Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:31 - ಕನ್ನಡ ಸತ್ಯವೇದವು C.L. Bible (BSI)

31 “ಸಿಮೋನನೇ, ಸಿಮೋನನೇ, ಕೇಳು: ಗೋದಿಯನ್ನು ತೂರುವಂತೆ ಸೈತಾನನು ನಿಮ್ಮೆಲ್ಲರನ್ನೂ ಶೋಧಿಸಲು ಅಪ್ಪಣೆ ಕೇಳಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿಮ್ಮನ್ನು ಗೋದಿಯಂತೆ ಒನೆಯಬೇಕೆಂದು ಅಪ್ಪಣೆ ಕೇಳಿಕೊಂಡನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಒಬ್ಬ ರೈತನು ತನ್ನ ಗೋಧಿಯನ್ನು ತೂರುವಂತೆ ಸೈತಾನನು ನಿಮ್ಮನ್ನು ಶೋಧಿಸಲು ಕೇಳಿಕೊಂಡನು. ಸೀಮೋನನೇ, ಸೀಮೋನನೇ (ಪೇತ್ರ)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಸೀಮೋನನೇ, ಸೀಮೋನನೇ, ಇಗೋ, ಸೈತಾನನು ನಿಮ್ಮೆಲ್ಲರನ್ನೂ ಗೋಧಿಯಂತೆ ತೂರಬೇಕೆಂದು ಅಪ್ಪಣೆ ಕೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 “ಸಿಮಾವ್, ಸಿಮಾವ್! ಆಯ್ಕ್! ಎಕ್ ಶೆತ್ಕಾರ್‍ಯಾನ್ ಘವಾತ್ನಾ ಜೊಳ್ಳ್ ಎಗಳ್ಯಾ ಸರ್ಕೆ, ಬರೆ ಹೊತ್ತೆ ಬುರ್‍ಸ್ಯಾತ್ನಾ ಎಗ್ಳುಕ್, ತುಮ್ಚಿ ಸಗ್ಳ್ಯಾಂಚಿ ಪರಿಕ್ಷಾ ಕರುಕ್ ಮನುನ್ ಸೈತಾನಾನ್ ಪರವಾನ್ಗಿ ಘೆಟ್ಲ್ಯಾನಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:31
13 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಮತ್ತೊಂದು ದರ್ಶನದಲ್ಲಿ ಪ್ರಧಾನ ಯಾಜಕನಾದ ಯೆಹೋಶುವನು ದೂತನ ಮುಂದೆ ನಿಂತಿರುವುದನ್ನು ಸರ್ವೇಶ್ವರ ನನಗೆ ತೋರಿಸಿದರು. ಯೆಹೋಶುವನಿಗೆ ಪ್ರತಿವಾದಿಯಾಗಿ ಸೈತಾನನು ಅವನ ಪಕ್ಕದಲ್ಲಿ ನಿಂತಿದ್ದ.


ಸ್ವರ್ಗದಿಂದ ಬಂದ ಮಹಾಶಬ್ದವನ್ನು ನಾನು ಕೇಳಿಸಿಕೊಂಡೆ. ಅದು ಇಂತೆಂದಿತು : “ಇಗೋ, ನಮ್ಮ ದೇವನಿತ್ತ ಜೀವೋದ್ಧಾರ ಸಿದ್ಧಿಸಿದೆ ಆತನ ಶಕ್ತಿ, ಸಾಮ್ರಾಜ್ಯಗಳು ಕಂಗೊಳಿಸುತ್ತಿವೆ. ಆತನ ಕ್ರಿಸ್ತಾಧಿಪತ್ಯ ಸ್ಥಾಪಿತವಾಗಿದೆ. ನಮ್ಮ ಸೋದರರನು ದೂರಿದವನನ್ನು ದಬ್ಬಲಾಗಿದೆ. ಹಗಲಿರುಳು ನಮ್ಮ ದೇವರೆದುರು ದೂರಿತ್ತಿದ್ದವನನ್ನು ತಳ್ಳಲಾಗಿದೆ.


“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ಇಸ್ರಯೇಲರನ್ನು ಸಕಲ ಜನಾಂಗಗಳೊಡನೆ ಸೇರಿಸಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಹೀಗೆ ಕಾಳನ್ನೂ ಜೊಳ್ಳನ್ನೂ ಬೇರ್ಪಡಿಸುವೆನು.


ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು.


ಯೇಸು ಆಕೆಗೆ ಪ್ರತ್ಯುತ್ತರವಾಗಿ, “ಮಾರ್ತಾ, ಮಾರ್ತಾ, ನೀನು ಅನಾವಶ್ಯ ಚಿಂತೆ ಪೇಚಾಟಗಳಿಗೆ ಒಳಗಾಗಿರುವೆ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


ಬಳಿಕ ಅವರೆಲ್ಲರು ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು.


ಅವನ ದೇಹವು ದಂಡನೆಗೊಳಗಾದರೂ ಅವನ ಆತ್ಮ ಪ್ರಭು ಯೇಸುವಿನ ದಿನದಂದು ಉದ್ಧಾರವಾಗುವಂತೆ ಹೀಗೆ ಮಾಡಬೇಕು.


ಸೈತಾನನ ಕುತಂತ್ರಗಳನ್ನು ನಾವು ಅರಿಯದವರಲ್ಲ; ಅವನ ಕೈ ಮೇಲಾಗದಂತೆ ನಾವು ನೋಡಿಕೊಳ್ಳಬೇಕು.


ಗೋದಿಯನ್ನು ಒಕ್ಕುವಾಗ ಕುದುರೆಗಳನ್ನು ಹೊಡೆದು ಗುಂಡನ್ನು ಉರುಳಿಸಿ ಕಾಳನ್ನು ಪುಡಿಪುಡಿಮಾಡುವನೋ? ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು