Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:46 - ಕನ್ನಡ ಸತ್ಯವೇದವು C.L. Bible (BSI)

46 ಮೂರು ದಿನಗಳ ಮೇಲೆ ಮಹಾದೇವಾಲಯದಲ್ಲಿ ಅವರನ್ನು ಕಂಡಾಗ ಅಲ್ಲಿ ಯೇಸು, ಬೋಧಕರ ಮಧ್ಯೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಅವರಿಗೆ ಪ್ರಶ್ನೆಹಾಕುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಮೂರು ದಿನಗಳಾದ ಮೇಲೆ ಆತನನ್ನು ಕಂಡುಕೊಂಡರು. ಯೇಸುವು ದೇವಾಲಯದಲ್ಲಿ ಧಾರ್ಮಿಕ ಉಪದೇಶಕರೊಡನೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಮತ್ತು ಅವರಿಗೆ ಪ್ರಶೆಗಳನ್ನು ಕೇಳುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಮೂರು ದಿವಸಗಳಾದ ಮೇಲೆ ಯೇಸುವನ್ನು ದೇವಾಲಯದಲ್ಲಿ ಕಂಡರು. ಬೋಧಕರ ನಡುವೆ ಕೂತುಕೊಂಡು, ಬಾಲಕ ಯೇಸು ಅವರ ಮಾತುಗಳನ್ನು ಕೇಳಿಸಿಕೊಳ್ಳುತ್ತಾ, ಪ್ರಶ್ನಿಸುತ್ತಾ ಇರುವುದನ್ನು ಅವರು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ತಿನ್ವ್ಯಾ ದಿಸಿ ಜುದೆವಾಂಚ್ಯಾ ಮಾಸ್ತರಾಂಚ್ಯಾ ವಾಂಗ್ಡಾ ಬೊಲುನ್ಗೆತ್ ಅನಿ ತೆಂಕಾ ಪರಸ್ನೆ ಇಚಾರುಂಗೆತ್ ದೆವಾಚ್ಯಾ ಗುಡಿತ್ ಬಸಲ್ಲೊ, ತೆಂಕಾ ಗಾವ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:46
13 ತಿಳಿವುಗಳ ಹೋಲಿಕೆ  

ಒಮ್ಮೆ ಯೇಸುಸ್ವಾಮಿ ಬೋಧನೆಮಾಡುತ್ತಾ ಇದ್ದಾಗ, ಫರಿಸಾಯರೂ ಧರ್ಮಶಾಸ್ತ್ರಜ್ಞರೂ ಅವರ ಹತ್ತಿರ ಕುಳಿತಿದ್ದರು. ಇವರು ಗಲಿಲೇಯ ಹಾಗೂ ಜುದೇಯ ಪ್ರಾಂತ್ಯದ ಊರೂರುಗಳಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಬಂದಿದ್ದರು. ಗುಣಪಡಿಸುವಂತಹ ದೈವಶಕ್ತಿ ಯೇಸುವಿನಲ್ಲಿತ್ತು.


ಆಗ ಆ ಸಭಾಸದಸ್ಯರಲ್ಲಿ ಒಬ್ಬನಾದ ಗಮಲಿಯೇಲ್ ಎಂಬ ಫರಿಸಾಯನು ಅಲ್ಲಿದ್ದನು. ಅವನೊಬ್ಬ ಗೌರವಾನ್ವಿತ ಮತ್ತು ಧರ್ಮಪಂಡಿತ. ಅವನು ಎದ್ದುನಿಂತು ಪ್ರೇಷಿತರನ್ನು ಸ್ವಲ್ಪಹೊತ್ತು ಸಭೆಯಿಂದ ಹೊರಗೆ ಕಳುಹಿಸುವಂತೆ ಹೇಳಿ


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು.


ಯಾರೊಬ್ಬಾಮನೂ ಜನರೆಲ್ಲರೂ ಅರಸ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನ ಪುನಃ ಅವನ ಬಳಿಗೆ ಬಂದರು.


ಅವನು, “ನೀವು ಈಗ ಹೋಗಿ ಮೂರು ದಿನಗಳಾದ ನಂತರ ಮತ್ತೆ ಬನ್ನಿ,” ಎಂದು ಉತ್ತರಕೊಟ್ಟನು. ಜನರು ಹೊರಟುಹೋದರು.


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಜೆರುಸಲೇಮಿಗೆ ಹೋಗಬೇಕಾಗಿದೆ; ಅಲ್ಲಿ ಸಭಾಪ್ರಮುಖರಿಂದಲೂ ಕಠಿಣವಾದ ಯಾತನೆಯನ್ನು ಅನುಭವಿಸಿ, ಮರಣಕ್ಕೆ ತುತ್ತಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ" ಎಂದು ಅಂದಿನಿಂದಲೂ ಒತ್ತಿ ಹೇಳಲಾರಂಭಿಸಿದರು.


ಬಾಲಕನ ಪ್ರಶ್ನೋತ್ತರಗಳನ್ನು ಕೇಳುತ್ತಿದ್ದ ಎಲ್ಲರೂ ಆತನ ಜ್ಞಾನವನ್ನು ಕಂಡು ಬೆರಗಾದರು.


ಆಗ ಯೇಸು, “ಇಸ್ರಯೇಲಿನ ಹೆಸರಾಂತ ಬೋಧಕನಾದ ನಿನಗೇ ಇದು ಅರ್ಥವಾಗಲಿಲ್ಲವೇ?


ತಮ್ಮ ಮಾತಿನ ಅರ್ಥವಾಗಲಿ, ತಮ್ಮ ವಾದದ ತಿರುಳಾಗಲಿ ಅವರಿಗೆ ತಿಳಿಯದಿದ್ದರೂ ಅವರು ಧರ್ಮೋಪದೇಶಕರಾಗಲು ಹವಣಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು