Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:23 - ಕನ್ನಡ ಸತ್ಯವೇದವು C.L. Bible (BSI)

23 ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಂದಿರ ಗೋಳೇನು! ಈ ನಾಡು ಮಹಾವಿಪತ್ತಿಗೆ ಈಡಾಗುವುದು. ಈ ಜನತೆ ದೈವಕೋಪಕ್ಕೆ ಗುರಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ದಿನಗಳಲ್ಲಿ ಬಸುರಿಯರಿಗೂ ಮೊಲೆಕೂಸಿರುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರಿಗೆ ಉಗ್ರದಂಡನೆಯೂ ಆಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಕಾಲದಲ್ಲಿ, ಗರ್ಭಿಣಿ ಸ್ತ್ರೀಯರಿಗೂ ಚಿಕ್ಕ ಕೂಸುಗಳಿರುವವರಿಗೂ ಬಹಳ ಗೋಳಾಟ ಇರುವುದು. ಏಕೆಂದರೆ ಈ ದೇಶವು ಮಹಾವಿಪತ್ತಿಗೆ ಈಡಾಗುವುದು. ದೇವರು ಈ ಜನರ (ಯೆಹೂದ್ಯರ) ವಿಷಯದಲ್ಲಿ ಕೋಪಗೊಂಡಿರುವುದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ! ದೇಶದಲ್ಲಿ ಈ ಜನರು ಮಹಾ ವಿಪತ್ತಿಗೂ ಕೋಪಕ್ಕೂ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತ್ಯಾ ದಿಸಾತ್ನಿ ಗರ್‍ವಾರ್ ಹೊತ್ತ್ಯಾ ಬಾಯ್ಕೊಮನ್ಸಿಂಚಿ, ಅನಿ ಬಾರಿಕ್ಲಿ ಪೊರಾ ಹೊತ್ತ್ಯಾ ಬಾಯ್ಕೊಮನ್ಸಿಂಚಿ ಗತ್ ಕಾಯ್ ಸಾಂಗು! ಹ್ಯಾ ಜಿಮ್ನಿರ್ ಲೈ ಮೊಟೊ ಸಂಕಟ್ ಯೆವ್ನ್ ಪಾವ್ತಾ, ಅನಿ ದೆವಾಚಿ ಶಿಕ್ಷಾ ಹ್ಯಾ ಲೊಕಾಂಚ್ಯಾ ವರ್‍ತಿ ಯೆವ್ನ್ ಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:23
18 ತಿಳಿವುಗಳ ಹೋಲಿಕೆ  

ಕಾಲವೊಂದು ಬರುವುದು; ಆಗ ಜನರು, ‘ಬಂಜೆಯರೇ ಭಾಗ್ಯವಂತರು! ಹೆರದವಳೇ, ಹಾಲೂಡಿಸದವಳೇ ಧನ್ಯಳು!’ ಎನ್ನುವರು.


ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಂದಿರ ಗೋಳೇನು!


ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಹಾಗೂ ಹಾಲೂಡಿಸುವ ತಾಯಂದಿರ ಗೋಳೇನು!


ಕರುಣಾಮಯಿಗಳಾದ ಹೆಂಗಳೆಯರು ತಮ್ಮ ಕಂದಮ್ಮಗಳನ್ನು ಸ್ವಂತ ಕೈಯಿಂದ ಬೇಯಿಸಿದರು. ನನ್ನ ಜನರ ಪರಿವಿನಾಶದ ಕಾಲದೊಳು ತಮ್ಮ ತಾಯಿಗಳಿಗೆ ತಿಂಡಿಯಾದರು ಆ ಹಸುಳೆಗಳು.


ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?


ಐಶ್ವರ್ಯವಂತರೇ, ಕೇಳಿ: ನಿಮಗೆ ಬರಲಿರುವ ಮಹಾಕಷ್ಟಗಳಿಗಾಗಿ ಕಣ್ಣೀರಿಡಿ, ಗೋಳಾಡಿರಿ.


ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.


ಕಾಲವು ಬರುವುದು. ಆಗ ಶತ್ರುಗಳು ನಿನ್ನ ಸುತ್ತಲೂ ಆಳ್ವೇಲಿಯೆಬ್ಬಿಸಿ, ಮುತ್ತಿಗೆ ಹಾಕಿ, ಎಲ್ಲೆಡೆಯೂ ನುಗ್ಗಿ,


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ಅಷ್ಟೇ ಅಲ್ಲದೆ, ಆ ಕಲ್ಲಿನ ಮೇಲೆ ಬೀಳುವವನು ಛಿದ್ರಛಿದ್ರನಾಗುವನು. ಯಾವನ ಮೇಲೆ ಆ ಕಲ್ಲು ಬೀಳುವುದೋ ಅವನು ಜಜ್ಜಿಹೋಗುವನು’.”


“ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು,” ಎಂದು ಅಲ್ಲಿದ್ದವರು ಉತ್ತರಕೊಟ್ಟರು.


“ದೇವರು ತಮ್ಮ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು - ಅದು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.”


“ಮಕ್ಕಳು ಹೇಳುವುದು ನಿನಗೆ ಕೇಳಿಸುತ್ತಿದೆಯೋ?” ಎಂದು ಕೋಪಾವೇಶದಿಂದ ಯೇಸುವನ್ನು ಪ್ರಶ್ನಿಸಿದರು. “ಹೌದು, ಕೇಳಿಸುತ್ತದೆ; ‘ಬಾಲಬಾಲೆಯರ ಬಾಯಿಂದಲೂ ಮೊಲೆಗೂಸುಗಳ ನಾಲಿಗೆಯಿಂದಲೂ ನಿಮಗೆ ಸರ್ವಸ್ತುತಿ ಸಲ್ಲುವಂತೆ ಮಾಡಿದ್ದೀರಿ’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಎಂದೂ ಓದಿಲ್ಲವೆ?” ಎಂದು ಉತ್ತರಿಸಿದರು.


ಇಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಒಬ್ಬನು ತಾನು ಇದ್ದ ಸ್ಥಿತಿಯಲ್ಲೇ ಇರುವುದು ಉತ್ತಮವೆಂದು ಭಾವಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು