Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:37 - ಕನ್ನಡ ಸತ್ಯವೇದವು C.L. Bible (BSI)

37 ಅವಳಿಗೆ ಸುಮಾರು ಎಂಬತ್ತನಾಲ್ಕು ವರ್ಷ ವಯಸ್ಸು. ಮಹಾದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರನ್ನು ಆರಾಧಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿಹಗಲೂ ದೇವರ ಸೇವೆಯನ್ನು ಮಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ತನ್ನ ಉಳಿದ ಜೀವಮಾನವೆಲ್ಲಾ ವಿಧವೆಯಾಗಿದ್ದ ಆಕೆಗೆ ಈಗ ಎಂಭತ್ತನಾಲ್ಕು ವರ್ಷ ವಯಸ್ಸಾಗಿತ್ತು. ಅನ್ನಳು ಯಾವಾಗಲೂ ದೇವಾಲಯದಲ್ಲಿಯೇ ಇದ್ದಳು. ಆಕೆ ಬೇರೆಲ್ಲಿಗೂ ಹೋಗುತ್ತಿರಲಿಲ್ಲ. ಆಕೆ ಉಪವಾಸ ಮಾಡುತ್ತಾ ಮತ್ತು ಹಗಲಿರುಳು ಪ್ರಾರ್ಥಿಸುತ್ತಾ ದೇವರನ್ನು ಆರಾಧಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅವಳು ಎಂಬತ್ತನಾಲ್ಕು ವರ್ಷ ವಿಧವೆಯಾಗಿದ್ದು, ದೇವಾಲಯವನ್ನು ಬಿಟ್ಟುಹೋಗದೆ ಉಪವಾಸಗಳಿಂದಲೂ ಪ್ರಾರ್ಥನೆಗಳಿಂದಲೂ ರಾತ್ರಿ ಹಗಲೂ ಆರಾಧನೆ ಮಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಅತ್ತಾ ತಿ ಆಂಯ್ಸಿರ್ ಚಾರ್ ವರ್ಸಾಚಿ ವಿಧವ್. ದಿಸ್ ಅನಿ ರಾತ್ ದೆವಾಚಿ ಭಜನ್ ಕರುನ್ಗೆತ್ ಉಪಾಸ್, ಮಾಗ್ನಿ ಕರುನ್ಗೆತ್ ತಿ ದೆವಾಚ್ಯಾ ಗುಡಿತುಚ್ ರ್‍ಹಾಯ್. ದೆವಾಚಿ ಗುಡಿ ಸೊಡುನ್ ತಿ ಕಡೆಕ್ ಜಾಯ್ನಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:37
16 ತಿಳಿವುಗಳ ಹೋಲಿಕೆ  

ದಿಕ್ಕಿಲ್ಲದೆ ಒಬ್ಬಂಟಿಗಳಾಗಿರುವ ವಿಧವೆ ದೇವರ ಮೇಲೆ ಭರವಸೆಯಿಟ್ಟು ಹಗಲಿರುಳು ಪ್ರಾರ್ಥನೆಗಳಲ್ಲೂ ವಿಜ್ಞಾಪನೆಗಳಲ್ಲೂ ನಿರತಳಾಗಿರುತ್ತಾಳೆ.


ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು.


ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ಅಂತೆಯೇ ಅವರು ಉಪವಾಸವಿದ್ದು, ಪ್ರಾರ್ಥನೆಮಾಡಿ, ಇವರಿಬ್ಬರ ಮೇಲೆ ಹಸ್ತನಿಕ್ಷೇಪಮಾಡಿ ಕಳುಹಿಸಿಕೊಟ್ಟರು.


ಹನ್ನೆರಡು ಗೋತ್ರಗಳ ನಮ್ಮ ಜನರು, ಹಗಲಿರುಳು ದೇವರನ್ನು ಆರಾಧಿಸುತ್ತಾ, ಆ ವಾಗ್ದಾನ ಈಡೇರಿಯೇ ತೀರುವುದೆಂದು ನಂಬಿದ್ದಾರೆ. ಈ ನಂಬಿಕೆಗಾಗಿಯೇ, ಓ ರಾಜರೇ, ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡಿದ್ದಾರೆ.


ಹಗಲೆಲ್ಲ ಕೂಗಿಕೊಂಡರೂ ನೀ ಬರಲಿಲ್ಲವಲ್ಲಾ I ಇರುಳೆಲ್ಲಾ ಮೊರೆಯಿಟ್ಟರೂ ನೆಮ್ಮದಿಯಿಲ್ಲವಲ್ಲಾ II


‘ಇರುವರು ದೇವರ ಸಿಂಹಾಸನದ ಸಮ್ಮುಖದಲ್ಲೇ ಆರಾಧಿಪರಾತನನು ಹಗಲಿರುಳು ದೇವಾಲಯದಲ್ಲೇ ಸಂರಕ್ಷಿಪನಾತನು ಅವರನ್ನು ಗುಡಾರದಂತೆ.


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


“ಯೊವಾನ್ನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆ ಮಾಡುತ್ತಾರೆ. ಅದರಂತೆಯೇ, ಫರಿಸಾಯರ ಶಿಷ್ಯರೂ ಮಾಡುತ್ತಾರೆ. ನಿನ್ನ ಶಿಷ್ಯರಾದರೋ ತಿಂದು ಕುಡಿಯುವುದರಲ್ಲಿಯೇ ಇದ್ದಾರೆ,” ಎಂದು ಕೆಲವರು ಮೂದಲಿಸಿದರು.


ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ನಿನ್ನ ಮಂದಿರದಲಿ ವಾಸಿಸುವವರು ಧನ್ಯರು I ನಿರಂತರವು ನಿನ್ನ ಗುಣಗಾನ ಮಾಡುವರವರು II


ಸರ್ವೇಶ್ವರನಂಥ ಪರಮಪಾವನನಿಲ್ಲ ನಿನ್ನ ಹೊರತು ದೇವಾ, ಬೇರೆ ದೇವನಿಲ್ಲ; ನಮ್ಮ ದೇವನಿಗೆ ಸಮನಾದ ಆಶ್ರಯದುರ್ಗವಿಲ್ಲ.


ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆಮಾಡುತ್ತಿದ್ದ ಮಹಿಳೆಯರು ಕೊಟ್ಟ ತಾಮ್ರದ ದರ್ಪಣಗಳಿಂದ ನೀರಿನ ತೊಟ್ಟಿಯನ್ನೂ ಅದರ ಪೀಠವನ್ನೂ ಮಾಡಿದನು.


ಅವರಿರುವರು ಪ್ರಭುವಿನಾಲಯದಲೆ ನೆಟ್ಟ ಸಸಿಗಳಂತೆ I ನಮ್ಮ ದೇವಾಂಗಳದಿ ಹುಲುಸಾಗಿ ಬೆಳೆವ ಮರಗಳಂತೆ I ಫಲಿಸುವರು ಮುಪ್ಪಿನಲೂ, ಶೋಭಿಸುವರು ಪಚ್ಚೆಪಸಿರಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು