Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:27 - ಕನ್ನಡ ಸತ್ಯವೇದವು C.L. Bible (BSI)

27 ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಕೆಲವು ಮಹಿಳೆಯರು ಯೇಸುವಿಗಾಗಿ ದುಃಖಪಟ್ಟು, ಎದೆಬಡಿದುಕೊಂಡು ಗೋಳಾಡುತ್ತಾ, ಹಿಂಬಾಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಆ ಗುಂಪಿನಲ್ಲಿ ಕೆಲವು ಸ್ತ್ರೀಯರು ಎದೆಬಡಿದುಕೊಳ್ಳುತ್ತಾ ಯೇಸುವಿಗಾಗಿ ಗೋಳಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಜನರೂ ಸ್ತ್ರೀಯರೂ ದೊಡ್ಡ ಗುಂಪಾಗಿ ಆತನ ಹಿಂದೆ ಬಂದರು. ಆ ಸ್ತ್ರೀಯರು ಎದೆಬಡುಕೊಳ್ಳುತ್ತಾ ಆತನ ವಿಷಯದಲ್ಲಿ ಗೋಳಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅನೇಕಾನೇಕ ಜನರು ಯೇಸುವನ್ನು ಹಿಂಬಾಲಿಸಿದರು. ದೊಡ್ಡಗುಂಪಾಗಿ ಸೇರಿದ್ದ ಸ್ತ್ರೀಯರು ಯೇಸುವಿಗಾಗಿ ದುಃಖಪಟ್ಟು ಎದೆ ಬಡಿದುಕೊಂಡು ಗೋಳಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಜನರ ಮಹಾ ಸಮೂಹ ಯೇಸುವಿನ ಹಿಂದೆ ಹೊರಟಿತು. ಅವರಲ್ಲಿ ಯೇಸುವಿಗಾಗಿ ಶೋಕಿಸುತ್ತಾ, ಗೋಳಾಡುತ್ತಿದ್ದ ಮಹಿಳೆಯರು ಸಹ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಜೆಜುಚ್ಯಾ ಫಾಟ್ನಾ ಲೊಕಾಂಚೊ, ಎಕ್ ಮೊಟೊ ತಾಂಡೊಚ್ ಹೊತ್ತೊ, ತ್ಯಾತುರ್‍ಲ್ಯಾ ಉಲ್ಲ್ಯಾ ಬಾಯ್ಕಾಮನ್ಸಾ ಜೆಜುಸಾಟ್ನಿ ರಡುಲಾಗಲ್ಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:27
9 ತಿಳಿವುಗಳ ಹೋಲಿಕೆ  

ಇತ್ತ, ಸತ್ತ ಬಾಲಕಿಗಾಗಿ ಎಲ್ಲರೂ ಅತ್ತು ಗೋಳಾಡುತ್ತಾ ಇದ್ದರು. ಯೇಸುವಾದರೋ, “ಅಳಬೇಡಿ, ಅವಳು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು.


ದೆವ್ವಗಳ ಕಾಟದಿಂದಲೂ ರೋಗರುಜಿನಗಳಿಂದಲೂ ಬಿಡುಗಡೆ ಹೊಂದಿದ್ದ ಕೆಲವು ಮಹಿಳೆಯರು ಅವರ ಜೊತೆಯಲ್ಲಿದ್ದರು. ಅವರಾರೆಂದರೆ: ಏಳು ದೆವ್ವಗಳಿಂದ ವಿಮುಕ್ತಳಾಗಿದ್ದ ಮಗ್ದಲದ ಮರಿಯಳು,


ಇದನ್ನೆಲ್ಲಾ ದೂರದಿಂದ ನೋಡುತ್ತಿದ್ದ ಕೆಲವು ಮಹಿಳೆಯರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಕೋಬ ಮತ್ತು ಯೋಸೆಯ ತಾಯಿ ಮರಿಯಳು ಹಾಗೂ ಸಲೋಮೆ ಇದ್ದರು.


ಗಲಿಲೇಯದಿಂದ ಯೇಸುವಿನ ಸಂಗಡ ಬಂದಿದ್ದ ಮಹಿಳೆಯರು ಜೋಸೆಫನ ಜೊತೆ ಹೋಗಿ ಸಮಾಧಿಯನ್ನೂ ಯೇಸುವಿನ ಪಾರ್ಥಿವ ಶರೀರವನ್ನು ಅದರಲ್ಲಿಟ್ಟ ರೀತಿಯನ್ನೂ ನೋಡಿಕೊಂಡರು.


ಯೇಸುವನ್ನು ಗಲಿಲೇಯದಿಂದ ಹಿಂಬಾಲಿಸಿ ಬಂದಿದ್ದ ಹಾಗೂ ಅವರ ಸೇವೆಮಾಡಿದ ಮಹಿಳೆಯರೂ ಅಲ್ಲಿದ್ದರು. ಅವರು ಇದೆಲ್ಲವನ್ನು ದೂರದಿಂದ ನೋಡುತ್ತಾ ಇದ್ದರು.


ಎಣಿಸಬಹುದಿದೆ ನನ್ನೆಲುಬುಗಳೆಲ್ಲವನು I ಹಿಗ್ಗುತಿಹರು ದುರುಗುಟ್ಟಿ ನೋಡೆನ್ನನು II


ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ,” ಎಂದು ಪೇಟೆಬೀದಿಯಲ್ಲಿ ಕುಳಿತು, ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಇವರು ಹೋಲುತ್ತಾರೆ.


ಯೇಸು ಅವರ ಕಡೆ ತಿರುಗಿ, “ಜೆರುಸಲೇಮಿನ ಕುವರಿಯರೇ, ನನಗಾಗಿ ಅಳಬೇಡಿ; ನಿಮಗಾಗಿ, ನಿಮ್ಮ ಮಕ್ಕಳಿಗಾಗಿ ದುಃಖಿಸಿರಿ.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನೀವು ಅತ್ತುಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು