Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:11 - ಕನ್ನಡ ಸತ್ಯವೇದವು C.L. Bible (BSI)

11 ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಜೊತೆಯಲ್ಲಿ ಪಾಸ್ಕಭೋಜನ ಮಾಡಲು ಕೊಠಡಿ ಎಲ್ಲಿ, ಎಂದು ನಿಮ್ಮನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾರೆ,’ ಎನ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?’ ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಮನೆಯ ಯಜಮಾನನಿಗೆ - ನಮ್ಮ ಬೋಧಕನು ತನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವದಕ್ಕೆ ಭೋಜನ ಶಾಲೆ ಎಲ್ಲಿ ಎಂದು ನಿನ್ನನ್ನು ಕೇಳುತ್ತಾನೆ ಎಂಬದಾಗಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಮನೆಯ ಯಜಮಾನನಿಗೆ, ‘ಗುರುವು ತನ್ನ ಶಿಷ್ಯರೊಂದಿಗೆ ಯಾವ ಕೋಣೆಯಲ್ಲಿ ಪಸ್ಕದ ಊಟವನ್ನು ಮಾಡಬೇಕೆಂಬುದನ್ನು ದಯಮಾಡಿ ತೋರಿಸು’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರೊಂದಿಗೆ ಪಸ್ಕಭೋಜನ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ? ಎಂದು ಬೋಧಕರು ನಿನ್ನನ್ನು ಕೇಳುತ್ತಾರೆ’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅನಿ ತ್ಯಾ ಘರ್‍ಚ್ಯಾ ವಡಿಲಾಕ್ “ಮಾಜಿ ಶಿಸಾ, ಅನಿ ಮಿಯಾ ಪಾಸ್ಕಾಚೆ ಜೆವಾನ್ ಜೆವ್ತಲಿ ಖೊಲಿ ಖೈ ಹಾಯ್? ಮನುನ್. ಗುರುಜಿನ್‍ ಇಚಾರ್ಲ್ಯಾನಾಯ್”, ಮನುನ್ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:11
9 ತಿಳಿವುಗಳ ಹೋಲಿಕೆ  

ಹೀಗೆ ಹೇಳಿದ ಮೇಲೆ ಅವಳು ತನ್ನ ಸೋದರಿಯನ್ನು ಕರೆಯಲು ಹೋದಳು. ಅವಳನ್ನು ಕಂಡು, “ಬೋಧಕರು ಬಂದಿದ್ದಾರೆ; ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದಳು.


ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


ಇದು ಪ್ರಭುವಿಗೆ ಬೇಕಾಗಿದೆ,’ ಎಂದು ಶಿಷ್ಯರು ಉತ್ತರಕೊಟ್ಟು, ಅದನ್ನು ಯೇಸುವಿನ ಬಳಿಗೆ ತಂದರು.


ಯಾರಾದರೂ ನಿಮ್ಮನ್ನು, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಪ್ರಭುವಿಗೆ ಇದು ಬೇಕಾಗಿದೆ’ ಎನ್ನಿರಿ,” ಎಂದು ಹೇಳಿ ಕಳುಹಿಸಿದರು.


ಯೇಸು ಆ ಸ್ಥಳಕ್ಕೆ ಬಂದು, ತಲೆಯೆತ್ತಿ ನೋಡಿ, “ಜಕ್ಕಾಯಾ, ಒಡನೆ ಇಳಿದು ಬಾ; ಈ ದಿನ ನಿನ್ನ ಮನೆಯಲ್ಲಿ ನಾನು ತಂಗಬೇಕು,” ಎಂದರು.


ಯಾವನಾದರೂ ನಿಮ್ಮನ್ನು ಏನಾದರೂ ಕೇಳಿದರೆ, ‘ಇವು ಪ್ರಭುವಿಗೆ ಬೇಕಾಗಿವೆ’ ಎನ್ನಿ. ಅವನು ತಕ್ಷಣ ಕಳುಹಿಸಿಕೊಡುವನು,” ಎಂದು ಹೇಳಿಕಳುಹಿಸಿದರು.


ಅವನ ಹಿಂದೆಯೇ ಹೋಗಿ, ಅವನು ಯಾವ ಮನೆಗೆ ಹೋಗುತ್ತಾನೋ ಆ ಮನೆಯ ಯಜಮಾನನಿಗೆ, “ನಮ್ಮ ಗುರು, ‘ನನ್ನ ಶಿಷ್ಯರ ಜೊತೆಯಲ್ಲಿ ಪಾಸ್ಕಭೋಜನ ಮಾಡಲು ನನಗೆ ಕೊಠಡಿ ಎಲ್ಲಿ?’ ಎಂದು ಕೇಳುತ್ತಾರೆ,” ಎಂದು ವಿಚಾರಿಸಿರಿ.


“ನೀವು ಪಟ್ಟಣವನ್ನು ಪ್ರವೇಶಿಸುವಾಗ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬನನ್ನು ಎದುರುಗೊಳ್ಳುವಿರಿ. ಅವನನ್ನು ಹಿಂಬಾಲಿಸಿ, ಅವನು ಹೋಗುವ ಮನೆಗೆ ಹೋಗಿರಿ.


ಅವನು ಮೇಲ್ಮಾಳಿಗೆಯಲ್ಲಿ ವಿಶಾಲವಾದ ಹಾಗೂ ಸುಸಜ್ಜಿತವಾದ ಕೊಠಡಿಯೊಂದನ್ನು ತೋರಿಸುವನು. ಅಲ್ಲಿ ಸಿದ್ಧಮಾಡಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು