Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:53 - ಕನ್ನಡ ಸತ್ಯವೇದವು C.L. Bible (BSI)

53 ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಇದ್ದೆ. ಆಗ ನೀವು ನನ್ನ ಮೇಲೆ ಕೈಮಾಡಲಿಲ್ಲ; ಆದರೆ ಇದು ನಿಮ್ಮ ಕಾಲ; ಅಂಧಕಾರ ದೊರೆತನ ಮಾಡುವ ಕರಾಳಕಾಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ನಾನು ದಿನಾಲು ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ; ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಪ್ರತಿದಿನ ನಿಮ್ಮ ಸಂಗಡ ದೇವಾಲಯದಲ್ಲಿದ್ದೆನು. ನೀವು ನನ್ನನ್ನು ಅಲ್ಲಿ ಏಕೆ ಬಂಧಿಸಲಿಲ್ಲ? ಆದರೆ ಇದು ನಿಮ್ಮ ಸಮಯ. ಇದು ಅಂಧಕಾರದ (ಪಾಪ) ದೊರೆತನ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ. ಆದರೆ ಇದು ನಿಮ್ಮ ಸಮಯ, ಅಂಧಕಾರ ದೊರೆತನ ಮಾಡುವ ಕಾಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ಮಿಯಾ ಸದ್ದಿಚ್ ದೆವಾಚಿ ಗುಡಿ ತುಮ್ಚ್ಯಾ ವಾಂಗ್ಡಾಚ್ ರ್‍ಹಾಯ್, ಖರೆ ತುಮಿ ಮಾಕಾ ಧರುಕ್‍ನ್ಯಾಶಿ. ಖರೆ ಕಾಳೊಕ್ ಅಪ್ನಾಚೊ ರಾಜ್ ಚಾಲ್ವುತಲೊ ಎಳ್ ಹ್ಯೊ, ತುಮ್ಚೊ ಎಳ್ ಹ್ಯೊ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:53
20 ತಿಳಿವುಗಳ ಹೋಲಿಕೆ  

ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ.


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ, “ಈಗ ನನ್ನಾತ್ಮ ತತ್ತರಿಸುತ್ತಿದೆ. ನಾನು ಏನೆಂದು ಹೇಳಲಿ? ‘ಪಿತನೇ, ಈ ಗಳಿಗೆಯಿಂದ ನನ್ನನ್ನು ಕಾಪಾಡು ಎನ್ನಲೇ?’ ಇಲ್ಲ, ಅದಕ್ಕೆ ಬದಲಾಗಿ ಇದನ್ನು ಅನುಭವಿಸಲೆಂದೇ ನಾನು ಈ ಗಳಿಗೆಗೆ ಕಾಲಿಟ್ಟಿದ್ದೇನೆ.


ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಕಾವಲಾಳುಗಳು ಹಿಂದಿರುಗಿದಾಗ, ಮುಖ್ಯಯಾಜಕರು ಮತ್ತು ಫರಿಸಾಯರು, “ಅವನನ್ನೇಕೆ ನೀವು ಹಿಡಿದು ತರಲಿಲ್ಲ?” ಎಂದು ಕೇಳಿದರು.


ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.


ಇದನ್ನು ಕೇಳಿದ ಯೆಹೂದ್ಯರು ಯೇಸುವನ್ನು ಹಿಡಿದು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಗಳಿಗೆ ಇನ್ನೂ ಬಾರದೆ ಇದ್ದ ಕಾರಣ ಯಾರೂ ಅವರ ಮೇಲೆ ಕೈಹಾಕಲಿಲ್ಲ.


ತರುವಾಯ ಯೇಸುಸ್ವಾಮಿ ಮಹಾದೇವಾಲಯದ ಒಳಕ್ಕೆ ಹೋಗಿ ಅಲ್ಲಿ ಬೋಧನೆಮಾಡತೊಡಗಿದರು. ಮುಖ್ಯಯಾಜಕರೂ ಪ್ರಜಾಪ್ರಮುಖರೂ ಅವರ ಬಳಿಗೆ ಬಂದು, “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರಾರು?” ಎಂದು ಪ್ರಶ್ನಿಸಿದರು.


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ಅನಂತರ ಯೇಸು ತಮ್ಮನ್ನು ಹಿಡಿಯುವುದಕ್ಕೆ ಬಂದಿದ್ದ ಮುಖ್ಯಯಾಜಕರನ್ನೂ ದೇವಾಲಯದ ಪಹರೆಯ ದಳಪತಿಗಳನ್ನೂ ಪ್ರಮುಖರನ್ನೂ ನೋಡಿ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನು ಮತ್ತು ಲಾಠಿಗಳನ್ನು ತೆಗೆದುಕೊಂಡು ಬಂದಿರುವಿರೋ?


ಅನಂತರ ಅವರು ಯೇಸುಸ್ವಾಮಿಯನ್ನು ಬಂಧಿಸಿ ಪ್ರಧಾನಯಾಜಕನ ಭವನಕ್ಕೆ ಕರೆದುಕೊಂಡು ಹೋದರು. ದೂರದಿಂದ ಪೇತ್ರನು ಹಿಂದೆಹಿಂದೆಯೇ ಹೋದನು.


ಆ ರೊಟ್ಟಿಯ ತುಂಡನ್ನು ತೆಗೆದುಕೊಂಡಕೂಡಲೇ ಯೂದನು ಎದ್ದು ಹೊರಟುಹೋದನು; ಆಗ ರಾತ್ರಿಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು