ಲೂಕ 22:30 - ಕನ್ನಡ ಸತ್ಯವೇದವು C.L. Bible (BSI)30 ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ; ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ಊಟಮಾಡಿ ಪಾನೀಯವನ್ನು ಸೇವಿಸುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತುಮಿ ಮಾಜ್ಯಾ ರಾಜಾತ್ ಮಾಜ್ಯಾ ವಾಂಗ್ಡಾ ಜೆವ್ನಾಚ್ಯಾ ಮೆಜಾರ್ ಬಸ್ತ್ಯಾಶಿ, ಅನಿ ಇಸ್ರಾಯೆಲಾಚ್ಯಾ ಬಾರಾ ಘರಾನ್ಯಾಂಚ್ಯಾ ವರ್‍ತಿ ರಾಜಾಚ್ಯಾ ಕುರ್ಚಿರ್ ಬಸುನ್ ತುಮಿ ರಾಜ್ ಚಾಲ್ವುತ್ಯಾಶಿ”, ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |