Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:19 - ಕನ್ನಡ ಸತ್ಯವೇದವು C.L. Bible (BSI)

19 ತಮ್ಮನ್ನೇ ಕುರಿತು ಈ ಸಾಮತಿಯನ್ನು ಹೇಳಿದ್ದಾರೆಂದು ಅರಿತುಕೊಂಡ ಧರ್ಮಶಾಸ್ತ್ರಿಗಳು ಮತ್ತು ಮುಖ್ಯಯಾಜಕರು ಅಲ್ಲೇ ಯೇಸುವನ್ನು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಶಾಸ್ತ್ರಿಗಳೂ ಮಹಾಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡಿದರು; ಆದರೆ ಜನರಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯ ನಾಯಕರು ಕೇಳಿದರು. ತಮ್ಮನ್ನು ಕುರಿತಾಗಿಯೇ ಆತನು ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದುಕೊಂಡರು. ಆದ್ದರಿಂದ ಅವರು ಆಗಲೇ ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಅವರು ಜನರಿಗೆ ಭಯಪಟ್ಟು ಆತನನ್ನು ಬಂಧಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದೇ ಗಳಿಗೆಯಲ್ಲಿ ನಿಯಮ ಬೋಧಕರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸುವುದಕ್ಕೆ ಹವಣಿಸಿದರು. ಏಕೆಂದರೆ ಯೇಸು ತಮಗೆ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದ್ದಾರೆಂದು ಅವರು ತಿಳಿದುಕೊಂಡರು. ಆದರೂ ಅವರು ಜನರಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖಾಯ್ದೆ ಶಿಕ್ವುತಲ್ಯಾ ಲೊಕಾನಿ, ಅನಿ ಮುಖ್ಯ ಯಾಜಕಾನಿ, ಜೆಜುಕ್ ತ್ಯಾಚ್ ಜಾಗ್ಯಾರ್ ಧರುಚೆ ಮನುನ್ ಖಟ್ಪಟ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಹಿ ಕಾನಿ ತೆನಿ ತೆಂಚ್ಯಾಚ್ ವೈಲಿ ಸಾಂಗ್ಲ್ಯಾನ್ ಮನುನ್ ತೆಂಕಾ ಕಳಲ್ಲೆ, ಖರೆ ತೆಂಚೆನ್ ಹೊವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ತೆನಿ ಲೊಕಾಕ್ನಿ ಭಿಂಯಾಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:19
6 ತಿಳಿವುಗಳ ಹೋಲಿಕೆ  

ಆದರೆ ಗೇಣಿದಾರರು ಯಜಮಾನನ ಮಗನನ್ನು ಕಂಡದ್ದೇ ತಡ, ‘ತೋಟಕ್ಕೆ ಇವನೇ ಉತ್ತರಾಧಿಕಾರಿ. ಇವನನ್ನು ಮುಗಿಸಿಬಿಡೋಣ; ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಮಾಡಿಕೊಂಡರು.


ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟುಹೋದರು.


ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ನಡೆದ ಈ ಸಂಗತಿಯನ್ನು ಕೇಳಿ ಯೇಸುವನ್ನು ಕೊಲ್ಲಿಸುವ ಮಾರ್ಗವನ್ನು ಹುಡುಕತೊಡಗಿದರು. ಏಕೆಂದರೆ, ಯೇಸುವನ್ನು ಕಂಡರೆ ಅವರಿಗೆ ಭಯವಿತ್ತು. ಕಾರಣ - ಜನರೆಲ್ಲರೂ ಅವರ ಬೋಧನೆಗೆ ಮಾರುಹೋಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು