿರಿನಸ್ ಸಿರಿಯಾಚೊ ಮೊಟೊ ಅದಿಕಾರಿ ಹೊವ್ನ್ ಹೊತ್ತ್ಯಾ ತನ್ನಾ ಹೊಲ್ಲಿ ಪಯ್ಲಿಚಿ ಮೆಜ್ನಿ ಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:2
9 ತಿಳಿವುಗಳ ಹೋಲಿಕೆ  

ಅದು ತಿಬೇರಿಯಸ್ ಚಕ್ರವರ್ತಿಯ ಆಡಳಿತದ ಹದಿನೈದನೆಯ ವರ್ಷ. ಆ ಕಾಲದಲ್ಲಿ ಜುದೇಯ ಪ್ರಾಂತ್ಯಕ್ಕೆ ಪೊನ್ಸಿಯುಸ್ ಪಿಲಾತನು ರಾಜ್ಯಪಾಲನಾಗಿದ್ದನು. ಗಲಿಲೇಯ ಪ್ರಾಂತ್ಯಕ್ಕೆ ಹೆರೋದನೂ ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೆ ಇವನ ತಮ್ಮನಾದ ಫಿಲಿಪ್ಪನೂ ಮತ್ತು ಅಬಿಲೇನೆ ಪ್ರಾಂತ್ಯಕ್ಕೆ ಲುಸಾನಿಯನೂ ಸಾಮಂತರಾಗಿದ್ದರು.


ಅನಂತರ ರಾಜನೂ ರಾಜ್ಯಪಾಲನೂ ಬೆರ್ನಿಸಳೂ ಅವರ ಸಂಗಡ ಕುಳಿತಿದ್ದವರೆಲ್ಲರೂ ಮೇಲಕ್ಕೆದ್ದರು.


“ಮಹಾಪ್ರಭುಗಳಾದ ರಾಜ್ಯಪಾಲ ಫೆಲಿಕ್ಸ್ ಅವರ ಸನ್ನಿಧಾನಕ್ಕೆ - ಕ್ಲಾಡಿಯಲೂಸಿಯನು ಮಾಡುವ ಪ್ರಣಾಮಗಳು.


ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.


ತಾನೊಬ್ಬ ಪ್ರವಾದಿಯೆಂದು ನಟಿಸುತ್ತಿದ್ದ ಯೆಹೂದ್ಯ ಅವನು; ಮಾತ್ರವಲ್ಲ, ಅಲ್ಲಿಯ ರಾಜ್ಯಪಾಲನಾಗಿದ್ದ ಸೆರ್ಗ್ಯಪೌಲನ ಪರಿವಾರಕ್ಕೆ ಸೇರಿದ್ದನು. ಈ ರಾಜ್ಯಪಾಲನೊಬ್ಬ ಜ್ಞಾನಿ. ಇವನು ದೇವರವಾಕ್ಯವನ್ನು ಕೇಳಲಪೇಕ್ಷಿಸಿ ಬಾರ್ನಬ ಮತ್ತು ಸೌಲರನ್ನು ಆಹ್ವಾನಿಸಿದನು.


ಅನಂತರ ಜನಗಣತಿಯ ಕಾಲದಲ್ಲಿ ಗಲಿಲೇಯದ ಯೂದ ಎಂಬವನು ಪ್ರಸಿದ್ಧಿಗೆ ಬಂದ. ತನ್ನೆಡೆಗೆ ಹಲವರನ್ನು ಆಕರ್ಷಿಸಿಕೊಂಡ. ಅವನೂ ಹತನಾದ. ಹಿಂಬಾಲಕರೆಲ್ಲರೂ ಚದರಿಹೋದರು.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ಆ ಕಾಲದಲ್ಲಿ ಚಕ್ರವರ್ತಿ ಔಗುಸ್ತನು ತನ್ನ ಸಾಮ್ರಾಜ್ಯದಲ್ಲೆಲ್ಲಾ ಜನಗಣತಿಯಾಗಬೇಕೆಂದು ಆಜ್ಞೆ ಹೊರಡಿಸಿದನು.


ಆಗ ಎಲ್ಲರೂ ತಮ್ಮ ಹೆಸರನ್ನು ದಾಖಲೆ ಮಾಡಿಸಿಕೊಳ್ಳಲು ತಮ್ಮ ತಮ್ಮ ಊರುಗಳಿಗೆ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು