Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:34 - ಕನ್ನಡ ಸತ್ಯವೇದವು C.L. Bible (BSI)

34 “ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 “ಉಶಾರ್ಕಿ ರ್‍ಹಾವಾ! ಸನಾ ಕರ್‍ತಲ್ಯಾತ್, ಅನಿ ನಿಶೆತ್, ಅನಿ ಹ್ಯಾ ಬಾಳ್ವಿಚ್ಯಾ ಯವ್ಜನ್ಯಾತ್ನಿಚ್ ರ್‍ಹಾವ್ನಕಾಶಿ, ತೊ ದಿಸ್ ಎಗ್ದಮ್ ಅಚಾನಕ್ ತುಮ್ಚೆ ವರ್‍ತಿ ಯೆಯ್ಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:34
37 ತಿಳಿವುಗಳ ಹೋಲಿಕೆ  

ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ, ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು,” ಎಂದರು.


ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ.


ನಿನಗೆ ಕೊಡಲಾದ ಬೋಧನೆಯನ್ನೂ ಅದನ್ನು ನೀನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೋ. ಅದರಂತೆ ನಡೆದು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಎಚ್ಚೆತ್ತುಕೊಳ್ಳದಿದ್ದರೆ ನಾನು ಕಳ್ಳನು ಬರುವಂತೆ ಬರುತ್ತೇನೆ. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಧಾಳಿಮಾಡುತ್ತೇನೆಂದೇ ನಿನಗೆ ತಿಳಿಯದು.


ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ.


ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡಿಕತನ, ದುಂದೌತಣ - ಇತ್ಯಾದಿಗಳು.


ಆದರೆ ತಾನು ಕ್ರೈಸ್ತ ಸಹೋದರ ಎನಿಸಿಕೊಂಡು, ದುರಾಚಾರಿಯಾಗಿಯೋ ಲೋಭೀಯಾಗಿಯೋ ವಿಗ್ರಹಾರಾಧಕನಾಗಿಯೋ ಪರನಿಂದಕನಾಗಿಯೋ ಕುಡುಕನಾಗಿಯೋ ಸುಲಿಗೆಗಾರನಾಗಿಯೋ ಯಾರಾದರೂ ಇದ್ದರೆ, ಅಂಥವನ ಸಹವಾಸ ನಿಮಗೆ ಸಲ್ಲದು. ಇದು ನನ್ನ ಪತ್ರದ ಉದ್ದೇಶ.


ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


“ಮದ್ಯಪಾನ, ದ್ರಾಕ್ಷಾರಸ - ಇವು ಜನರನ್ನು ಬುದ್ಧಿಹೀನರನ್ನಾಗಿ ಮಾಡುತ್ತವೆ.


ಯಾಜಕರು, ಪ್ರವಾದಿಗಳು ಮದ್ಯಪಾನದಿಂದ ಮತ್ತರಾಗಿದ್ದಾರೆ; ದ್ರಾಕ್ಷಾರಸದಿಂದ ಓಲಾಡುತ್ತಿದ್ದಾರೆ; ಕುಡಿತದಿಂದ ತೂರಾಡುತ್ತಿದ್ದಾರೆ. ದ್ರಾಕ್ಷಾರಸವೇ ಅವರನ್ನು ಮುಳುಗಿಸಿಬಿಟ್ಟಿದೆ. ಹೌದು, ಅವರು ಮದ್ಯದಲ್ಲಿ ತೇಲಾಡುತ್ತಿದ್ದಾರೆ. ದೈವದರ್ಶನವಾಗುತ್ತಿರುವಾಗಲೂ ಅವರು ಓಲಾಡುತ್ತಾರೆ.


ಅದಕ್ಕೆ ಯೇಸುಸ್ವಾಮಿ, “ನೀವು ಮೋಸಹೋಗದಂತೆ ಜಾಗರೂಕರಾಗಿರಿ. ‘ಅನೇಕರು ನಾನೇ ಆತ, ನಾನೇ ಆತ,’ ಎನ್ನುತ್ತಾ ನನ್ನ ಹೆಸರನ್ನೇ ಇಟ್ಟುಕೊಂಡು ಬಂದು, ‘ಕಾಲವು ಸಮೀಪಿಸಿಬಿಟ್ಟಿತು,’ ಎಂದು ಹೇಳುತ್ತಾರೆ. ಅವರನ್ನು ಹಿಂಬಾಲಿಸಬೇಡಿ.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ನೀವಾದರೋ ಎಚ್ಚರಿಕೆಯಿಂದಿರಿ! “ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಖಂಡಿಸು; ಪಶ್ಚಾತ್ತಾಪಪಟ್ಟರೆ ಕ್ಷಮಿಸಿಬಿಡು.


ಯೇಸು ಆಕೆಗೆ ಪ್ರತ್ಯುತ್ತರವಾಗಿ, “ಮಾರ್ತಾ, ಮಾರ್ತಾ, ನೀನು ಅನಾವಶ್ಯ ಚಿಂತೆ ಪೇಚಾಟಗಳಿಗೆ ಒಳಗಾಗಿರುವೆ.


ಮುಳ್ಳು ಪೊದೆಗಳ ನಡುವೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿದ ಇನ್ನಿತರರು. ಆದರೆ ಕಾಲಕ್ರಮೇಣ ಬಾಳಿನ ಬವಣೆಗಳು, ಐಶ್ವರ್ಯದ ವ್ಯಾಮೋಹಗಳು ಹಾಗೂ ಸುಖಭೋಗಗಳು ಇವರನ್ನು ಅದುಮಿಬಿಡುತ್ತವೆ; ಇವರ ಫಲ ಪಕ್ವವಾಗುವುದಿಲ್ಲ.


“ನಿಮ್ಮ ವಿಷಯದಲ್ಲೂ ಎಚ್ಚರಿಕೆಯಿಂದಿರಿ. ನಿಮ್ಮನ್ನು ನ್ಯಾಯಸ್ಥಾನಗಳಿಗೆ ಎಳೆಯುವರು; ಪ್ರಾರ್ಥನಾಮಂದಿರಗಳಲ್ಲಿ ಹೊಡೆಯುವರು. ನನ್ನ ನಿಮಿತ್ತ ನೀವು ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಬೇಕಾಗುವುದು. ಅವರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.


ಗರ್ವದ ನೋಟ, ಉಬ್ಬಿದ ಎದೆ, ಇವು ದುರುಳರೊಳು ಕಾಣುವ ಪಾಪದ ಕಿಡಿಗಳು.


ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


ಒಡ್ಡಿದ ಬಲೆಯಲಿ ಒಡ್ಡಿದವನೇ ಪಟಕ್ಕನೆ ಸಿಕ್ಕಿಬೀಳಲಿ I ತೋಡಿದ ಗುಣಿಯಲಿ ತೋಡಿದವನೇ ತಟಕ್ಕನೆ ಬಿದ್ದುಹೋಗಲಿ II


ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ, ಬಹಳವಾಗಿ ಕುಡಿದು, ಬಹು ಸಂಭ್ರಮದಿಂದಿದ್ದ ಕಾರಣ ಈಕೆ ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇ‍ಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.


“ನೀನೂ ನಿನ್ನ ಪುತ್ರರು ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು, ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತ ನಿಯಮ.


ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.


ಎಂದೇ ಬಾ ತಂದೆಗೆ ದ್ರಾಕ್ಷಾರಸವನ್ನು ಕುಡಿಸೋಣ; ಅವನ ಸಂಗಡ ಮಲಗಿಕೊಂಡು ತಂದೆಯಿಂದಲಾದರೂ ಸಂತಾನ ಪಡೆದುಕೊಳ್ಳೋಣ,“ ಎಂದಳು.


ಕುಡುಕರೊಡನೆ, ಹೊಟ್ಟೆಬಾಕರೊಡನೆ ಸೇರಬೇಡ; ಮಿತಿಮೀರಿ ಮಾಂಸ ತಿನ್ನುವ ಜನರ ಜೊತೆ ನಿನಗೆ ಬೇಡ.


ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ.


ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕು.


ಆ ರಾತ್ರಿಯೂ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು. ಅವಳು ಯಾವಾಗ ತನ್ನ ಸಂಗಡ ಮಲಗಿದಳೋ, ಯಾವಾಗ ಎದ್ದು ಹೋದಳೋ ಏನೊಂದೂ ಅವನಿಗೆ ತಿಳಿಯಲಿಲ್ಲ.


ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾದ ಸವಿ ಊಟವನ್ನು ಸಿದ್ಧಪಡಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು