Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:26 - ಕನ್ನಡ ಸತ್ಯವೇದವು C.L. Bible (BSI)

26 ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಕಾಶದ ಶಕ್ತಿಗಳು ಕದಲುವದರಿಂದ ಮನುಷ್ಯರು ಭಯ ಹಿಡಿದವರಾಗಿ ಲೋಕಕ್ಕೆ ಏನು ಬರುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಗ್ರಹಶಕ್ತಿಗಳು ಕದಲುವುದರಿಂದ ಭೂಮಿಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯದಿಂದ ಮನುಷ್ಯರು ದಿಗ್ಭ್ರಮೆಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಕಾಶದ ಶಕ್ತಿಗಳು ಕದಲುವುದರಿಂದ ಲೋಕಕ್ಕೆ ಏನು ಸಂಭವಿಸುವುದೋ ಎಂಬ ಭಯಭೀತಿಯಿಂದ, ಮಾನವರು ಮನಗುಂದಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಮಳ್ಬಾತ್ಲಿ ತಾಕ್ತಿಯಾ ತೆಂಚೊ-ತೆಂಚೊ ಜಾಗೊ ಸೊಡುನ್ ಹಾಲ್ತ್ಯಾತ್ ಸಗ್ಳ್ಯಾ ಜಿಮ್ನಿರ್ ಕಸ್ಲೊ ಸಂಕಟ್ ಯೆವ್ಲಾ ತೆ ಬಗುನ್ ಸಗ್ಳಿ ಲೊಕಾ ಘಾಬ್ರುನ್ ಜಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:26
10 ತಿಳಿವುಗಳ ಹೋಲಿಕೆ  

“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


“ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.


ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ಗುರುಗುಟ್ಟುತಿಹರು ಯೆಹೂದ್ಯರ ಮೇಲೆ ಭೋರ್ಗರೆಯುವ ಸಮುದ್ರದಂತೆ; ನಾಡಿನೆಲ್ಲೆಡೆ ಕವಿದಿಹುದು ಗಾಡಾಂಧಕಾರ; ತಾಂಡವವಾಡುತಿಹುದು ನೋಡಿದೆಡೆ ದುಃಖದುಗುಡ; ಮೋಡ ಕವಿದು ಇರುಳಾಗಿಹುದು ಹಗಲೊಳು ಕೂಡ !


“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿಹೋಗುವುವು.


ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು