Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:37 - ಕನ್ನಡ ಸತ್ಯವೇದವು C.L. Bible (BSI)

37 ಯೇಸುಸ್ವಾಮಿ ಹಗಲೆಲ್ಲಾ ಮಹಾದೇವಾಲಯದಲ್ಲಿ ಬೋಧಿಸುತ್ತಿದ್ದರು. ರಾತ್ರಿಯಲ್ಲಿ ಪಟ್ಟಣದಿಂದ ಹೊರಟು, ಓಲಿವ್ ತೋಪಿನ ಗುಡ್ಡದಲ್ಲಿ ತಂಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆತನು ಹಗಲು ದೇವಾಲಯದಲ್ಲಿ ಉಪದೇಶಮಾಡುತ್ತಾ ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೇಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ಇಳುಕೊಳ್ಳುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೇಸು ಹಗಲೆಲ್ಲಾ ದೇವಾಲಯದಲ್ಲಿ ಜನರಿಗೆ ಉಪದೇಶಿಸುತ್ತಿದ್ದನು. ರಾತ್ರಿಯಲ್ಲಾದರೋ ಪಟ್ಟಣದ ಹೊರಗಿದ್ದ ಆಲಿವ್ ಮರಗಳ ಗುಡ್ಡದ ಮೇಲೆ ಇರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಯೇಸು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು, ರಾತ್ರಿಯಲ್ಲಿ ಹೊರಟುಹೋಗಿ ಓಲಿವ್ ಗುಡ್ಡದಲ್ಲಿ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತ್ಯಾ ದಿಸಾತ್ನಿ ಜೆಜು ದಿಸ್‍ಬರ್ ದೆವಾಚ್ಯಾ ಗುಡಿತ್ ಲೊಕಾಕ್ನಿ ಶಿಕ್ವುನ್ಗೆತುಚ್ ರ್‍ಹಾಲೊ, ಅನಿ ಸಾಂಜ್ ಹೊಲ್ಲ್ಯಾ ತನ್ನಾ, ತೊ ಭಾಯ್ರ್ ಒಲಿವ್ ಮಡ್ಡಿ ವರ್‍ತಿ ಗೆಲೊ, ಅನಿ ಪುರಾ ರಾತ್ ತೊ ಥೈಚ್ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:37
15 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಅಲ್ಲಿಂದ ಹೊರಟು ವಾಡಿಕೆಯ ಪ್ರಕಾರ ಓಲಿವ್ ತೋಪಿನ ಗುಡ್ಡಕ್ಕೆ ಹೋದರು. ಶಿಷ್ಯರು ಅವರ ಹಿಂದೆ ಹೋದರು.


ಸೂರ್ಯಾಸ್ತಮದ ಬಳಿಕ ಯೇಸು ಮತ್ತು ಶಿಷ್ಯರು ಪಟ್ಟಣದಿಂದ ಹೊರಗೆಹೋದರು.


ಅದೇ ಸಂದರ್ಭದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ಉದ್ದೇಶಿಸಿ, “ದರೋಡೆಗಾರನನ್ನು ಹಿಡಿಯುವುದಕ್ಕೋ ಎಂಬಂತೆ ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ನನ್ನನ್ನು ಬಂಧಿಸಲು ಬರಬೇಕಾಗಿತ್ತೆ? ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ಕುಳಿತು ಬೋಧನೆಮಾಡುತ್ತಾ ಇದ್ದೆ. ಆಗ ನೀವು ನನ್ನನ್ನು ಬಂಧಿಸಲಿಲ್ಲ.


ಅನಂತರ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟರು. ಬೆಥಾನಿಯಕ್ಕೆ ಬಂದು ರಾತ್ರಿಯನ್ನು ಅಲ್ಲೇ ಕಳೆದರು.


ಯೇಸುಸ್ವಾಮಿ ಮತ್ತು ಅವರ ಜೊತೆಯಲ್ಲಿದ್ದವರು ಜೆರುಸಲೇಮನ್ನು ಸಮೀಪಿಸಿದರು. ಓಲಿವ್ ಗುಡ್ಡದ ಬಳಿಯಿರುವ ಬೆತ್ಫಗೆ ಎಂಬ ಊರನ್ನು ಸೇರಿದರು.


ಅನಂತರ ಪ್ರೇಷಿತರು ಓಲಿವ್ ತೋಪಿನ ಗುಡ್ಡದಿಂದ ಸುಮಾರು ಒಂದು ಕಿಲೊಮೀಟರು ದೂರದಲ್ಲಿರುವ ಜೆರುಸಲೇಮಿಗೆ ಹಿಂದಿರುಗಿದರು.


ಪಾಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿರುವಾಗ ಯೇಸು ಸ್ವಾಮಿ ಬೆಥಾನಿಯಕ್ಕೆ ಬಂದರು. ಅವರು ಲಾಸರನನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಊರದು.


ಯೇಸು ಜೆರುಸಲೇಮನ್ನು ಸಮೀಪಿಸುತ್ತಾ ಓಲಿವ್ ಗುಡ್ಡದ ಇಳಿಜಾರನ್ನು ಮುಟ್ಟಿದಾಗ ಶಿಷ್ಯಸಮೂಹವೆಲ್ಲವೂ ತಾವು ಕಂಡ ಎಲ್ಲ ಮಹತ್ಕಾರ್ಯಗಳನ್ನು ಕುರಿತು ಹರ್ಷಾವೇಶರಾಗಿ ದೇವರ ಸ್ತುತಿಮಾಡುತ್ತಾ -


ಮರುದಿನ ಅವರೆಲ್ಲರೂ ಬೆಥಾನಿಯದಿಂದ ಜೆರುಸಲೇಮಿಗೆ ಬರುತ್ತಿದ್ದಾಗ ಯೇಸುಸ್ವಾಮಿಗೆ ಹಸಿವಾಯಿತು.


ಬಳಿಕ ಅವರೆಲ್ಲರು ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು.


ಅವರ ಪಾದಗಳು ಜೆರುಸಲೇಮಿಗೆ ಪೂರ್ವಕ್ಕಿರುವ ಓಲಿವ್ ಗುಡ್ಡದ ಮೇಲೆ ನಿಲ್ಲುವುದು. ಆ ಗುಡ್ಡವು ಇಬ್ಭಾಗವಾಗಿ ಪೂರ್ವಪಶ್ಚಿಮದ ಉದ್ದಕ್ಕೂ ಇನ್ನರ್ಧ ಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.


ಆದರೆ ಪವಿತ್ರಗ್ರಂಥದಲ್ಲಿ ಬರೆದಿರುವುದು ನೆರವೇರುವಂತೆ ಇದೆಲ್ಲಾ ಸಂಭವಿಸಿದೆ,” ಎಂದರು.


ಓಲಿವ್ ತೋಪಿನ ಗುಡ್ಡದ ಬಳಿಯಿರುವ ಬೆತ್ಫಗೆ ಮತ್ತು ಬೆಥಾನಿಯ ಎಂಬ ಊರುಗಳನ್ನು ಸಮೀಪಿಸಿದಾಗ ತಮ್ಮ ಇಬ್ಬರು ಶಿಷ್ಯರನ್ನು ಕರೆದು,


ಪ್ರತಿನಿತ್ಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದರು. ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಜಾಪ್ರಮುಖರೂ ಅವರನ್ನು ಕೊಲೆಮಾಡಲು ಹವಣಿಸುತ್ತಿದ್ದರು.


ಅವರು ತಮ್ಮ ಶಿಷ್ಯರೊಡನೆ ಆಗಾಗ ಅಲ್ಲಿಗೆ ಬರುವುದು ವಾಡಿಕೆ. ಅವರನ್ನು ಹಿಡಿದುಕೊಡಲಿದ್ದ ಯೂದನಿಗೆ ಆ ಸ್ಥಳ ಚೆನ್ನಾಗಿ ಗೊತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು