Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:25 - ಕನ್ನಡ ಸತ್ಯವೇದವು C.L. Bible (BSI)

25 “ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೂವಿುಯ ಮೇಲೆ ಸಮುದ್ರದ ಮತ್ತು ತೆರೆಗಳ ಘೋಷದ ನಿವಿುತ್ತವಾಗಿ ಜನಗಳಿಗೆ ದಿಕ್ಕು ಕಾಣದೆ ಸಂಕಟವು ಉಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಸೂರ್ಯ, ಚಂದ್ರ ಮತ್ತು ನಕ್ಷತ್ರಗಳಲ್ಲಿ ವಿಚಿತ್ರವಾದ ಸೂಚನೆಗಳು ಕಾಣಿಸಿಕೊಳ್ಳುವವು. ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿ ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಸೂಚನೆಗಳು ಕಾಣಿಸಿಕೊಳ್ಳುವುವು. ಭೂಮಿಯಲ್ಲಾದರೋ, ಮೊರೆಯುವ ತೆರೆಗಳ ಮತ್ತು ಭೋರ್ಗರೆಯುವ ಸಮುದ್ರದ ನಿಮಿತ್ತ ಜನಾಂಗಗಳು ದಿಕ್ಕುತೋಚದೆ ಸಂಕಟಕ್ಕೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 “ದಿಸ್, ಚಂದ್ರಾಮ್, ಅನಿ ಚಿಕ್ಕಿಯಾಂಚ್ಯಾ ವೈನಿ ಬಗುನಸಲ್ಲಿ ಅವ್ತಾರಾ ದಿಸುಕ್ ಲಾಗ್ತ್ಯಾತ್, ಅನಿ ಜಿಮ್ನಿರ್ ಸಮುಂದರಾಚ್ಯಾ ಅವಾಜಾಕ್, ಅನಿ ವೊವ್ತಲ್ಯಾ ಹೊವಾರ್‍ಯಾಂಚ್ಯಾ ಆವಾಜಾಕ್ ಜಿಮ್ನಿ ವೈಲಿ ಸಗ್ಳಿ ಲೊಕಾ ಕಂಗಾಲ್ ಹೊವ್ನ್ ಜಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:25
26 ತಿಳಿವುಗಳ ಹೋಲಿಕೆ  

ಆಕಾಶದ ತಾರೆಗಳು, ನಕ್ಷತ್ರಗಳು ಬೆಳಗವು, ಸೂರ್ಯನು ಅಂಧಕಾರಮಯನಾಗುವನು, ಚಂದ್ರನು ಕಾಂತಿಹೀನನಾಗುವನು.


“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಎಸಗುವೆನು ಆಗಸದಲಿ ಅದ್ಭುತಗಳನು, ಮಾಡುವೆನು ಭುವಿಯಲಿ ಮಹತ್ಕಾರ್ಯಗಳನು; ಕಾಣುವುದಾಗ ಕಿಚ್ಚು, ಕಪ್ಪೊಗೆ, ನೆತ್ತರು,


ನಿನ್ನ ದೇವರಾದ ಸರ್ವೇಶ್ವರ ನಾನೆ ಸಮುದ್ರವನು ಕಲ್ಲೋಲಗೊಳಿಸುವವನು ನಾನೆ ಅದರ ಅಲೆಗಳನು ಭೋರ್ಗರೆಸುವವನು ನಾನೆ ನನ್ನ ಹೆಸರು ಸೇನಾಧೀಶ್ವರ ಸರ್ವೇಶ್ವರ!


ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.


“ಆ ದಿನಗಳಲ್ಲಿ ಈ ಸಂಕಷ್ಟಗಳು ಮುಗಿದ ಬಳಿಕ ಸೂರ್ಯನು ಅಂಧಕಾರಮಯನಾಗುವನು;


“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ಸಮುದ್ರ ಭೋರ್ಗರೆದರೇನು? ನೊರೆಕಾರಿದರೇನು? I ಅದರೊಡನೆ ಪರ್ವತಗಳು ಅಲುಗಾಡಿದರೇನು? II ನಮ್ಮ ಕಡೆಗಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವನು ನಮಗಾಶ್ರಯ ದುರ್ಗವು II


ಆಗ ನಡುಮಧ್ಯಾಹ್ನ. ಆ ಹೊತ್ತಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ನಾನು ಭೂಮಿಯನ್ನು ನೋಡಿದೆ, ಅದು ಬಿಕೋ ಎನ್ನುತ್ತಿತ್ತು. ಆಕಾಶವನ್ನು ದಿಟ್ಟಿಸಿದೆ, ಅದರಲ್ಲಿ ಬೆಳಕೇ ಇರಲಿಲ್ಲ.


ಗುರುಗುಟ್ಟುತಿಹರು ಯೆಹೂದ್ಯರ ಮೇಲೆ ಭೋರ್ಗರೆಯುವ ಸಮುದ್ರದಂತೆ; ನಾಡಿನೆಲ್ಲೆಡೆ ಕವಿದಿಹುದು ಗಾಡಾಂಧಕಾರ; ತಾಂಡವವಾಡುತಿಹುದು ನೋಡಿದೆಡೆ ದುಃಖದುಗುಡ; ಮೋಡ ಕವಿದು ಇರುಳಾಗಿಹುದು ಹಗಲೊಳು ಕೂಡ !


ಆಗ ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ಅವರಲ್ಲಿ ಅತ್ಯುತ್ತಮನಾದವನೂ ಮುಳ್ಳಿನ ಪೊದೆಗೆ ಸಮಾನ. ಸತ್ಯವಂತನೂ ಮುಳ್ಳುಬೇಲಿಗಿಂತ ಕಡೆ. ಜನರ ದಂಡನೆಯ ದಿನ ಸಮೀಪಿಸಿದೆ. ಅವರ ಕಾವಲುಗಾರರಾದ ಪ್ರವಾದಿಗಳು ಮುಂತಿಳಿಸಿದ ಕಾಲ ಬಂದಿದೆ. ಜನರೆಲ್ಲರು ದಿಗ್ಭ್ರಾಂತರಾಗುವರು.


ಸಮುದ್ರದಂತೆ ಭೋರ್ಗರೆಯುವ, ಪ್ರಚಂಡ ಜನಪ್ರವಾಹಗಳಂತೆ ಗರ್ಜಿಸುವ ಪ್ರಬಲ ರಾಷ್ಟ್ರಗಳ ಆರ್ಭಟವನ್ನು ಕೇಳಿ.


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು