ಲೂಕ 20:9 - ಕನ್ನಡ ಸತ್ಯವೇದವು C.L. Bible (BSI)9 ಬಳಿಕ ಯೇಸುಸ್ವಾಮಿ ಜನರಿಗೆ ಈ ಸಾಮತಿಯನ್ನು ಹೇಳತೊಡಗಿದರು: “ಒಬ್ಬಾತ ಒಂದು ದ್ರಾಕ್ಷಿತೋಟ ಮಾಡಿಸಿದ. ಕಾರಣಾಂತರ ಅದನ್ನು ಗೇಣಿದಾರರಿಗೆ ವಹಿಸಿ, ದೀರ್ಘಕಾಲ ಹೊರನಾಡಿಗೆ ಪ್ರವಾಸ ಹೋದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದೇನಂದರೆ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ಮನುಷ್ಯನು ಒಂದು ದ್ರಾಕ್ಷಿತೋಟವನ್ನು ಮಾಡಿ ಅದನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟನು. ಬಳಿಕ ಅವನು ಅಲ್ಲಿಂದ ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದರು: “ಒಬ್ಬನು ದ್ರಾಕ್ಷಿಯ ತೋಟವನ್ನು ನೆಟ್ಟು, ಅದನ್ನು ರೈತರಿಗೆ ಗೇಣಿಗೆ ಕೊಟ್ಟು, ದೀರ್ಘಕಾಲ ದೂರದೇಶಕ್ಕೆ ಪ್ರವಾಸಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತನ್ನಾ ಜೆಜುನ್ ಲೊಕಾಕ್ನಿ ಹಿ ಕಾನಿ ಸಾಂಗಟ್ಲ್ಯಾನ್: ಎಗ್ದಾ ಎಕ್ ಮಾನುಸ್ ಹೊತ್ತೊ, ತೆನಿ ಎಕ್ ದರಾಕ್ಷಿಚೊ ಮಳೊ ಲಾವಲ್ಲ್ಯಾನ್,ಗುತ್ಕ್ಯಾನಿ ದಿಲ್ಯಾನ್ ಮಾನಾ ತೊ ಲೈ ದಿಸಾಸಾಟಿ ಘರ್ ಸೊಡುನ್ ಧುರ್‍ಲ್ಯಾ ಗಾಂವಾಕ್ ಗೆಲೊ, ಅಧ್ಯಾಯವನ್ನು ನೋಡಿ |