Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:66 - ಕನ್ನಡ ಸತ್ಯವೇದವು C.L. Bible (BSI)

66 ಅಷ್ಟರಲ್ಲಿ ಬೆಳಗಾಯಿತು. ಪ್ರಜಾಪ್ರಮುಖರೂ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಸಭೆ ಸೇರಿದರು. ಯೇಸುವನ್ನು ತಂದು ನ್ಯಾಯಸಭೆಯ ಮುಂದೆ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

66 ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

66 ಬೆಳಗಾಗುವಾಗ ಯೆಹೂದ್ಯರ ಹಿರೀ ಸಭೆಯವರು ಅಂದರೆ ಮಹಾಯಾಜಕರೂ ಶಾಸ್ತ್ರಿಗಳೂ ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

66 ಮರುದಿನ ಮುಂಜಾನೆ ಹಿರಿಯ ಜನನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಒಟ್ಟಾಗಿ ಸೇರಿಬಂದರು. ಅವರು ಯೇಸುವನ್ನು ನ್ಯಾಯಾಲಯಕ್ಕೆ ಕರೆದೊಯ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

66 ಬೆಳಗಾದ ಕೂಡಲೇ ಜನರ ಹಿರಿಯರೂ ಮುಖ್ಯಯಾಜಕರೂ ನಿಯಮ ಬೋಧಕರೂ ಒಟ್ಟಾಗಿ ಬಂದು ಯೇಸುವನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

66 ದಿಸ್ ಉಜ್ವಾಡಲ್ಲ್ಯಾ ತನ್ನಾ ಜಾಸ್ತಿ ಲೊಕಾ, ಮುಖ್ಯ ಯಾಜಕಾ, ಅನಿ ಖಾಯ್ದೆ ಶಿಕ್ವುತಲಿ ಲೊಕಾ ಎಕಾಕ್ಡೆ ಗೊಳಾ ಹೊಲಿ, ಅನಿ ಜೆಜುಕ್ ನ್ಯಾಯ್ ಕರ್‍ತಲ್ಯಾ ಮಂಡಳಿಚ್ಯಾ ಇದ್ರಾಕ್ ಘೆವ್ನ್ ಯೆವ್ನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:66
7 ತಿಳಿವುಗಳ ಹೋಲಿಕೆ  

ಬೆಳಗಾದ ಕೂಡಲೆ, ಮುಖ್ಯಯಾಜಕರೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಹಾಗು ನ್ಯಾಯಸಭೆಯ ಇತರ ಸದಸ್ಯರೂ ಒಟ್ಟುಗೂಡಿ ಸಮಾಲೋಚನೆ ನಡೆಸಿದರು. ಯೇಸುಸ್ವಾಮಿಗೆ ಬೇಡಿಹಾಕಿ ಪಿಲಾತನ ಬಳಿಗೆ ಕರೆದೊಯ್ದು ಆತನ ವಶಕ್ಕೊಪ್ಪಿಸಿದರು.


ಬೆಳಗಾಯಿತು. ಎಲ್ಲ ಮುಖ್ಯಯಾಜಕರೂ ಜನರ ಪ್ರಮುಖರೂ ಸೇರಿ ಯೇಸುವನ್ನು ಕೊಲ್ಲಿಸುವುದಕ್ಕೆ ಸಮಾಲೋಚನೆಮಾಡಿದರು.


ಇದಕ್ಕೆ ಪ್ರಧಾನಯಾಜಕರು ಮತ್ತು ಪ್ರಮುಖರ ಇಡೀ ಸಭೆಯೇ ಸಾಕ್ಷಿ. ನಾನು ಅವರಿಂದಲೇ ದಮಸ್ಕಸಿನಲ್ಲಿರುವ ಯೆಹೂದ್ಯ ಬಾಂಧವರಿಗೆ ಪತ್ರಗಳನ್ನು ಪಡೆದು, ಆ ಪಟ್ಟಣಕ್ಕೆ ಹೊರಟೆ. ಅಲ್ಲಿಂದ ಕ್ರೈಸ್ತರನ್ನು ಬಂಧಿಸಿ, ಜೆರುಸಲೇಮಿಗೆ ತಂದು ಶಿಕ್ಷಿಸಬೇಕೆಂಬುದೇ ನನ್ನ ಉದ್ದೇಶವಾಗಿತ್ತು.


ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು