ಲೂಕ 21:36 - ಕನ್ನಡ ಸತ್ಯವೇದವು C.L. Bible (BSI)36 ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆದರೆ ಬರುವದಕ್ಕಿರುವ ಇವೆಲ್ಲವುಗಳೊಳಗಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆ ಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆದ್ದರಿಂದ ಎಲ್ಲಾ ಸಮಯದಲ್ಲಿಯೂ ಸಿದ್ಧರಾಗಿರಿ. ನಡೆಯಲಿರುವ ಈ ಎಲ್ಲಾ ಸಂಗತಿಗಳನ್ನು ಎದುರಿಸಿ ಸುರಕ್ಷಿತವಾಗಿ ಮುಂದುವರಿಯಲು ಮತ್ತು ಮನುಷ್ಯಕುಮಾರನ ಮುಂದೆ ನಿಲ್ಲಲು ಬೇಕಾದ ಶಕ್ತಿಗಾಗಿ ಪ್ರಾರ್ಥಿಸಿರಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಉಶಾರ್ ರ್‍ಹಾವಾ, ಅನಿ , ಹೆ ಸಗ್ಳೆ ಘಡ್ತಾನಾ ತುಮ್ಕಾ ಹ್ಯಾತುರ್‍ನಾ ಹುರ್ವುನ್ ಘೆವ್‍ಸಾಟ್ನಿ, ಅನಿ ಮಾನ್ಸಾಚ್ಯಾ ಲೆಕಾಚ್ಯಾ ಇದ್ರಾಕ್ ಧೈರ್ಯಾನ್ ಇಬೆ ರಾವಸಾಟಿ ಮಾಗ್ನಿ ಕರುನ್ಗೆಗೆತ್ ರ್‍ಹಾವಾ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |