Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:44 - ಕನ್ನಡ ಸತ್ಯವೇದವು C.L. Bible (BSI)

44 ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆತನು ಮನೋವ್ಯಥೆಯುಳ್ಳವನಾಗಿ ಇನ್ನೂ ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂವಿುಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಯೇಸುವಿಗೆ ತುಂಬಾ ವೇದನೆಯಿತ್ತು. ಆತನು ಪ್ರಾರ್ಥನೆಯಲ್ಲಿ ಕಷ್ಟಪಟ್ಟು ಹೋರಾಡಿದನು. ಆತನ ಮುಖದಲ್ಲಿ ಬೆವರು ರಕ್ತದೋಪಾದಿಯಲ್ಲಿ ತೊಟ್ಟಿಕ್ಕತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಯೇಸು ವೇದನೆಯಲ್ಲಿದ್ದು ಬಹಳ ಆಸಕ್ತಿಯಿಂದ ಪ್ರಾರ್ಥಿಸಿದರು. ಯೇಸುವಿನ ಬೆವರು ನೆಲಕ್ಕೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಅನಿಬಿ ಲೈ ದುಕ್ಕಾನ್ ಭರುನ್, ತೆನಿ ಮಾಗ್ನಿ ಕರ್‍ಲ್ಯಾನ್, ತೆಚೊ ಘಾಮ್ ರಗ್ತಾಚ್ಯಾ ಠೆಂಬ್ಯಾಂಚ್ಯಾ ಸಾರ್ಕೊ ಜಿಮ್ನಿರ್ ಗಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:44
16 ತಿಳಿವುಗಳ ಹೋಲಿಕೆ  

ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ, “ಈಗ ನನ್ನಾತ್ಮ ತತ್ತರಿಸುತ್ತಿದೆ. ನಾನು ಏನೆಂದು ಹೇಳಲಿ? ‘ಪಿತನೇ, ಈ ಗಳಿಗೆಯಿಂದ ನನ್ನನ್ನು ಕಾಪಾಡು ಎನ್ನಲೇ?’ ಇಲ್ಲ, ಅದಕ್ಕೆ ಬದಲಾಗಿ ಇದನ್ನು ಅನುಭವಿಸಲೆಂದೇ ನಾನು ಈ ಗಳಿಗೆಗೆ ಕಾಲಿಟ್ಟಿದ್ದೇನೆ.


ಯೇಸು ಪ್ರಾರ್ಥನೆಯಿಂದ ಎದ್ದು ಶಿಷ್ಯರ ಬಳಿಗೆ ಬಂದರು. ಶಿಷ್ಯರಾದರೋ ದುಃಖದಿಂದ ಬಳಲಿ ನಿದ್ರಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು