ಲೂಕ 2:4 - ಕನ್ನಡ ಸತ್ಯವೇದವು C.L. Bible (BSI)4 ಜೋಸೆಫನು ದಾವೀದನ ಮನೆತನದವನು ಹಾಗೂ ಗೋತ್ರದವನು. ಆದುದರಿಂದ ಅವನೂ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಹೊರಟು ಜುದೇಯ ನಾಡಿನ ಬೆತ್ಲೆಹೇಮೆಂಬ ದಾವೀದನ ಊರಿಗೆಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194-5 ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4-5 ಯೋಸೇಫನು ಸಹ ತಾನು ದಾವೀದನ ಮನೆತನದವನೂ ಗೋತ್ರದವನೂ ಆಗಿದ್ದದರಿಂದ ಹೆಸರು ಬರಸಿಕೊಳ್ಳುವದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಮರಿಯಳ ಸಂಗಡ ಗಲಿಲಾಯಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದ್ದರಿಂದ ಯೋಸೇಫನು ಗಲಿಲಾಯದಲ್ಲಿನ ನಜರೇತ್ ಎಂಬ ಊರಿನಿಂದ ಹೊರಟು ಜುದೇಯದಲ್ಲಿನ ಬೆತ್ಲೆಹೇಮ್ ಎಂಬ ಊರಿಗೆ ಹೋದನು. ಯೋಸೇಫನು ದಾವೀದನ ಮನೆತನದವನಾಗಿದ್ದುದರಿಂದ ದಾವೀದನ ಊರಾದ ಬೆತ್ಲೆಹೇಮಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೋಸೇಫನು ದಾವೀದನ ಕುಟುಂಬದವನೂ ವಂಶದವನೂ ಆಗಿದ್ದರಿಂದ, ಅವನು ಸಹ ಗಲಿಲಾಯ ಪ್ರಾಂತದ ನಜರೇತೆಂಬ ಪಟ್ಟಣದಿಂದ ಯೂದಾಯ ಪ್ರಾಂತದ ಬೇತ್ಲೆಹೇಮ್ ಎಂಬ ದಾವೀದನ ಪಟ್ಟಣಕ್ಕೆ ಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತೆಚೆಸಾಟ್ನಿ ಜುಜೆಬಿ ಗಾಲಿಲಿಯಾಚ್ಯಾ ನಜರೆತ್ ಮನ್ತಲ್ಯಾ ಗಾವಾತ್ನಾ, ದಾವಿದ್ ರಾಜಾಚ್ಯಾ ಉಪಾಜಲ್ಲ್ಯಾ ಗಾವಾಕ್, ಜುದೆಯಾಚ್ಯಾ ಬೆತ್ಲೆಹೆಮಾಕ್ ಗೆಲೊ.ತೊ ದಾವಿದಾಚ್ಯಾ ಘರಾನ್ಯಾಚೊ, ತಸೆ ಮನುನ್ ತೊ ಥೈ ಗೆಲೊ. ಅಧ್ಯಾಯವನ್ನು ನೋಡಿ |
ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.