Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:22 - ಕನ್ನಡ ಸತ್ಯವೇದವು C.L. Bible (BSI)

22 ಹೀಗಿರುವಲ್ಲಿ, ನಾವು ರೋಮ್‍ ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಅಲ್ಲವೋ ತಿಳಿಸಿ,” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?” ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕೈಸರನಿಗೆ ಕಂದಾಯ ಕೊಡುವದು ಸರಿಯೋ ಸರಿಯಲ್ಲವೋ ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈಗ ಹೇಳು, ನಾವು ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ತಪ್ಪೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ನಮಗೆ ಮೋಶೆಯ ನಿಯಮಕ್ಕೆ ಅನುಸಾರವಾದದ್ದೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅಮಿ ರೊಮಾಚ್ಯಾ ಚಕ್ರವರ್ತಿಕ್ ತೆರ್‍ಗಿ ದಿತಲೆ, ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್, ಸಮಾ ಕಾಯ್ ಚುಕ್? ಮನುನ್ ಅಮ್ಕಾ ಸಾಂಗ್ ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:22
14 ತಿಳಿವುಗಳ ಹೋಲಿಕೆ  

ನಮ್ಮ ಪಾಪದ ನಿಮಿತ್ತ ಅಧೀನರಾಗಿಸಿದಿರಿ ಅನ್ಯರಾಜರಿಗೆ ಈ ನಾಡಿನ ಸಿರಿಸಂಪತ್ತು ಹರಿದುಹೋಗುತ್ತಿದೆ ಆ ಅರಸರಿಗೆ ನಮ್ಮೊಡಲು, ದನಕರುಗಳು, ಈಡಾಗಿವೆ ಅವರ ದಬ್ಬಾಳಿಕೆಗೆ ಅಕಟಕಟ, ನಾವು ಸಿಕ್ಕಿಕೊಂಡಿದ್ದೇವೆ, ಮಹಾಸಂಕಟಕೆ!”


ಅನಂತರ ಜನಗಣತಿಯ ಕಾಲದಲ್ಲಿ ಗಲಿಲೇಯದ ಯೂದ ಎಂಬವನು ಪ್ರಸಿದ್ಧಿಗೆ ಬಂದ. ತನ್ನೆಡೆಗೆ ಹಲವರನ್ನು ಆಕರ್ಷಿಸಿಕೊಂಡ. ಅವನೂ ಹತನಾದ. ಹಿಂಬಾಲಕರೆಲ್ಲರೂ ಚದರಿಹೋದರು.


ಬಳಿಕ ಮನೆಗೆ ಬಂದಾಗ, ಅವನು ಮಾತೆತ್ತುವುದಕ್ಕೆ ಮೊದಲೇ ಯೇಸು, “ಸಿಮೋನಾ, ನಿನಗೆ ಏನನ್ನಿಸುತ್ತದೆ? ಇಹಲೋಕದ ರಾಜರು ಕಂದಾಯವನ್ನಾಗಲಿ, ತೆರಿಗೆಯನ್ನಾಗಲಿ ಯಾರಿಂದ ವಸೂಲಿಮಾಡುತ್ತಾರೆ? ತಮ್ಮ ಪುತ್ರರಿಂದಲೋ ಅಥವಾ ಪರರಿಂದಲೋ?" ಎಂದು ಕೇಳಿದರು. “ಪರರಿಂದಲೇ,” ಎಂದು ಪೇತ್ರನು ಉತ್ತರಕೊಟ್ಟನು.


ಮತ್ತೆ ಕೆಲವರು “ಸರಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಮ್ಮ ಹೊಲ, ತೋಟಗಳ ಮೇಲೆ ಸಾಲ ತೆಗೆದುಕೊಳ್ಳಬೇಕಾಯಿತು;


ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ; ನಮ್ಮ ಪಾಪಗಳ ನಿಮಿತ್ತ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಸಿಕ್ಕಿಬಿದ್ದೆವು. ಈಗಿರುವಂತೆ, ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿ ಆದೆವು.


ಆ ಪಟ್ಟಣವನ್ನೂ ಅದರ ಪೌಳಿಗೋಡೆಗಳನ್ನೂ ಕಟ್ಟುವುದು ಮುಗಿಸಿದರೆ ಅವರು ಕಪ್ಪ, ತೆರಿಗೆ, ಸುಂಕಗಳನ್ನು ಕೊಡುವುದಿಲ್ಲ; ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.


ಆಗ ನೀವು ಅಗತ್ಯವಾಗಿ ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಂಡವನನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೆ ಹೊರತು ಅನ್ಯದೇಶದವನನ್ನು ನೇಮಿಸಬಾರದು.


“ಬೋಧಕರೇ, ನೀವು ಹೇಳುವುದು ಹಾಗೂ ಬೋಧಿಸುವುದು ನ್ಯಾಯಬಧ್ಧವಾಗಿಯೇ ಇದೆ. ಮುಖದಾಕ್ಷಿಣ್ಯವಿಲ್ಲದೆ ಸತ್ಯಕ್ಕನುಸಾರವಾಗಿ ಧರ್ಮಮಾರ್ಗವನ್ನು ಬೋಧಿಸುತ್ತೀರಿ. ಇದನ್ನು ನಾವು ಚೆನ್ನಾಗಿ ಬಲ್ಲೆವು.


ಅವರ ಕುಯುಕ್ತಿಯನ್ನು ಅರಿತುಕೊಂಡ ಯೇಸು,


ಅಲ್ಲಿ ಆತನ ಮುಂದೆ, “ಇವನು ರೋಮ್ ಚಕ್ರವರ್ತಿಗೆ ತೆರಿಗೆ ಕೊಡುವುದನ್ನು ನಿಷೇಧಿಸುತ್ತಾನೆ. ತಾನೇ ‘ಕ್ರಿಸ್ತ, ಒಬ್ಬ ಅರಸ,’ ಎಂದು ಹೇಳಿಕೊಳ್ಳುತ್ತಾನೆ. ಹೀಗೆ ನಮ್ಮ ಜನತೆ ದಂಗೆಯೇಳುವಂತೆ ಪ್ರಚೋದಿಸುತ್ತಾನೆ. ಇದನ್ನೆಲ್ಲಾ ನಾವು ಕಂಡುಹಿಡಿದಿದ್ದೇವೆ,” ಎಂದು ದೂರತೊಡಗಿದರು.


ಆದ್ದರಿಂದ ಸಲ್ಲಿಸಬೇಕಾದುದನ್ನು ಅವರಿಗೆ ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ವಿಧೇಯತೆಯೋ ಅವರಿಗೆ ವಿಧೇಯತೆಯನ್ನು, ಯಾರಿಗೆ ಗೌರವವೋ ಅವರಿಗೆ ಗೌರವವನ್ನು ಸಲ್ಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು