Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಪಿಲಾತನು, “ನೀನು ಯೆಹೂದ್ಯರ ಅರಸನೋ?” ಎಂದು ಯೇಸುವನ್ನು ಪ್ರಶ್ನಿಸಿದನು. “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಯೇಸು ಮರುನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪಿಲಾತನು ಯೇಸುವನ್ನು “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು, ಆತನು, “ನೀನೇ ಹೇಳಿದ್ದೀ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪಿಲಾತನು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪಿಲಾತನು ಯೇಸುವನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿರುವೆ!” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಪಿಲಾತನು ಯೇಸುವಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಅದಕ್ಕೆ ಯೇಸು ಅವರಿಗೆ, “ನೀವೇ ಹೇಳುತ್ತಿದ್ದೀರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಪಿಲಾತಾನ್ ಜೆಜುಕ್ “ತಿಯಾ ಜುದೆವಾಂಚೊ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್. ತೆಕಾ ಜೆಜುನ್ “ತಿಯಾ ಮಟಲ್ಲ್ಯಾ ಸಾರ್ಕೆಚ್” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:3
14 ತಿಳಿವುಗಳ ಹೋಲಿಕೆ  

ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ಅದಕ್ಕೆ ಅವರೆಲ್ಲರೂ, “ಹಾಗಾದರೆ, ನೀನು ದೇವರ ಪುತ್ರನೋ?’ ಎಂದು ಕೇಳಿದರು. “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ,” ಎಂದು ಯೇಸು ಉತ್ತರಕೊಡಲು ಅವರು,


ಪಿಲಾತನು ಯೇಸುವನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಪ್ರಶ್ನಿಸಿದನು. “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಯೇಸು ಮರುನುಡಿದರು.


“ಯೆಹೂದ್ಯರ ಅರಸನೇ, ನಿನಗೆ ಶುಭವಾಗಲಿ,” ಎಂದು ಜರೆಯುತ್ತಾ ಅವರ ಕೆನ್ನೆಗೆ ಹೊಡೆಯತೊಡಗಿದರು.


ಯೇಸುವಿನ ಶಿಲುಬೆಯ ಮೇಲ್ಗಡೆ, “ಇವನು ಯೆಹೂದ್ಯರ ಅರಸ” ಎಂಬ ಲಿಖಿತವಿತ್ತು.


ಇಸ್ರಯೇಲರ ಅರಸನಾದ ಈ ಕ್ರಿಸ್ತನು ಶಿಲುಬೆಯಿಂದ ಇಳಿದುಬರಲಿ; ಆಗ ನೋಡಿ ನಂಬುತ್ತೇವೆ,” ಎಂದು ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದವರು ಸಹ ಅವರನ್ನು ಹಂಗಿಸುತ್ತಿದ್ದರು.


ತರುವಾಯ, “ಯೆಹೂದ್ಯರ ಅರಸನಿಗೆ ಜಯವಾಗಲಿ,” ಎಂದು ನಾಟಕೀಯವಾಗಿ ವಂದಿಸಿದರು.


ಯೇಸುಸ್ವಾಮಿಯನ್ನು ರಾಜ್ಯಪಾಲನ ಮುಂದೆ ನಿಲ್ಲಿಸಿದರು. “ನೀನು ಯೆಹೂದ್ಯರ ಅರಸನೋ?” ಎಂದು ರಾಜ್ಯಪಾಲ ಪ್ರಶ್ನಿಸಿದನು. ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಮರುನುಡಿದರು.


ಆದುದರಿಂದ ಪಿಲಾತನೇ ಅವರ ಬಳಿಗೆ ಬಂದು, “ಈತನ ಮೇಲೆ ನಿಮ್ಮ ದೂರು ಏನು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು