Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:43 - ಕನ್ನಡ ಸತ್ಯವೇದವು C.L. Bible (BSI)

43 ಆಗ ಸ್ವರ್ಗದಿಂದ ದೂತನೊಬ್ಬನು ಯೇಸುವಿಗೆ ಪ್ರತ್ಯಕ್ಷವಾಗಿ ಅವರನ್ನು ಸಶಕ್ತರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು, ಆತನನ್ನು ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು ಆತನನ್ನು ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆಗ ಪರಲೋಕದಿಂದ ಒಬ್ಬ ದೇವದೂತನು ಕಾಣಿಸಿಕೊಂಡನು. ಯೇಸುವನ್ನು ಬಲಪಡಿಸುವುದಕ್ಕಾಗಿ ಈ ದೇವದೂತನನ್ನು ಕಳುಹಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆಗ ಪರಲೋಕದಿಂದ ಒಬ್ಬ ದೇವದೂತನು ಯೇಸುವಿಗೆ ಕಾಣಿಸಿಕೊಂಡು, ಅವರನ್ನು ಬಲಪಡಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಎಕ್ ದೆವಾಚೊ ದುತ್ ಸರ್‍ಗಾ ವೈನಾ ಯೆಲೊ, ಅನಿ ತೆಕಾ ಧೈರೊ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:43
16 ತಿಳಿವುಗಳ ಹೋಲಿಕೆ  

ಆಗ ಪಿಶಾಚಿ ಯೇಸುವನ್ನು ಬಿಟ್ಟು ತೊಲಗಿತು. ದೇವದೂತರು ಬಂದು ಅವರನ್ನು ಉಪಚರಿಸಿದರು.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ನಾನು ನನ್ನ ಪಿತನನ್ನು ಕೇಳಿಕೊಂಡರೆ ಅವರು ತಕ್ಷಣವೇ ಹನ್ನೆರಡು ದಳಗಳಿಗಿಂತಲೂ ಹೆಚ್ಚು ದೇವದೂತರನ್ನು ಕಳಿಸುವುದಿಲ್ಲವೆಂದುಕೊಂಡೆಯಾ?


ಇದಲ್ಲದೆ ದೇವರು ತಮ್ಮ ಚೊಚ್ಚಲ ಮಗನನ್ನು ಭೂಲೋಕಕ್ಕೆ ಕಳುಹಿಸುವಾಗ” “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ,” ಎಂದಿದ್ದಾರೆ.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು.


“ನೀನು ದೇವರ ಪುತ್ರನೆಂಬುದು ಸತ್ಯವಾದರೆ ಕೆಳಕ್ಕೆ ಧುಮುಕು. ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ, ‘ದೇವರೇ ತಮ್ಮ ದೂತರಿಗೆ ಆಜ್ಞೆಮಾಡುವರು’ ಮತ್ತು ‘ಇವರು ನಿನ್ನ ಕಾಲುಗಳು ಕಲ್ಲುಗಳಿಗೆ ತಾಕದಂತೆ ನಿನ್ನನ್ನು ಕೈಗಳಲ್ಲಿ ಆತುಕೊಳ್ಳುವರು’,” ಎಂದಿತು.


ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ, ನೀನು ನೋಡುವ ನಾಡನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕು,’ ಎಂದು ಉತ್ತರಕೊಟ್ಟರು.


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ಅಲ್ಲಿ ಕೆಲಕಾಲವಿದ್ದು ಪುನಃ ಹೊರಟು ಗಲಾತ್ಯ ಮತ್ತು ಫ್ರಿಜಿಯ ಪ್ರದೇಶಗಳಲ್ಲಿ ಸಂಚರಿಸುತ್ತಾ ಭಕ್ತರೆಲ್ಲರನ್ನು ದೃಢಪಡಿಸಿದನು.


“ಮೇದ್ಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ನಾನೇ ಮಿಕಾಯೇಲನಿಗೆ ಬೆಂಬಲಕೊಟ್ಟು ಆಶ್ರಯನಾಗಿ ನಿಂತೆ.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು