Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:38 - ಕನ್ನಡ ಸತ್ಯವೇದವು C.L. Bible (BSI)

38 ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆಕೆ ಅದೇ ಗಳಿಗೆಯಲ್ಲಿ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇವಿುನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತಾಡುವವಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಅವಳು ಅದೇ ಸಮಯದಲ್ಲಿ ಅಲ್ಲಿಗೆ ಬಂದು, ದೇವರಿಗೆ ಸ್ತೋತ್ರ ಸಲ್ಲಿಸಿ ದೇವರು ಜೆರುಸಲೇಮಿಗೆ ದಯಪಾಲಿಸುವ ಬಿಡುಗಡೆಯನ್ನು ಎದುರುನೋಡುತ್ತಿದ್ದ ಜನರಿಗೆ ಯೇಸುವಿನ ವಿಷಯವಾಗಿ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆ ಸಂದರ್ಭದಲ್ಲಿ ಅನ್ನಳು ಬಂದು, ದೇವರನ್ನು ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಶಿಶುವಿನ ವಿಷಯವಾಗಿ ಮಾತನಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತ್ಯಾ ಎಳಾರ್ ತಿ ಪೊರಾಂಚ್ಯಾ ಬಾಯ್ ಬಾಬಾಕ್ಡೆ ಯೆಲಿ, ದೆವಾಕ್ ಧನ್ಯವಾದ್ ದಿಲಿನ್, ಅನಿ ಜೆರುಜಲೆಮಾಚ್ಯಾ ಸುಟ್ಕೆಚಿ ವಾಟ್ ಬಗುನ್ಗೆತ್ ಹೊತ್ತ್ಯಾಂಚ್ಯಾಕ್ಡೆ, ತೆನಿ ಹ್ಯಾ ಪೊರಾಂಚ್ಯಾ ವಿಶಯಾತ್ ಬೊಲ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:38
11 ತಿಳಿವುಗಳ ಹೋಲಿಕೆ  

ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


ವರ್ಣಿಸಲು ಅಸಾಧ್ಯವಾದ ದೇವರ ಕೃಪಾವರಕ್ಕಾಗಿ ಅವರಿಗೆ ಸ್ತುತಿಸ್ತೋತ್ರ ಸಲ್ಲಲಿ!


ಇಸ್ರಯೇಲನ್ನು ಬಿಡುಗಡೆಮಾಡುವ ಉದ್ಧಾರಕ ಅವರೇ ಎಂದು ನಾವು ನಂಬಿಕೊಂಡಿದ್ದೆವು. ಇಷ್ಟುಮಾತ್ರವಲ್ಲ, ಇದೆಲ್ಲಾ ಸಂಭವಿಸಿ ಇಂದಿಗೆ ಮೂರು ದಿನಗಳು ಆಗಿವೆ.


ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ತನಗೆ ಕೊಡಿಸಬೇಕೆಂದು ಪಿಲಾತನನ್ನು ಕೇಳಿಕೊಂಡನು. ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದ ಈತನು ಯೆಹೂದ್ಯರ ನ್ಯಾಯಸಭೆಯ ಸನ್ಮಾನಿತ ಸದಸ್ಯನಾಗಿದ್ದನು.


ಇದಲ್ಲದೆ ಅಲ್ಲಿ ಅಶೇರನ ವಂಶಕ್ಕೆ ಸೇರಿದ ಫನುವೇಲನ ಮಗಳಾದ ಅನ್ನಳೆಂಬ ಪ್ರವಾದಿನಿಯಿದ್ದಳು. ಅವಳು ಮುದಿಪ್ರಾಯದವಳು, ಮದುವೆಯಾಗಿ ಏಳು ವರ್ಷ ಮಾತ್ರ ಗಂಡನೊಡನೆ ಬಾಳಿ ವಿಧವೆಯಾದವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು