Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:63 - ಕನ್ನಡ ಸತ್ಯವೇದವು C.L. Bible (BSI)

63 ಯೇಸುಸ್ವಾಮಿಯನ್ನು ಬಂಧಿಸಿ ಹಿಡಿದುಕೊಂಡಿದ್ದವರು ಅವರನ್ನು ಅಣಕಿಸಿದರು, ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63-64 ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

63 ಆಮೇಲೆ ಯೇಸುವನ್ನು ಹಿಡಿದವರು ಆತನನ್ನು ಹಾಸ್ಯಮಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

63-64 ಕೆಲವು ಜನರು ಯೇಸುವನ್ನು ಹಿಡಿದುಕೊಂಡಿದ್ದರು. ಅವರು ಯೇಸುವಿನ ಮುಖಕ್ಕೆ ಮುಸುಕು ಹಾಕಿ, ಆತನನ್ನು ಹೊಡೆದು, “ನಿನ್ನನ್ನು ಹೊಡೆದವರ್ಯಾರು? ನಮಗೆ ಪ್ರವಾದನೆ ಹೇಳು” ಎಂದು ಗೇಲಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

63 ಯೇಸುವನ್ನು ಕಾಯುತ್ತಿದ್ದ ಜನರು, ಹಾಸ್ಯಮಾಡಿ ಅವರನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

63 ಜೆಜುಕ್ ರಾಕುಕ್ ಮನುನ್ ಹೊತ್ತ್ಯಾ ಲೊಕಾನಿ ಜೆಜುನ್ ಎಡ್ಸಡ್ಲ್ಯಾನಿ, ಅನಿ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:63
23 ತಿಳಿವುಗಳ ಹೋಲಿಕೆ  

ಯೇಸು ಹೀಗೆ ಹೇಳಲು ಬಳಿಯಲ್ಲೇ ನಿಂತಿದ್ದ ಕಾವಲಾಳೊಬ್ಬನು, “ಪ್ರಧಾನ ಯಾಜಕರಿಗೆ ಉತ್ತರಕೊಡುವುದು ಹೀಗೆಯೇ?” ಎಂದು ಕೆನ್ನೆಗೆ ಹೊಡೆದನು.


ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು!


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ರೂಪಕ್ಕಿಂತ ವಿಕಾರಗೊಂಡಿದೆ ನಿಜ; ಆದರೆ ಹಲವರು ನೋಡಿ ಆದರು ಚಕಿತ.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ತಮ್ಮಾಸೆ ಕೈಗೂಡಿತೆನಲು ಅವರಿಗಿರಬಾರದು ಅವಕಾಶ I ಅವನನು ಕಬಳಿಸಿಬಿಟ್ಟೆವು ಎಂದು ಕೊಚ್ಚಿಕೊಳ್ಳುವ ಸಂತೋಷ II


ಗರ್ಜಿಸುವ ಉಗ್ರಸಿಂಹಗಳಂತೆ ವೈರಿಗಳು I ಕಾದಿಹರು ಬಾಯಿ ತೆರೆದು ನನ್ನ ಕಬಳಿಸಲು II


ಅವನು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.


ಅಷ್ಟರಲ್ಲಿ ಪ್ರಧಾನಯಾಜಕನು ಯೇಸು ಸ್ವಾಮಿಯನ್ನು ಅವರ ಶಿಷ್ಯರ ವಿಷಯವಾಗಿ ಹಾಗು ಬೋಧನೆಯ ವಿಷಯವಾಗಿ ವಿಚಾರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು