Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:19 - ಕನ್ನಡ ಸತ್ಯವೇದವು C.L. Bible (BSI)

19 ಬಳಿಕ ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ನನ್ನ ಸ್ಮರಣೆಗಾಗಿ ಇದನ್ನು ಮಾಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು - ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಮೇಲೆ ಯೇಸು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ರೊಟ್ಟಿಗಾಗಿ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ಅಪೊಸ್ತಲರಿಗೆ ಕೊಟ್ಟನು. ಬಳಿಕ ಯೇಸು, “ನಾನು ನಿಮಗೋಸ್ಕರ ಕೊಡುತ್ತಿರುವ ನನ್ನ ದೇಹವಿದು. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಮೇಲೆ ಯೇಸು ರೊಟ್ಟಿಯನ್ನು ತೆಗೆದುಕೊಂಡು, ಸ್ತೋತ್ರಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಾನಾ ತೆನಿ ಭಾಕ್ರಿ ಘೆಟ್ಲ್ಯಾನ್ ದೆವಾಕ್ ಧನ್ಯವಾದ್ ದಿಲ್ಯಾನ್, ಅನಿ ಮೊಡುನ್ ತೆಂಕಾ ದಿವ್ನ್ “ಹೆ ಮಾಜೆ ಮಾಸ್, ಮಿಯಾ ತುಮ್ಕಾ ದಿವ್ಲಾ, ಹೆ ಮಾಜ್ಯಾ ಯಾದಿಸಾಟ್ನಿ ಮನುನ್ ಕರಾ. ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:19
27 ತಿಳಿವುಗಳ ಹೋಲಿಕೆ  

ನಾವು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಪಾನಪಾತ್ರೆಯಿಂದ ಕುಡಿಯುವಾಗ ಕ್ರಿಸ್ತಯೇಸುವಿನ ರಕ್ತದಲ್ಲಿ ಪಾಲುಗೊಳ್ಳುತ್ತೇವಲ್ಲವೇ? ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತಯೇಸುವಿನ ಶರೀರದಲ್ಲಿ ಪಾಲುಗೊಳ್ಳುತ್ತೇವಲ್ಲವೇ?


ಅಂತೆಯೇ, ಊಟವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗಾಗಿ ಸುರಿಸಲಾಗುವ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ.”


ಅದೂ ತಮ್ಮೊಡನೆ ಬರುತ್ತಿದ್ದ ದೈವಿಕ ಬಂಡೆಯಿಂದ ಕುಡಿದರು. ಕ್ರಿಸ್ತಯೇಸುವೇ ಆ ಬಂಡೆ.


ಆತನ ಅದ್ಭುತಕಾರ್ಯ ಸ್ಮರಣೀಯ I ಕರುಣಾವಂತ ಪ್ರಭು, ಪ್ರೀತಿಮಯ II


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಯೇಸುಕ್ರಿಸ್ತರು, ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮನ್ನು ಸದ್ಯದ ದುಷ್ಟಕಾಲದಿಂದ ಬಿಡುಗಡೆ ಮಾಡುವುದಕ್ಕಾಗಿ ಹಾಗು ನಮ್ಮ ಪಾಪಗಳ ಪರಿಹಾರಕ್ಕಾಗಿ ತಮ್ಮನ್ನೇ ಬಲಿಯಾಗಿ ಅರ್ಪಿಸಿದರು.


ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


ಅವರ ಸಂಗಡ ಊಟಕ್ಕೆ ಕುಳಿತಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರ ಸಲ್ಲಿಸಿ, ಅದನ್ನು ಮುರಿದು ಅವರಿಗೆ ಕೊಟ್ಟರು.


ಬಳಿಕ ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿನೋಡಿ, ದೇವರಿಗೆ ಸ್ತೋತ್ರಸಲ್ಲಿಸಿದರು. ತರುವಾಯ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನರಿಗೆ ಹಂಚಿದರು.


ತಿಬೇರಿಯದಿಂದ ಹೊರಟಿದ್ದ ದೋಣಿಗಳು ಅಷ್ಟು ಹೊತ್ತಿಗೆ ಅಲ್ಲಿಗೆ ಬಂದು ಸೇರಿದವು. ಪ್ರಭುವು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಜನರಿಗೆ ರೊಟ್ಟಿ ಬಡಿಸಿದ್ದ ಸ್ಥಳ ಅಲ್ಲೇ ಪಕ್ಕದಲ್ಲಿತ್ತು.


ಅನಂತರ ಯೇಸು ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, “ಇದನ್ನು ತೆಗೆದುಕೊಂಡು ನಿಮ್ಮಲ್ಲಿ ಹಂಚಿಕೊಳ್ಳಿರಿ;


ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!


ಎಲ್ಲಾ ಸಂದರ್ಭಗಳಲ್ಲೂ ಉಪಕಾರಸ್ಮರಣೆಮಾಡಿರಿ. ಕ್ರಿಸ್ತಯೇಸುವಿನಲ್ಲಿ ದೇವರು ನಿಮ್ಮಿಂದ ಇಚ್ಛಿಸುವುದು ಇದನ್ನೇ.


ನರಮಾನವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿಮ್ಮ ಕೈಗೆ ಒಪ್ಪಿಸಿದ್ದಾರೆ.


ಅರೇಬಿಯಾದಲ್ಲಿರುವ ಸೀನಾಯ್ ಪರ್ವತವನ್ನು ಪ್ರತಿನಿಧಿಸುವ ಈ ಹಾಗರಳು ಈಗಿನ ಜೆರುಸಲೇಮ್ ನಗರವನ್ನು ಹೋಲುತ್ತಾಳೆ. ಹೇಗೆಂದರೆ, ಜೆರುಸಲೇಮ್ ತನ್ನ ಮಕ್ಕಳ ಸಮೇತವಾಗಿ ದಾಸತ್ವದಲ್ಲಿ ಇದೆ.


ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.


ಅನಂತರ ಆ ಏಳು ರೊಟ್ಟಿಗಳನ್ನೂ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಸಲ್ಲಿಸಿ, ಅವುಗಳನ್ನು ಮುರಿದು ತಮ್ಮ ಶಿಷ್ಯರಿಗೆ ಕೊಟ್ಟರು; ಶಿಷ್ಯರು ಜನರಿಗೆ ಬಡಿಸಿದರು.


ಸರ್ವೇಶ್ವರನಾದ ದೇವರು ಹೀಗೆಂದರು: “ನಾನಾ ದೇಶಗಳ ನಡುವೆ, ನಾನಾ ಜನಾಂಗಗಳ ಮಧ್ಯೆ ನಾನು ಸ್ಥಾಪಿಸಿದ ಜೆರುಸಲೇಮ್ ಪಟ್ಟಣ ಈ ಮನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು