Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:35 - ಕನ್ನಡ ಸತ್ಯವೇದವು C.L. Bible (BSI)

35 ಆದರೆ ಸತ್ತವರು ಪುನರುತ್ಥಾನ ಹೊಂದಿ ಮರುಲೋಕ ಜೀವನಕ್ಕೆ ಯೋಗ್ಯರಾದಾಗ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆ ಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಪುನರುತ್ಥಾನಕ್ಕೆ ಯೋಗ್ಯರಾದ ಕೆಲವು ಜನರು ಜೀವಂತವಾಗಿ ಎದ್ದುಬಂದು ಮತ್ತೆ ಜೀವಿಸುತ್ತಾರೆ. ಆ ಹೊಸ ಜೀವನದಲ್ಲಿ ಅವರು ಮದುವೆ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆದರೆ ಮುಂಬರುವ ಲೋಕದಲ್ಲಿ ಸತ್ತವರು ಪುನರುತ್ಥಾನವನ್ನು ಹೊಂದಿ, ಯೋಗ್ಯರೆಂದು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಖರೆ ,ಜಿ ಘೊಮನ್ಸಾ, ಅನಿ ಬಾಯ್ಕೊಮನ್ಸಾ ಮರಲ್ಲ್ಯಾತ್ನಾ ಝಿತ್ತೆ ಹೊವ್ಕ್ ಯೊಗ್ಯ್ ಹಾತ್, ಅನಿ ಝಿತ್ತೆ ಹೊವ್ನ್ ಉಟ್ತ್ಯಾತ್ ತ್ಯಾ ಎಳಾರ್ ತೆನಿ ನಗಿನ್ ಕರುನ್ ಘೆಯ್‌ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:35
13 ತಿಳಿವುಗಳ ಹೋಲಿಕೆ  

ನೀವು ಅನುಭವಿಸುತ್ತಿರುವುದೆಲ್ಲ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗೂ ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು.


ಹಾಗೆ ಕೇಳಿದವರೆಲ್ಲಾ ಸಮಾಧಿಯನ್ನು ಬಿಟ್ಟು ಎದ್ದುಬರುವರು; ಸಜ್ಜನರು ಸಜ್ಜೀವಕ್ಕಾಗಿ ಪುನರುತ್ಥಾನರಾಗುವರು, ದುರ್ಜನರು ದಂಡನಾ ತೀರ್ಪಿಗಾಗಿ ಪುನರುತ್ಥಾನ ಆಗುವರು.


ಯಾರಾದರೂ ನರಪುತ್ರನ ವಿರುದ್ಧ ಮಾತಾಡಿದರೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಇಹದಲ್ಲೇ ಆಗಲಿ, ಪರದಲ್ಲೇ ಆಗಲಿ ಕ್ಷಮೆ ದೊರಕದು.


ಮಾನವರು ಸಜ್ಜನರಾಗಿರಲಿ, ದುರ್ಜನರಾಗಿರಲಿ, ಪುನರುತ್ಥಾನ ಹೊಂದುವರೆಂದು ಇವರಂತೆಯೇ ನಾನು ದೇವರಲ್ಲಿ ನಂಬಿಕೆಯುಳ್ಳವನಾಗಿದ್ದೇನೆ.


ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು.


ವಿಶ್ವಾಸದಿಂದಲೇ ಮಹಿಳೆಯರು ಮೃತರಾಗಿದ್ದ ತಮ್ಮವರನ್ನು ಮರಳಿ ಜೀವಂತರಾಗಿ ಪಡೆದರು. ಕೆಲವರು ಇದಕ್ಕಿಂತ ಶ್ರೇಷ್ಠವಾದ ಪುನರುತ್ಥಾನವನ್ನು ಪಡೆಯುವ ಉದ್ದೇಶದಿಂದ ಬಿಡುಗಡೆಯನ್ನು ನಿರಾಕರಿಸಿ, ಹಿಂಸೆಬಾಧೆಗಳಿಗೆ ತುತ್ತಾಗಿ ಮರಣವನ್ನಪ್ಪಿದರು.


ಅದಕ್ಕೆ ಯೇಸು, “ನಿಮ್ಮದು ಎಂಥಾ ತಪ್ಪು ಅಭಿಪ್ರಾಯ! ಪವಿತ್ರಗ್ರಂಥವನ್ನು ಆಗಲಿ, ದೇವರ ಶಕ್ತಿಯನ್ನಾಗಲೀ ನೀವು ಅರ್ಥಮಾಡಿಕೊಂಡಿಲ್ಲ.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಅಭಿಪ್ರಾಯ ತಪ್ಪು. ಪವಿತ್ರಗ್ರಂಥವನ್ನಾಗಲಿ, ದೇವರ ಶಕ್ತಿಯನ್ನಾಗಲಿ ನೀವು ಅರ್ಥಮಾಡಿಕೊಂಡಿಲ್ಲ.


ಆಗ ಯೇಸು ಶಿಷ್ಯರೆಲ್ಲರನ್ನು ತನ್ನ ಬಳಿಗೆ ಕರೆದು, “ಪ್ರಜಾಧಿಪತಿಗಳು ಎನಿಸಿಕೊಳ್ಳುವವರು ಪ್ರಜೆಗಳ ಮೇಲೆ ದರ್ಪದಿಂದ ದೊರೆತನ ಮಾಡುತ್ತಾರೆ; ಜನನಾಯಕರು ಎನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನ ಮಾಡುತ್ತಾರೆ; ಇದು ನಿಮಗೆ ಗೊತ್ತು.


“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು