Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:33 - ಕನ್ನಡ ಸತ್ಯವೇದವು C.L. Bible (BSI)

33 ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳನ್ನು ಕೇಳಿ ತಂದೆತಾಯಿಗಳು ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳಿಗೆ ಅದರ ತಂದೆತಾಯಿಗಳು ಆಶ್ಚರ್ಯಪಡುತ್ತಿರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆ ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳಿಗೆ ಅದರ ತಂದೆತಾಯಿಗಳು ಆಶ್ಚರ್ಯಪಡುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಸಿಮೆಯೋನನು ಮಗುವಿನ ಕುರಿತಾಗಿ ಹೇಳಿದ ಮಾತುಗಳನ್ನು ಕೇಳಿ ತಂದೆತಾಯಿಗಳಿಗೆ ಆಶ್ಚರ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಶಿಶುವಿನ ವಿಷಯವಾಗಿ ಸಿಮೆಯೋನನು ಹೇಳಿದ ಮಾತುಗಳಿಗೆ ಶಿಶುವಿನ ತಂದೆತಾಯಿಗಳು ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಸಿಮಾವ್ ಪೊರಾಂಚ್ಯಾ ವಿಶಯಾತ್ ಹೆ ಸಗ್ಳೆ ಸಾಂಗ್ತಲೆ ಬಗುನ್, ಪೊರಾಚೆ ಬಾಯ್ ಬಾಬಾ ಅಜಾಪ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:33
8 ತಿಳಿವುಗಳ ಹೋಲಿಕೆ  

ತಂದೆತಾಯಿಗಳು ಮಗನನ್ನು ಅಲ್ಲಿ ಕಂಡು ವಿಸ್ಮಯಗೊಂಡರು. ಆಗ ತಾಯಿಯು, “ಕಂದಾ, ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಪಟ್ಟು ನಿನ್ನನ್ನು ಹುಡುಕಾಡಿದೆವಲ್ಲಾ,” ಎಂದಳು.


ಇಗೋ, ನನ್ನನ್ನೂ ನನಗೆ ಸ್ವಾಮಿ ದಯಪಾಲಿಸಿರುವ ಮಕ್ಕಳನ್ನೂ ನೋಡು. ಸಿಯೋನ್ ಶಿಖರದಲ್ಲಿ ವಾಸವಾಗಿರುವ ಸೇನಾಧೀಶ್ವರಸ್ವಾಮಿಯೇ ಇಸ್ರಯೇಲರಿಗೆ ನೀಡುವ ಸೂಚನೆಗಳು ಹಾಗೂ ಜೀವಂತ ಸಂಕೇತಗಳು ನಾವೇ ಆಗಿದ್ದೇವೆ.


ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ಯೇಸುಸ್ವಾಮಿ ತಮ್ಮನ್ನು ಸುತ್ತುವರಿದಿದ್ದ ಜನರಿಗೆ ಇನ್ನೂ ಬೋಧನೆ ಮಾಡುತ್ತಿದ್ದರು. ಆಗ ಅವರ ತಾಯಿ ಮತ್ತು ಸಹೋದರರು ಬಂದು ಅವರೊಡನೆ ಮಾತನಾಡಬಯಸಿ ಹೊರಗೆ ನಿಂತಿದ್ದರು.


ದೇವರ ಮಹತ್ವವನ್ನು ಕಂಡ ಎಲ್ಲರೂ ಆಶ್ಚರ್ಯಚಕಿತರಾದರು. ಯೇಸುಸ್ವಾಮಿ ಮಾಡಿದ ಸಕಲ ಮಹತ್ಕಾರ್ಯಗಳನ್ನು ಕುರಿತು ಜನರೆಲ್ಲರೂ ಸೋಜಿಗಪಡುತ್ತಿರುವಲ್ಲಿ, ಶಿಷ್ಯರಿಗೆ,


ಯೇಸು ಕೊಟ್ಟ ಈ ಉತ್ತರಕ್ಕೆ ಬೆರಗಾಗಿ ಆ ಗೂಢಚಾರರು ಬಾಯಿ ಮುಚ್ಚಿಕೊಂಡರು. ಜನರ ಮುಂದೆ, ಯೇಸುವಿನ ಮಾತುಗಳಲ್ಲಿ ತಪ್ಪು ಕಂಡುಹಿಡಿಯಲು ಅವರಿಂದ ಸಾಧ್ಯವಾಗಲಿಲ್ಲ.


ಕುರುಬರು ಹೇಳಿದ ವಿಷಯವನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು