Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:14 - ಕನ್ನಡ ಸತ್ಯವೇದವು C.L. Bible (BSI)

14 ಆದರೆ ಗೇಣಿದಾರರು ಯಜಮಾನನ ಮಗನನ್ನು ಕಂಡದ್ದೇ ತಡ, ‘ತೋಟಕ್ಕೆ ಇವನೇ ಉತ್ತರಾಧಿಕಾರಿ. ಇವನನ್ನು ಮುಗಿಸಿಬಿಡೋಣ; ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ [ಕಳುಹಿಸಿದಾಗ] ಆ ಒಕ್ಕಲಿಗರು ಅವನನ್ನು ಕಂಡು - ಇವನೇ ಬಾಧ್ಯಸ್ಥನು; ಇವನನ್ನು ಕೊಂದುಹಾಕೋಣ, ಇವನ ಸ್ವಾಸ್ತ್ಯ ನಮ್ಮದಾಗಲಿ ಎಂದು ಒಬ್ಬರಸಂಗಡಲೊಬ್ಬರು ಮಾತಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ರೈತರು ಮಗನನ್ನು ನೋಡಿ, ಒಬ್ಬರಿಗೊಬ್ಬರು, ‘ಇವನು ಧಣಿಯ ಮಗನು. ಈ ಹೊಲ ಇವನಿಗೇ ಸೇರುತ್ತದೆ. ನಾವು ಇವನನ್ನು ಕೊಂದರೆ, ಆಗ ಹೊಲವೆಲ್ಲಾ ನಮ್ಮದಾಗುತ್ತದೆ’ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಆದರೆ ಗೇಣಿಗೆದಾರರು ಅವನನ್ನು ಕಂಡಾಗ ತಮ್ಮತಮ್ಮೊಳಗೆ, ‘ಇವನೇ ಬಾಧ್ಯಸ್ಥನು. ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ, ತ್ಯಾ ಲೆಕಾಕ್ ಬಗಟಲ್ಲೆಚ್ ತೆ ಗುತ್ಕ್ಯಾಚೆ ಎಕಾಮೆಕಾಕ್ನಿ “ಹ್ಯೊ ಹ್ಯಾ ಮಳ್ಯಾಚ್ಯಾ ಮಾಲ್ಕಾಚೊ ಲೆಕ್, ಯೆವಾ ಹೆಕಾ ಜಿವಾನಿಚ್ ಮಾರುಂವ್ವಾ, ಅನಿ ಮಾನಾ ಹಿ ಸಗ್ಳಿ ಅಸ್ತಿ ಅಮ್ಕಾಚ್ ಹೊತಾ” ಮನುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:14
20 ತಿಳಿವುಗಳ ಹೋಲಿಕೆ  

ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಕೊಲ್ಲಿಸಲು ಆಲೋಚನೆ ಮಾಡುತ್ತಿದ್ದರು; ಜನರ ಭಯ ಅವರಿಗೆ ಇದ್ದುದರಿಂದ ಅದಕ್ಕೆ ಗುಟ್ಟಾದ ಮಾರ್ಗವನ್ನು ಹುಡುಕುತ್ತಿದ್ದರು.


ತಮ್ಮನ್ನೇ ಕುರಿತು ಈ ಸಾಮತಿಯನ್ನು ಹೇಳಿದ್ದಾರೆಂದು ಅರಿತುಕೊಂಡ ಧರ್ಮಶಾಸ್ತ್ರಿಗಳು ಮತ್ತು ಮುಖ್ಯಯಾಜಕರು ಅಲ್ಲೇ ಯೇಸುವನ್ನು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು.


ಇದನ್ನು ಕೇಳಿದ ಅವರೆಲ್ಲರೂ ತಮ್ಮತಮ್ಮೊಳಗೆ ಸಮಾಲೋಚಿಸುತ್ತಾ ಸಂವಾದಿಸುತ್ತಾ, “ದೇವರಿಂದ ಬಂದಿತು, ಎಂದು ನಾವು ಹೇಳಿದರೆ, ‘ನೀವೇಕೆ ಆತನನ್ನು ನಂಬಲಿಲ್ಲ?’ ಎಂದು ಕೇಳುವನು;


ಪ್ರತಿನಿತ್ಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದರು. ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಜಾಪ್ರಮುಖರೂ ಅವರನ್ನು ಕೊಲೆಮಾಡಲು ಹವಣಿಸುತ್ತಿದ್ದರು.


'ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ?’ “ ಎಂದು ಕೇಳಿದರು.


ತಾವು ರೊಟ್ಟಿ ತಂದಿಲ್ಲವಾದ ಕಾರಣ ಯೇಸು ಹೀಗೆ ಹೇಳುತ್ತಿದ್ದಾರೆಂದು ಶಿಷ್ಯರು ತಮ್ಮತಮ್ಮಲ್ಲೇ ಮಾತನಾಡಿಕೊಳ್ಳಲಾರಂಭಿಸಿದರು.


ಮಾಡುವೆನವನನು ಜೇಷ್ಠಪುತ್ರನನ್ನಾಗಿ I ಭೂರಾಜರುಗಳೊಳು ಅತ್ಯುನ್ನತನನ್ನಾಗಿ I


ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II


ಫಲಕೊಡುವ ಕಾಲ ಹತ್ತಿರವಾದಾಗ, ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಆಳುಗಳನ್ನು ಗೇಣಿದಾರರ ಬಳಿಗೆ ಕಳುಹಿಸಿದ.


ಕಡೆಗೆ ತೋಟದ ಯಜಮಾನನು, ‘ಏನುಮಾಡಲಿ? ನನ್ನ ಮುದ್ದುಮಗನನ್ನೇ ಕಳುಹಿಸುತ್ತೇನೆ; ಬಹುಶಃ ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡ.


ಅಂತೆಯೇ ಅವನನ್ನು ತೋಟದಿಂದ ಹೊರಕ್ಕೆ ದಬ್ಬಿಕೊಂಡು ಹೋಗಿ ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು