Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:2 - ಕನ್ನಡ ಸತ್ಯವೇದವು C.L. Bible (BSI)

2 ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಕೊಲ್ಲಿಸಲು ಆಲೋಚನೆ ಮಾಡುತ್ತಿದ್ದರು; ಜನರ ಭಯ ಅವರಿಗೆ ಇದ್ದುದರಿಂದ ಅದಕ್ಕೆ ಗುಟ್ಟಾದ ಮಾರ್ಗವನ್ನು ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮಹಾಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದು ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸುತ್ತಾ ಜನರ ಭಯದಿಂದ ತಕ್ಕ ಮಾರ್ಗವನ್ನು ಹುಡುಕತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮುಖ್ಯಯಾಜಕರೂ ನಿಯಮ ಬೋಧಕರೂ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮುಖ್ಯ ಯಾಜಕಾ, ಅನಿ ಖಾಯ್ದೆ ಶಿಕ್ವುತಲಿ ಲೊಕಾ, ಲೊಕಾಕ್ನಿ ಭಿಂಯಾಲಿ; ಅನಿ ಜೆಜುಕ್ ಕಶೆ ಕರುನ್ ಜಿವಾನಿ ಮಾರ್‍ತಲೆ ಮನುನ್ ಘುಟಾನ್ ಎಕ್ ವಾಟ್ ಹುಡ್ಕುನ್ ಕಾಡುನ್ ಬಗುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:2
12 ತಿಳಿವುಗಳ ಹೋಲಿಕೆ  

ಯೇಸುವನ್ನು ಬಂಧಿಸುವ ಉದ್ದೇಶದಿಂದ ಮುಖ್ಯಯಾಜಕರೂ ಫರಿಸಾಯರೂ ಆತನ ಸುಳಿವು ಯಾರಿಗಾದರೂ ಸಿಕ್ಕಿದ್ದೇ ಆದರೆ ತಮಗೆ ತಿಳಿಸಬೇಕೆಂದು ಆಜ್ಞೆ ಹೊರಡಿಸಿದ್ದರು.


ತಮ್ಮನ್ನೇ ಕುರಿತು ಈ ಸಾಮತಿಯನ್ನು ಹೇಳಿದ್ದಾರೆಂದು ಅರಿತುಕೊಂಡ ಧರ್ಮಶಾಸ್ತ್ರಿಗಳು ಮತ್ತು ಮುಖ್ಯಯಾಜಕರು ಅಲ್ಲೇ ಯೇಸುವನ್ನು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು.


ಫರಿಸಾಯರಾದರೋ ಅಲ್ಲಿಂದ ಹೊರಗೆ ಹೋಗಿ ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.


“ಅಂತೆಯೇ, ನಿಮ್ಮ ಪರಮಪೂಜ್ಯದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು.


ಆದರೆ ಗೇಣಿದಾರರು ಮಗನನ್ನು ಕಂಡೊಡನೇ, ‘ಈ ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ಮುಗಿಸಿಬಿಡೋಣ. ಇವನಿಗೆ ಬರುವ ಸೊತ್ತನ್ನು ನಮ್ಮದಾಗಿಸಿಕೊಳ್ಳೋಣ,’ ಎಂದು ತಮ್ಮ ತಮ್ಮಲ್ಲೇ ಒಳಸಂಚು ಮಾಡಿಕೊಂಡರು.


“ನಿಮಗೆ ಗೊತ್ತಿರುವ ಹಾಗೆ ಪಾಸ್ಕಹಬ್ಬಕ್ಕೆ ಇನ್ನು ಎರಡು ದಿನಗಳಿವೆ. ಆಗ ನರಪುತ್ರನನ್ನು ಶಿಲುಬೆಗೇರಿಸಲು ಹಿಡಿದೊಪ್ಪಿಸುವರು,” ಎಂದರು.


ಪಾಸ್ಕಹಬ್ಬವು, ಅಂದರೆ ಹುಳಿರಹಿತ ರೊಟ್ಟಿಯ ಹಬ್ಬವು ಬರುವುದಕ್ಕೆ ಇನ್ನು ಎರಡು ದಿನಗಳು ಮಾತ್ರ ಇದ್ದವು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಹವಣಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು