Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:24 - ಕನ್ನಡ ಸತ್ಯವೇದವು C.L. Bible (BSI)

24 ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಕತ್ತಿಯ ಬಾಯಿಗೆ ಬೀಳುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಉಲ್ಲ್ಯಾಸ್ಯಾಕ್ನಿ ಚಾಕ್ವಾನಿ ತೊಡುನ್ ಮಾರುನ್ ಹೊತಾ, ಅನಿ ಹುರಲ್ಲ್ಯಾಕ್ನಿ , ಗುಲಾಮ್ ಕರುನ್ ದುಸ್ರ್ಯಾ-ದುಸ್ರ್ಯಾ ದೆಸಾಕ್ನಿ ಘೆವ್ನ್ ಜಾವ್ನ್ ಹೊತಾ, ಅನಿ ತೆಂಚೊ ಎಳ್ ರ್‍ಹಾಯ್ ಪತರ್ ಮಟ್ಲ್ಯಾರ್, ಜುದೆವ್ ನ್ಹಯ್ ಹೊತ್ತಿ ಲೊಕಾ ಜೆರುಜಲೆಮಾಚೆ ತುಕ್ಡೆ-ತುಕ್ಡೆ ಕರುನ್ ಟಾಕ್ತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:24
16 ತಿಳಿವುಗಳ ಹೋಲಿಕೆ  

ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ಆಲಯದ ಹೊರ ಅಂಗಳವನ್ನು ಅಳತೆಮಾಡಬೇಡ; ಅದನ್ನು ಬಿಟ್ಟುಬಿಡು. ಅದನ್ನು ಜನರಿಗೆ ಬಿಟ್ಟುಕೊಡಲಾಗಿದೆ. ಅವರು ಪವಿತ್ರನಗರವನ್ನು ನಲವತ್ತೆರಡು ತಿಂಗಳವರೆಗೆ ತುಳಿದಾಡುವರು.


ನಿಮ್ಮ ಸ್ವಕೀಯ ಜನರು ಸ್ವಲ್ಪಕಾಲ ಮಾತ್ರ ಅನುಭವಿಸಿದಾ ನಿಮ್ಮ ಪವಿತ್ರ ಗರ್ಭಗುಡಿಯನ್ನು ನಮ್ಮ ವೈರಿಗಳು ತುಳಿದು ಹಾಳುಮಾಡಿದರಲ್ಲಾ !


ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಆ ರಾಜನು ಏಳು ವರ್ಷ ಗಳ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ಈ ಅವಧಿಯ ಅರ್ಧಭಾಗದಲ್ಲಿ ಬಲಿನೈವೇದ್ಯಗಳನ್ನು ನಿಲ್ಲಿಸಿಬಿಡುವನು. ದೇವಾಲಯದ ರೆಕ್ಕೆಯ ಮೇಲೆ ಅಸಹ್ಯವಾದುದನ್ನು ಸ್ಥಾಪಿಸಲಾಗುವುದು. ಅವನ್ನು ಅಲ್ಲಿ ಇಟ್ಟು ಅಶುದ್ಧಗೊಳಿಸಿದ ಘಾತುಕನು ನಿಶ್ಚಿತ ಪ್ರಳಯದಲ್ಲಿ ಮುಳುಗುವ ತನಕ ಅವು ಅಲ್ಲೇ ಇರುವುವು.”


ಆಗ ಒಬ್ಬ ದೇವದೂತನು ಮಾತಾಡುವುದು ನನಗೆ ಕೇಳಿಸಿತು. ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ: “ಅನುದಿನದ ಬಲಿಯರ್ಪಣೆಯನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವುದೂ-ಕನಸಿನ ಇಂಥಾ ಕಾರ್ಯಗಳು ಎಷ್ಟುಕಾಲ ನಡೆಯುವುವು?” ಎಂದು ಪ್ರಶ್ನೆಮಾಡಿದನು.


ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ.


ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


“ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಗೋ, ಆಕೆಗೆ ಹರಿಯಮಾಡುವೆನು ಸುಖಶಾಂತಿಯನು ನದಿಯಂತೆ ನೀಡುವೆ ರಾಷ್ಟ್ರಗಳ ವೈಭವವನು ತುಂಬಿತುಳುಕುವ ತೊರೆಯಂತೆ ನೀವಿರುವಿರಿ ಹಾಲುಕುಡಿವ ಹಸುಳೆಯಂತೆ ಎತ್ತಿಕೊಳ್ಳಲಾಗುವುದು ನಿಮ್ಮನ್ನು ತಾಯ ಕಂಕುಳಲಿ ನಲಿದಾಡುವಿರಿ ನೀವು ಆಕೆಯ ಮಡಿಲಲಿ.


ಹಮೋರ್ ಮತ್ತು ಅವನ ಮಗ ಶೆಕೆಮನನ್ನು ಕೊಂದು ದೀನಳನ್ನು ಅವನ ಮನೆಯಿಂದ ಕರೆದುಕೊಂಡು ಹೊರಟುಹೋದರು.


ಹೀಗೆ ಯೆಹೋಶುವನು ಅಮಾಲೇಕ್ಯರ ಯೋಧರನ್ನು ಕತ್ತಿಗೆ ತುತ್ತಾಗಿಸಿ ಅವರನ್ನು ಸೋಲಿಸಿದನು.


“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿಹೋಗುವುವು.


ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು