Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:23 - ಕನ್ನಡ ಸತ್ಯವೇದವು C.L. Bible (BSI)

23 ಅವರ ಕುಯುಕ್ತಿಯನ್ನು ಅರಿತುಕೊಂಡ ಯೇಸು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೇಸು ಅವರ ಕುಯುಕ್ತಿಯನ್ನು ಅರಿತುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆತನು ಅವರ ಕುಯುಕ್ತಿಯನ್ನು ಕಂಡುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಈ ಜನರು ತನಗೆ ಮೋಸಮಾಡಲು ಪ್ರಯತ್ನಿಸುತ್ತಿದ್ದಾರೆಂದು ಯೇಸುವಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಯೇಸು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ಜೆಜುಕ್ ಹೆನಿ ಕಾಯ್ ಖೆಳ್ ಖೆಳುಲ್ಯಾತ್ ಮನುನ್ ಕಳ್ಳೆ , ತಸೆ ಮನುನ್ ತೆಂಕಾ ತೆನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:23
16 ತಿಳಿವುಗಳ ಹೋಲಿಕೆ  

ಇಹಲೋಕಪ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. “ದೇವರು ಜ್ಞಾನಿಗಳನ್ನು ಅವರ ಜಾಲದಲ್ಲಿಯೇ ಸಿಕ್ಕಿಸುವರು” ಎಂದೂ


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಅವರ ಪೈಕಿ ಕೆಲವರು ಪ್ರಭುವನ್ನು ಶೋಧಿಸಿದರು. ಪರಿಣಾಮವಾಗಿ ಸರ್ಪಗಳಿಂದ ನಾಶವಾದರು. ಅವರಂತೆ ಪ್ರಭುವನ್ನು ಶೋಧನೆಮಾಡುವುದು ನಮಗೆ ಬೇಡ.


ಆದುದರಿಂದ ಸೂಕ್ತ ಸಂದರ್ಭ ಹುಡುಕತೊಡಗಿದರು. ಯೇಸುವನ್ನು ರಾಜ್ಯಪಾಲನ ವಶಕ್ಕೂ ನ್ಯಾಯಾಧಿಕಾರಕ್ಕೂ ಒಪ್ಪಿಸುವ ಉದ್ದೇಶದಿಂದ ಗೂಢಚಾರರನ್ನು ಕಳುಹಿಸಿದರು. ಇವರು ನಿಷ್ಕಪಟಿಗಳಂತೆ ನಟಿಸುತ್ತಾ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಪ್ರಯತ್ನಿಸಿದರು.


ಯೇಸು ಅವರ ಆಲೋಚನೆಗಳನ್ನರಿತು ಬತ್ತಿದ ಕೈ ಉಳ್ಳವನಿಗೆ, “ಬಂದು ಇಲ್ಲಿ ನಿಲ್ಲು,” ಎಂದರು. ಅವನು ಎದ್ದುಬಂದು ನಿಂತನು.


ಯೇಸು ಅವರ ಆಲೋಚನೆಗಳನ್ನು ಗ್ರಹಿಸಿಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಆಲೋಚಿಸುತ್ತಾ ಇರುವುದೇನು?


ಯೇಸು ಅವರ ಕುತಂತ್ರವನ್ನು ಅರಿತುಕೊಂಡು, “ಕಪಟಿಗಳೇ, ನನ್ನನ್ನೇಕೆ ಪರೀಕ್ಷಿಸುತ್ತೀರಿ?


ತರುವಾಯ ಫರಿಸಾಯರು ಮತ್ತು ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸ್ವಾಮಿಯನ್ನು ಪರೀಕ್ಷಿಸುವ ದುರದ್ದೇಶದಿಂದ, “ನೀನು ದೇವರಿಂದ ಬಂದವನೆಂದು ಸೂಚಿಸಲು ಅದ್ಭುತವೊಂದನ್ನು ನಮಗೆ ಮಾಡಿತೋರಿಸು,” ಎಂದರು.


ನೋಡಿದರಾದರೂ ನನ್ನ ಮಹತ್ಕಾರ್ಯಗಳನು I ಅಲ್ಲವರು ಕೆಣಕಿದರು, ಪರಿಶೋಧಿಸಿದರು ನನ್ನನು II


ಹೀಗಿರುವಲ್ಲಿ, ನಾವು ರೋಮ್‍ ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಅಲ್ಲವೋ ತಿಳಿಸಿ,” ಎಂದು ಕೇಳಿದರು.


“ಒಂದು ನಾಣ್ಯವನ್ನು ತೋರಿಸಿರಿ. ಇದರಲ್ಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಕೇಳಿದರು. ಅದಕ್ಕೆ ಅವರು, “ರೋಮ್‍ ಚಕ್ರವರ್ತಿಯವು,” ಎಂದರು.


“ಎಲವೋ ಪಿಶಾಚಿಕೋರನೇ, ಸರ್ವಸನ್ಮಾರ್ಗಕ್ಕೆ ಶತ್ರು ನೀನು; ಎಲ್ಲಾ ತಂತ್ರ ಕುತಂತ್ರಗಳು ನಿನ್ನಲ್ಲಿ ತುಂಬಿವೆ. ಪ್ರಭುವಿನ ಸನ್ಮಾರ್ಗಕ್ಕೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ? ಇಗೋ, ಈಗ ಪ್ರಭುವಿನ ಶಾಪ ನಿನ್ನ ಮೇಲಿದೆ!


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು