Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:20 - ಕನ್ನಡ ಸತ್ಯವೇದವು C.L. Bible (BSI)

20 ಆದುದರಿಂದ ಸೂಕ್ತ ಸಂದರ್ಭ ಹುಡುಕತೊಡಗಿದರು. ಯೇಸುವನ್ನು ರಾಜ್ಯಪಾಲನ ವಶಕ್ಕೂ ನ್ಯಾಯಾಧಿಕಾರಕ್ಕೂ ಒಪ್ಪಿಸುವ ಉದ್ದೇಶದಿಂದ ಗೂಢಚಾರರನ್ನು ಕಳುಹಿಸಿದರು. ಇವರು ನಿಷ್ಕಪಟಿಗಳಂತೆ ನಟಿಸುತ್ತಾ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಕ್ಕೂ ಒಪ್ಪಿಸಬೇಕೆಂದು ಹೊಂಚಿನೋಡುವವರಾಗಿ ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ಹಿಡಿಯುವದಕ್ಕೆ [ಆತನ ಬಳಿಗೆ] ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ಯೇಸುವನ್ನು ಹೊಂಚಿ ನೋಡುತ್ತಾ, ಮಾತಿನಲ್ಲಿ ಅವರನ್ನು ಸಿಕ್ಕಿಸುವಂತೆ ಅಧಿಪತಿಗೂ ಅಧಿಕಾರಕ್ಕೂ ಒಪ್ಪಿಸಿಕೊಡಲು, ನೀತಿವಂತರೆಂದು ನಟಿಸುವ ಗೂಢಚಾರರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತಸೆ ಮನುನ್ ತೆನಿ ಬರ್‍ಯಾ ಮಾನ್ಸಾಂಚ್ಯಾ ಸರ್ಕೆ ಕರುನ್ ದಾಕ್ವುತಲ್ಯಾ ಉಲ್ಲ್ಯಾಸ್ಯಾ ಮಾನ್ಸಾಕ್ನಿ ಪಯ್ಸೆ ದಿವ್ನ್ ತಯಾರ್ ಕರ್‍ಲ್ಯಾನಿ, ಅನಿ ಜೆಜುಕ್ ಇಚಾರುಕ್‍ಲಾವುನ್, ಗೊಂದ್ಳುನ್ ಘಾಲುನ್ ಚುಕ್ ಕರಿ ಸರ್ಕೆ ಕರುಕ್ ‍ಲಾವುನ್, ಮಾನಾ ರೊಮಾಚ್ಯಾ ಅದಿಕಾರ್‍ಯಾಚ್ಯಾ ಹಾತಿತ್ ತೆಕಾ ಧರುನ್ ದಿ ಸರ್ಕೆ ಕರುಚೆ ಮನುನ್ ಅವ್ಕಾಸ್ ಹುಡ್ಕುಕ್ ಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:20
20 ತಿಳಿವುಗಳ ಹೋಲಿಕೆ  

ಅವರ ಮಾತಿನಲ್ಲಿ ಏನಾದರೂ ತಪ್ಪು ಕಂಡು ಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.


ಅಂತೆಯೇ ಯೇಸುವಿಗೆ ಬೇಡಿ ಹಾಕಿಸಿ, ಅವರನ್ನು ರಾಜ್ಯಪಾಲ ಪಿಲಾತನ ಬಳಿಗೆ ಕರೆದೊಯ್ದು ಅವನ ವಶಕ್ಕೆ ಒಪ್ಪಿಸಿದರು.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.


“ಮುದುರಿಕೊಳ್ಳುತ್ತಿದ್ದರಾ ಎದುರಾಳಿಗಳು ಅವರ ಮುಂದೆ I ಅಳಿಯದೆ ಉಳಿದುಕೊಳ್ಳುತ್ತಿತ್ತು ಅವರಿಗಾದ ದಂಡನೆ ಮುಗಿವಿಲ್ಲದೆ, II


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಯೇಸು ಕೊಟ್ಟ ಈ ಉತ್ತರಕ್ಕೆ ಬೆರಗಾಗಿ ಆ ಗೂಢಚಾರರು ಬಾಯಿ ಮುಚ್ಚಿಕೊಂಡರು. ಜನರ ಮುಂದೆ, ಯೇಸುವಿನ ಮಾತುಗಳಲ್ಲಿ ತಪ್ಪು ಕಂಡುಹಿಡಿಯಲು ಅವರಿಂದ ಸಾಧ್ಯವಾಗಲಿಲ್ಲ.


ಅವನನ್ನು ಸಬ್ಬತ್‍ದಿನದಲ್ಲಿ ಗುಣಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪುಹೊರಿಸಬಹುದೆಂಬ ಉದ್ದೇಶದಿಂದ ಕೆಲವರು ಹೊಂಚುಹಾಕುತ್ತಿದ್ದರು.


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II


ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II


ಅವನು ತೆಕೋವದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆಕಳುಹಿಸಿ ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ನಟಿಸಿ ಶೋಕವಸ್ತ್ರಗಳನ್ನು ಧರಿಸಿಕೋ;


ಹೀಗಿರಲು ಮುಖ್ಯಾಧಿಕಾರಿಗಳು ಮತ್ತು ಪ್ರಾಂತ್ಯಾಧಿಪತಿಗಳು ರಾಜ್ಯಾಡಳಿತದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವೂ ದೊರಕಲಿಲ್ಲ. ಅವನಲ್ಲಿ ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ಅಷ್ಟು ನಂಬಿಕಸ್ತನಾಗಿದ್ದನು! ಅವನಲ್ಲಿ ಯಾವ ಅಕ್ರಮವಾಗಲಿ, ಆಲಸ್ಯವಾಗಲಿ ಕಾಣಸಿಗಲಿಲ್ಲ.


“ಬೋಧಕರೇ, ನೀವು ಹೇಳುವುದು ಹಾಗೂ ಬೋಧಿಸುವುದು ನ್ಯಾಯಬಧ್ಧವಾಗಿಯೇ ಇದೆ. ಮುಖದಾಕ್ಷಿಣ್ಯವಿಲ್ಲದೆ ಸತ್ಯಕ್ಕನುಸಾರವಾಗಿ ಧರ್ಮಮಾರ್ಗವನ್ನು ಬೋಧಿಸುತ್ತೀರಿ. ಇದನ್ನು ನಾವು ಚೆನ್ನಾಗಿ ಬಲ್ಲೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು