Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:16 - ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮ ತಂದೆತಾಯಿಗಳೇ, ಒಡಹುಟ್ಟಿದವರೇ, ಬಂಧುಮಿತ್ರರೇ, ನಿಮ್ಮನ್ನು ಪರಾಧೀನ ಮಾಡುವರು; ಮಾತ್ರವಲ್ಲ, ನಿಮ್ಮಲ್ಲಿ ಕೆಲವರನ್ನು ಕೊಂದುಹಾಕಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ತಂದೆತಾಯಿಗಳೂ ಅಣ್ಣತಮ್ಮಂದಿರೂ ಬಂಧುಬಾಂಧವರೂ ಸ್ನೇಹಿತರೂ ನಿಮ್ಮನ್ನು ಒಪ್ಪಿಸಿಕೊಡುವರು; ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿಮ್ಮ ತಂದೆತಾಯಿಗಳು, ಸಹೋದರರು, ಸಂಬಂಧಿಕರು ಮತ್ತು ಸ್ನೇಹಿತರು ಸಹ ನಿಮಗೆ ವಿರುದ್ಧವಾಗುವರು. ನಿಮ್ಮಲ್ಲಿ ಕೆಲವರನ್ನು ಅವರು ಕೊಲ್ಲುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ತಂದೆತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿತರೂ ನಿಮ್ಮನ್ನು ಹಿಡಿದುಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತುಮ್ಚ್ಯಾತ್ಲ್ಯಾ ಉಲ್ಲ್ಯಾಕ್ನಿ, ತುಮ್ಚೆ ಬಾಯ್-ಬಾಬಾ, ತುಮ್ಚಿ ಭಾವಾ, ತುಮ್ಚೆ ಸೊಯ್ರೆ, ಅನಿ ತುಮ್ಚಿ ದೊಸ್ತಾಚ್ ಧರುನ್ ದಿತ್ಯಾತ್, ಅನಿ ತುಮ್ಚ್ಯಾತ್ಲ್ಯಾ ಉಲ್ಲ್ಯಾತ್ನಿ ಜಿವಾನಿ ಮಾರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:16
14 ತಿಳಿವುಗಳ ಹೋಲಿಕೆ  

ಮಗನಿಗೆ ವಿರುದ್ಧವಾಗಿ ತಂದೆ, ಮಗಳಿಗೆ ವಿರುದ್ಧವಾಗಿ ತಾಯಿ, ಸೊಸೆಗೆ ವಿರುದ್ಧವಾಗಿ ಅತ್ತೆ, ಪರಸ್ಪರ ವಿರೋಧವಾಗಿ ವಿಂಗಡಿಸಿ ಹೋಗುವರು,” ಎಂದರು.


ಯಜ್ಞದ ಕುರಿಮರಿಯಾದಾತ ಐದನೆಯ ಮುದ್ರೆಯನ್ನು ಒಡೆದನು. ದೇವರ ಸಂದೇಶವನ್ನು ಸಾರಿದ ಪ್ರಯುಕ್ತ ಮತ್ತು ತಮ್ಮ ಪ್ರಾಮಾಣಿಕ ಸಾಕ್ಷ್ಯದ ಪ್ರಯುಕ್ತ ಹತರಾದವರ ಆತ್ಮಗಳು ಬಲಿಪೀಠದ ಕೆಳಗೆ ಇರುವುದನ್ನು ನಾನು ಕಂಡೆ.


ನಿಮ್ಮ ನಿಮ್ಮ ಗೆಳೆಯರ ವಿಷಯದಲ್ಲಿ ಎಚ್ಚರಿಕೆಯಾಗಿರಿ ಯಾರೇ ಆಗಲಿ, ತನ್ನ ಸಹೋದರನನ್ನೂ ನಂಬದಿರಲಿ. ಪ್ರತಿಯೊಬ್ಬ ಸೋದರನೂ ವಂಚಿಸುವುದರಲ್ಲಿ ಯಕೋಬನಿಗೆ ಸಮಾನ. ಒಬ್ಬೊಬ್ಬ ಗೆಳೆಯನೂ ತಿರುಗಾಡುತ್ತಾನೆ ಚಾಡಿಹೇಳುತ್ತಾ.


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ಯೊವಾನ್ನನ ಸಹೋದರ ಯಕೋಬನನ್ನು ಖಡ್ಗದಿಂದ ಕೊಲ್ಲಿಸಿದನು.


ಅವರು ತನ್ನ ಮೇಲೆ ಕಲ್ಲುಬೀರುತ್ತಿದ್ದಾಗ ಸ್ತೇಫನನು, “ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ಸಹೋದರ ಸಹೋದರನನ್ನೇ, ತಂದೆ ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು, ಅವರನ್ನು ಕೊಲ್ಲಿಸುವರು.


ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.”


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ನೀವು ನನ್ನವರು ಆದುದರಿಂದಲೇ ಎಲ್ಲರೂ ನಿಮ್ಮನ್ನು ದ್ವೇಷಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು