Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:34 - ಕನ್ನಡ ಸತ್ಯವೇದವು C.L. Bible (BSI)

34 ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ - ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವದಕ್ಕೂ ಅನೇಕರು ಏಳುವದಕ್ಕೂ ಕಾರಣನಾಗಿರುವನು; ಮತ್ತು ಜನರು ಎದುರು ಮಾತಾಡುವದಕ್ಕೆ ಗುರುತಾಗಿರುವನು; ಹೀಗೆ ಬಹುಜನರ ಅಂತರಂಗದ ವಿಚಾರಗಳು ಬೈಲಿಗೆ ಬಂದಾವು; ಇದಕ್ಕೆ ಈತನು ಹುಟ್ಟಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅನಂತರ ಸಿಮೆಯೋನನು ಅವರನ್ನು ಆಶೀರ್ವದಿಸಿ, ಶಿಶುವಿನ ತಾಯಿ ಮರಿಯಳಿಗೆ, “ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವುದಕ್ಕೂ ಏಳುವುದಕ್ಕೂ ಈ ಮಗು ನೇಮಕವಾಗಿದೆ, ಜನರು ಎದುರು ಮಾತನಾಡುವುದಕ್ಕೆ ಈ ಮಗು ಗುರುತಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಸಿಮಾವಾನ್ ತೆಂಕಾ ಆಶಿರ್ವಾದ್ ದಿಲ್ಯಾನ್‍, ಅನಿ ಮರಿಕ್, ಹ್ಯೊ ಪೊರ್ ದೆವಾನ್ ಧಾಡಲ್ಲಿ ಎಕ್ ವಳಕ್ ಹೊತಾ ಇಸ್ರಾಯೆಲಾತ್ಲ್ಯಾ ಸುಮಾರ್ ಲೊಕಾಕ್ನಿ ಪಡುಕ್ ಅನಿ ಉಟುಕ್, ಕಾರನ್ ಹೊತಾ. ಖರೆ ಸುಮಾರ್ ಲೊಕಾ ಹೆಚ್ಯಾ ವಿಶಯಾತ್ ಹುರ್‍ಪಾಟಿ ಬೊಲ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:34
38 ತಿಳಿವುಗಳ ಹೋಲಿಕೆ  

ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.


ಅಷ್ಟೇ ಅಲ್ಲದೆ, ಆ ಕಲ್ಲಿನ ಮೇಲೆ ಬೀಳುವವನು ಛಿದ್ರಛಿದ್ರನಾಗುವನು. ಯಾವನ ಮೇಲೆ ಆ ಕಲ್ಲು ಬೀಳುವುದೋ ಅವನು ಜಜ್ಜಿಹೋಗುವನು’.”


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ಕ್ರಿಸ್ತಯೇಸುವಿನ ನಾಮದ ನಿಮಿತ್ತ ನಿಂದೆ ಅವಮಾನಗಳಿಗೆ ಗುರಿಯಾದರೆ ನೀವು ಧನ್ಯರು! ಮಹಿಮಾನ್ವಿತ ದೇವರ ಆತ್ಮವು ನಿಮ್ಮಲ್ಲಿ ನೆಲಸಿರುವುದು.


ಆಶೀರ್ವದಿಸುವವನು, ಆಶೀರ್ವಾದ ಪಡೆದವನಿಗಿಂತ ದೊಡ್ಡವನು ಎನ್ನುವುದು ನಿರ್ವಿವಾದ.


ಆದ್ದರಿಂದಲೇ ಅವರು ಎಡವುಕಲ್ಲನ್ನು ಎಡವಿಬಿದ್ದರು.


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


ಈ ವ್ಯಕ್ತಿ ಒಂದು ದೊಡ್ಡ ಪೀಡೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಕಲಹವೆಬ್ಬಿಸುತ್ತಾನೆ. ಅಲ್ಲದೆ, ‘ನಜರೇನ’ ಎಂಬ ಕುಪ್ರಸಿದ್ಧ ಪಂಥದ ಒಬ್ಬ ಮುಖಂಡನೂ ಆಗಿದ್ದಾನೆ.


ಅವರನ್ನು ಅಲ್ಲಿ ಕಾಣದಿರಲು ಯಾಸೋನನನ್ನೂ ಕೆಲವು ಭಕ್ತವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುತಂದು, “ಎಲ್ಲೆಲ್ಲೂ ಅಲ್ಲೋಲ ಕಲ್ಲೋಲ ಎಬ್ಬಿಸಿದ ಆ ವ್ಯಕ್ತಿಗಳು ಈಗ ನಮ್ಮ ನಗರಕ್ಕೂ ಬಂದಿದ್ದಾರೆ.


ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಯೇಸು ಸಬ್ಬತ್ತಿನ ನಿಯಮವನ್ನು ಮುರಿದುದೇ ಅಲ್ಲದೆ, ದೇವರನ್ನು ತನ್ನ ಪಿತನೆಂದು ಹೇಳಿಕೊಳ್ಳುತ್ತಾ, ತನ್ನನ್ನೇ ದೇವರಿಗೆ ಸರಿಸಮ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಅವರನ್ನು ಕೊಲ್ಲಲು ಮತ್ತಷ್ಟು ಹವಣಿಸಿದರು.


ಕೇಡನ್ನು ಮಾಡುವವನಿಗೆ ಬೆಳಕೆಂದರೆ ಆಗದು. ತನ್ನ ದುಷ್ಕೃತ್ಯಗಳು ಬಯಲಾಗಬಾರದೆಂದು ಅವನು ಬೆಳಕಿನ ಬಳಿಗೆ ಸುಳಿಯುವುದೂ ಇಲ್ಲ.


“ಸ್ವಾಮೀ, ಆ ಮೋಸಗಾರ ಬದುಕಿದ್ದಾಗ, ‘ಮೂರು ದಿನಗಳಾದ ಮೇಲೆ ನಾನು ಪುನರ್ಜೀವಂತನಾಗಿ ಏಳುವೆನು,’ ಎಂದು ಹೇಳಿದ್ದು ನಮಗೆ ಜ್ಞಾಪಕದಲ್ಲಿದೆ.


ಯೇಸುಸ್ವಾಮಿ ತಮ್ಮನ್ನು ಸುತ್ತುವರಿದಿದ್ದ ಜನರಿಗೆ ಇನ್ನೂ ಬೋಧನೆ ಮಾಡುತ್ತಿದ್ದರು. ಆಗ ಅವರ ತಾಯಿ ಮತ್ತು ಸಹೋದರರು ಬಂದು ಅವರೊಡನೆ ಮಾತನಾಡಬಯಸಿ ಹೊರಗೆ ನಿಂತಿದ್ದರು.


ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು.


ಇಗೋ, ನನ್ನನ್ನೂ ನನಗೆ ಸ್ವಾಮಿ ದಯಪಾಲಿಸಿರುವ ಮಕ್ಕಳನ್ನೂ ನೋಡು. ಸಿಯೋನ್ ಶಿಖರದಲ್ಲಿ ವಾಸವಾಗಿರುವ ಸೇನಾಧೀಶ್ವರಸ್ವಾಮಿಯೇ ಇಸ್ರಯೇಲರಿಗೆ ನೀಡುವ ಸೂಚನೆಗಳು ಹಾಗೂ ಜೀವಂತ ಸಂಕೇತಗಳು ನಾವೇ ಆಗಿದ್ದೇವೆ.


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಕರ್ತನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳಿದುಕೊಂಡು ಅವರನ್ನು ಆಶೀರ್ವದಿಸಿದನು.


ಬಳಿಕ ಜೋಸೆಫನು ತನ್ನ ತಂದೆ ಯಕೋಬನನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು. ಯಕೋಬನು ಫರೋಹನನ್ನು ಆಶೀರ್ವದಿಸಿದನು.


“ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!”


ಈ ಮೆಲ್ಕಿಸದೇಕನು ಸಾಲೇಮ್ ನಗರದ ರಾಜನೂ ಮಹೋನ್ನತ ದೇವರ ಯಾಜಕನೂ ಆಗಿದ್ದನು. ಶತ್ರುರಾಜರನ್ನು ಗೆದ್ದು ಹಿಂದಿರುಗುತ್ತಿದ್ದ ಅಬ್ರಹಾಮನನ್ನು ಈತನು ಎದುರುಗೊಂಡು ಆಶೀರ್ವದಿಸಿದನು.


ಆದರೆ ನೀನು ಅನುಸರಿಸುವ ಪಂಥದ ವಿರುದ್ಧ ಎಲ್ಲೆಲ್ಲೂ ಜನರು ಮಾತನಾಡುತ್ತಿದ್ದಾರೆಂದು ಬಲ್ಲೆವು. ಆದುದರಿಂದ ನಿನ್ನ ಅಭಿಪ್ರಾಯವನ್ನು ನಿನ್ನ ಬಾಯಿಂದಲೇ ಕೇಳಬಯಸುತ್ತೇವೆ,” ಎಂದರು.


ಎಲ್ಕಾನನಿಗೆ ಏಲಿ, “ನೀನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟ ಈ ಮಗನಿಗೆ ಬದಲಾಗಿ ಈ ಹನ್ನಳಿಂದ ನಿನಗೆ ಬೇರೆ ಮಕ್ಕಳಾಗಲಿ!” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು.


(ನಿನ್ನ ವಿಷಯದಲ್ಲಿ ಹೇಳುವುದಾದರೆ, ದುಃಖವೆಂಬ ಅಲಗೊಂದು ನಿನ್ನ ಅಂತರಂಗವನ್ನು ಸೀಳುವುದು,)” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು