Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:57 - ಕನ್ನಡ ಸತ್ಯವೇದವು C.L. Bible (BSI)

57 ಅದಕ್ಕೆ ಆತ, “ಅವನಾರೋ ನಾನರಿಯೆನಮ್ಮಾ,” ಎಂದು ನಿರಾಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಆದರೆ ಅವನು, “ನಾನು ಅವನನ್ನು ಅರಿಯೆನಮ್ಮಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಆದರೆ ಅವನು - ನಾನು ಅವನನ್ನು ಅರಿಯೆನಮ್ಮಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಆದರೆ ಪೇತ್ರನು ಅದು ನಿಜವಲ್ಲವೆಂದು ಹೇಳಿದನು. ಅವನು ಅಕೆಗೆ, “ಅಮ್ಮಾ, ಆತನು ನನಗೆ ಗೊತ್ತೇ ಇಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಆದರೆ ಪೇತ್ರನು ಅಲ್ಲಗಳೆದು, “ಅಮ್ಮಾ, ನಾನು ಯೇಸುವನ್ನು ಅರಿಯೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

57 ಖರೆ ಪೆದ್ರುನ್ ತ್ಯಾ ಬಾಯ್ಕೊಮನ್ಸಿಕ್ “ಬಾಯಿ ತೊ ಕೊನ್ ಮನುನ್ ಸೈತ್ ಮಾಕಾ ಗೊತ್ತ್ ನಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:57
12 ತಿಳಿವುಗಳ ಹೋಲಿಕೆ  

ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಪೇತ್ರನು ಪುನಃ ಅಲ್ಲಗಳೆದನು. ಕೂಡಲೇ ಕೋಳಿ ಕೂಗಿತು.


ಇತ್ತ ಪೇತ್ರನು ನಿಂತು ಚಳಿಕಾಯಿಸಿಕೊಳ್ಳುತ್ತಾ ಇದ್ದನು. ಅಲ್ಲಿದ್ದವರು, “ನೀನು ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೇ?’ ಎಂದು ಕೇಳಿದರು. ಪೇತ್ರನು, “ಇಲ್ಲ, ನಾನು ಶಿಷ್ಯನಲ್ಲ,” ಎಂದು ನಿರಾಕರಿಸಿದನು.


ಆದರೆ ಯಾವನು ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸುತ್ತಾನೋ, ಅವನನ್ನು ದೇವದೂತರ ಮುಂದೆ ನಿರಾಕರಿಸಲಾಗುವುದೆಂಬುದು ನಿಶ್ಚಯ.


“ನೀನು ಹೇಳುವುದು ಏನೆಂದು ನನಗೆ ತಿಳಿಯದು,” ಎಂದು ಪೇತ್ರನು ಎಲ್ಲರ ಮುಂದೆ ನಿರಾಕರಿಸಿದನು.


ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ.


ಬೆಂಕಿಯ ಬೆಳಕಿನಲ್ಲಿ ಕುಳಿತಿದ್ದ ಆತನನ್ನು ದಾಸಿಯೊಬ್ಬಳು ದೃಷ್ಟಿಸಿ ನೋಡಿ, “ಇವನು ಕೂಡ ಯೇಸುವಿನ ಸಂಗಡ ಇದ್ದವನು,” ಎಂದಳು.


ಸ್ವಲ್ಪಹೊತ್ತಾದ ಮೇಲೆ ಇನ್ನೊಬ್ಬನು ಆತನನ್ನು ಕಂಡು, “ನೀನು ಕೂಡ ಅವರಲ್ಲಿ ಒಬ್ಬನು,” ಎನ್ನಲು ಪೇತ್ರನು, “ಇಲ್ಲಪ್ಪಾ, ನಾನಲ್ಲ,” ಎಂದುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು