Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:11 - ಕನ್ನಡ ಸತ್ಯವೇದವು C.L. Bible (BSI)

11 ಕಡೆಗೆ ಹೆರೋದನು ತನ್ನ ಸೈನಿಕರೊಡನೆ ಸೇರಿ ಯೇಸುವನ್ನು ಅಣಕಿಸಿ ಅವಮಾನಪಡಿಸಿದನು. ರಾಜವಸ್ತ್ರವನ್ನು ವೇಷಭೂಷಣವಾಗಿ ಅವರಿಗೆ ತೊಡಿಸಿ ಪಿಲಾತನ ಬಳಿಗೆ ಮರಳಿ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರಿಗಿ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಹೆರೋದನು ಮತ್ತು ಅವನ ಸೈನಿಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು ಯೇಸುವಿಗೆ ರಾಜನ ಬಟ್ಟೆ ಉಡಿಸಿ ಹಾಸ್ಯ ಮಾಡಿದರು. ಬಳಿಕ ಹೆರೋದನು ಯೇಸುವನ್ನು ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಹೆರೋದನು ತನ್ನ ಸೈನಿಕರೊಂದಿಗೆ ಯೇಸುವನ್ನು ತಿರಸ್ಕರಿಸಿ, ಹಾಸ್ಯಮಾಡಿ, ಅವರ ಮೇಲೆ ರಾಜವಸ್ತ್ರವನ್ನು ಹೊದಿಸಿ ಅವರನ್ನು ತಿರುಗಿ ಪಿಲಾತನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಹೆರೊದಾನ್, ಅನಿ ತೆಚ್ಯಾ ಸೈನಿಕಾನಿ ಜೆಜುಕ್ ಎಡ್ಸಡ್ಲ್ಯಾನಿ, ಅನಿ ಮರ್‍ಯಾದ್ ಕಾಡ್ಲ್ಯಾನಿ. ಮಾನಾ ತೆನಿ ಜೆಜುಕ್ ಎಕ್ ಬರಿ ಅಂಗಿ ನೆಸ್ವುಲ್ಯಾನಿ, ಅನಿ ಪಿಲಾತಾಕ್ಡೆ ಧಾಡುನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:11
16 ತಿಳಿವುಗಳ ಹೋಲಿಕೆ  

ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಆಗ ಯೇಸು ಮುಳ್ಳಿನ ಕಿರೀಟವನ್ನೂ ಕೆನ್ನೇರಳೆ ಬಣ್ಣದ ಅಂಗಿಯನ್ನೂ ಧರಿಸಿದವರಾಗಿ ಹೊರಕ್ಕೆ ಬಂದರು. ಪಿಲಾತನು, “ಇಗೋ, ಈ ಮನುಷ್ಯ !” ಎಂದನು.


ಅದಕ್ಕೆ ಅವರು, “ ‘ಎಲೀಯನು ಮೊದಲು ಬಂದು ಎಲ್ಲವನ್ನೂ ಸಜ್ಜುಗೊಳಿಸುವನೆಂಬುದೇನೋ ನಿಜ. ಆದರೂ ನರಪುತ್ರನು ಜನರಿಂದ ತೀವ್ರಯಾತನೆಯನ್ನು ಅನುಭವಿಸಿ ಅವರಿಂದ ತಿರಸ್ಕೃತನಾಗಬೇಕು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆಯಲ್ಲವೆ; ಇದು ಹೇಗೆ?


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II


ಯೇಸುಸ್ವಾಮಿಯ ಸಮಾಚಾರ ಆಗ ಗಲಿಲೇಯ ಪ್ರಾಂತ್ಯಕ್ಕೆ ಸಾಮಂತರಾಜನಾಗಿದ್ದ ಹೆರೋದನ ಕಿವಿಗೆ ಬಿದ್ದಿತು.


ಹೆರೋದನು ತನ್ನ ಸಹೋದರ ಫಿಲಿಪ್ಪನ ಧರ್ಮಪತ್ನಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಅವಳ ಪ್ರಯುಕ್ತ ಯೊವಾನ್ನನನ್ನು ಹಿಡಿದು ಬಂಧಿಸಿ ಸೆರೆಯಲ್ಲಿ ಹಾಕಿದ್ದನು.


ಹೀಗಿರುವಲ್ಲಿ ಹೆರೋದನ ಹುಟ್ಟುಹಬ್ಬ ಬಂದಿತು. ಹೆರೋದಿಯಳ ಮಗಳು ಆಹ್ವಾನಿತರ ಮುಂದೆ ನರ್ತನಮಾಡಿ ಹೆರೋದನನ್ನು ಮೆಚ್ಚಿಸಿದಳು.


ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಮುಂದೆಬಂದು ಅವರ ಮೇಲೆ ಪ್ರಬಲವಾಗಿ ದೋಷಾರೋಪಣೆ ಮಾಡತೊಡಗಿದರು.


ಉದಾಹರಣೆಗೆ: ಇಬ್ಬರು ನಿಮ್ಮ ಪ್ರಾರ್ಥನಾಲಯಕ್ಕೆ ಬಂದರೆಂದು ಇಟ್ಟುಕೊಳ್ಳಿ. ಅವರಲ್ಲಿ ಒಬ್ಬನು ಚಿನ್ನದುಂಗುರವನ್ನು ತೊಟ್ಟು, ಸೊಗಸಾದ ಉಡುಪನ್ನು ಧರಿಸಿದವನು. ಮತ್ತೊಬ್ಬನು ಹರಕುಬಟ್ಟೆಯನ್ನು ಉಟ್ಟ ಬಡವನು.


ಆಗ, ನೀವು ಸೊಗಸಾದ ಉಡುಪನ್ನು ಧರಿಸಿದವನಿಗೆ ಗೌರವದಿಂದ, “ಬನ್ನಿ ಸ್ವಾಮೀ ಬನ್ನಿ, ದಯವಿಟ್ಟು ಈ ಪೀಠವನ್ನು ಅಲಂಕರಿಸಿ,” ಎನ್ನುತ್ತೀರಿ. ಬಡವನಿಗೆ, “ನೀನು ಅಲ್ಲಿಯೇ ನಿಂತುಕೋ, ಇಲ್ಲವೇ ಕೆಳಗೆ, ನನ್ನ ಕಾಲ ಬಳಿ ಕುಳಿತುಕೋ,” ಎನ್ನಿತ್ತೀರಿ. ಹೀಗಿರಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು