Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:40 - ಕನ್ನಡ ಸತ್ಯವೇದವು C.L. Bible (BSI)

40 ಕ್ಲುಪ್ತಸ್ಥಳಕ್ಕೆ ಬಂದಾಗ ಯೇಸು ಅವರಿಗೆ, “ಪ್ರಲೋಭನೆಗೆ ಒಳಗಾಗದಂತೆ ಪ್ರಾರ್ಥನೆಮಾಡಿರಿ,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆತನು ಆ ಕ್ಲುಪ್ತ ಸ್ಥಳಕ್ಕೆ ಬಂದಾಗ ಅವರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆತನು ಕ್ಲುಪ್ತಸ್ಥಳಕ್ಕೆ ಬಂದಾಗ ಅವರಿಗೆ - ನೀವು ಶೋಧನೆಗೆ ಒಳಗಾಗದಂತೆ ದೇವರನ್ನು ಪ್ರಾರ್ಥಿಸಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆತನ ಶಿಷ್ಯರೂ ಆತನೊಡನೆ ಹೋದರು. (ಯೇಸು ಆಗಾಗ್ಗೆ ಅಲ್ಲಿಗೆ ಹೋಗುತ್ತಿದ್ದನು.) ಯೇಸು ತನ್ನ ಶಿಷ್ಯರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯೇಸು ಆ ಸ್ಥಳದಲ್ಲಿದ್ದಾಗ ಅವರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತ್ಯಾ ಜಾಗ್ಯಾವರ್ತಿ ಜಾವ್ನ್ ಪಾವಲ್ಲ್ಯಾ ತನ್ನಾ, ಜೆಜುಕ್ ಶಿಸಾಕ್ನಿ “ತುಮಿ ಪಾಪಾತ್ ಪಡ್ತಲ್ಯಾ ವಿಶಯಾತ್ನಿ " ಪಡಿನಸ್ತಾನಾ ರ್‍ಹಾವ್‍ಸಾಟ್ನಿ ಮಾಗ್ನಿ ಕರಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:40
16 ತಿಳಿವುಗಳ ಹೋಲಿಕೆ  

ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಇದನ್ನು ಕಂಡು, “ನೀವು ನಿದ್ರಿಸುತ್ತೀರೇನು? ಎದ್ದು, ನೀವು ಪ್ರಲೋಭನೆಗೆ ಒಳಗಾಗದಂತೆ ಪ್ರಾರ್ಥನೆಮಾಡಿ,” ಎಂದರು.


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ನಮಗೆ ತಪ್ಪು ಮಾಡಿದ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ, ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ’.”


ನಿನ್ನ ನುಡಿಗನುಸಾರ ದೃಢಪಡಿಸು ನನ್ನ ನಡತೆಯನು I ಕೆಡುಕೊಂದೂ ಅಧೀನಪಡಿಸದಿರಲಿ ನನ್ನನು II


ನಿನ್ನ ಮಾರ್ಗದಿಂದ ಕಾಲು ಜಾರಲು ಬಿಡದೆ I ನಿನ್ನ ಪಥದಲಿ ದಿಟ್ಟ ಹೆಜ್ಜೆಯಿಟ್ಟು ನಡೆದೆ II


ಆದರೆ ಯಾಬೇಚ, “ಸರ್ವೇಶ್ವರಾ, ನನ್ನನ್ನು ಆಶೀರ್ವದಿಸಿರಿ, ನನ್ನ ಭೂಮಿಯನ್ನು ವಿಸ್ತರಿಸಿರಿ. ನನ್ನೊಡನೆ ಇದ್ದು ನನಗೆ ನೋವನ್ನುಂಟುಮಾಡುವ ಎಲ್ಲಾ ದುಷ್ಟಶಕ್ತಿಗಳಿಂದ ನನ್ನನ್ನು ಕಾಪಾಡಿ,” ಎಂದು ಸರ್ವೇಶ್ಚರನಿಗೆ ಪ್ರಾರ್ಥಿಸಿದನು. ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಆಲಿಸಿ, ಕೇಳಿದ್ದನ್ನು ದಯಪಾಲಿಸಿದರು.


ಕಾಪಾಡೆನ್ನನು, ಬೇಕು ಬೇಕೆಂದು ಪಾಪಮಾಡದಂತೆ I ಕಾದಿಡು, ಅಂಥ ಪಾಪಕೆ ನಾ ದಾಸನಾಗದಂತೆ I ನಿರ್ದೋಷಿಯಾಗುವೆನು, ಆ ದ್ರೋಹಕ್ಕೊಳಗಾಗದಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು