Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:16 - ಕನ್ನಡ ಸತ್ಯವೇದವು C.L. Bible (BSI)

16 ದೇವರ ಸಾಮ್ರಾಜ್ಯದಲ್ಲಿ ಇದು ಪೂರ್ಣ ಅರ್ಥವನ್ನು ಪಡೆಯುವ ತನಕ ನಾನಿದನ್ನು ಇನ್ನು ಭುಜಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇನ್ನು ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ನಿಮಗೆ ಹೇಳುತ್ತೇನೆ, ಇದು ದೇವರ ರಾಜ್ಯದಲ್ಲಿ ನೆರವೇರುವ ತನಕ ನಾನು ಇನ್ನು ಮೇಲೆ ಪಸ್ಕದ ಊಟವನ್ನು ಮಾಡುವದೇ ಇಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇದರ ನಿಜವಾದ ಅರ್ಥವು ದೇವರ ರಾಜ್ಯದಲ್ಲಿ ನೆರವೇರುವ ತನಕ, ನಾನೆಂದಿಗೂ ಇನ್ನೊಂದು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಮೇಲೆ ಪಸ್ಕಭೋಜನ ಮಾಡುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ “ಹೆ ಜೆವಾನ್ ದೆವಾಚ್ಯಾ ರಾಜಾತ್ ಎಕ್ ಖರೊ ಅರ್ತ್‍ ದಿ ಪತರ್ ಮಿಯಾ, ಅನಿ ಜೆವಾನ್ ಕರಿನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:16
11 ತಿಳಿವುಗಳ ಹೋಲಿಕೆ  

ಅನಂತರ ದೇವದೂತನು, “ ‘ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು’ ಎಂದು ಬರೆ,” ಎಂದು ನನಗೆ ಆಜ್ಞಾಪಿಸಿದನು. “ಇವು ದೇವರ ಸತ್ಯವಾದ ವಾಕ್ಯಗಳು,” ಎಂದು ಸಹ ತಿಳಿಸಿದನು.


ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸುಸ್ವಾಮಿ ಹೇಳಿದ್ದನ್ನು ಕೇಳಿ, “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!” ಎಂದನು.


ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಅವರು ಕಾಣಿಸಿಕೊಂಡದ್ದು ಎಲ್ಲಾ ಜನರಿಗೆ ಅಲ್ಲ; ದೇವರಿಂದ ಸಾಕ್ಷಿಗಳಾಗಿ ಆಯ್ಕೆಯಾಗಿದ್ದ ನಮಗೆ. ಅವರು ಪುನರುತ್ಥಾನ ಹೊಂದಿದ ನಂತರ ಅವರೊಡನೆಯೇ ಊಟಮಾಡಿದವರು ನಾವು.


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ಆಗ ಅವರು ಶಿಷ್ಯರಿಗೆ, “ನಾನು ಯಾತನೆಯನ್ನು ಅನುಭವಿಸುವುದಕ್ಕೆ ಮುಂಚೆ ನಿಮ್ಮೊಡನೆ ಈ ಪಾಸ್ಕಭೋಜನವನ್ನು ಮಾಡಲು ಬಹಳ ಅಪೇಕ್ಷೆಯಿಂದ ಎದುರುನೋಡುತ್ತಿದ್ದೆನು.


ದೇವರ ಸಾಮ್ರಾಜ್ಯವು ಬರುವ ತನಕ ಇನ್ನು ನಾನು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು