Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:33 - ಕನ್ನಡ ಸತ್ಯವೇದವು C.L. Bible (BSI)

33 ‘ಕಪಾಲ’ ಎಂಬ ಸ್ಥಳಕ್ಕೆ ಬಂದು ಸೇರಿದ ಮೇಲೆ ಯೇಸುಸ್ವಾಮಿಯನ್ನು ಶಿಲುಬೆಗೆ ಏರಿಸಿದರು. ಆ ಇಬ್ಬರು ಅಪರಾಧಿಗಳಲ್ಲಿ ಒಬ್ಬನನ್ನು ಅವರ ಬಲಗಡೆಯಲ್ಲೂ ಮತ್ತೊಬ್ಬನನ್ನು ಎಡಗಡೆಯಲ್ಲೂ ಶಿಲುಬೆಗೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನೂ ಆ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು, ಒಬ್ಬನನ್ನು ಆತನ ಬಲಗಡೆಯಲ್ಲಿ ಒಬ್ಬನನ್ನು ಆತನ ಎಡಗಡೆಯಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೇಸುವನ್ನು ಮತ್ತು ಇಬ್ಬರು ದುಷ್ಕರ್ಮಿಗಳನ್ನು ಅವರು “ಕಪಾಲ”ವೆಂಬ ಸ್ಥಳಕ್ಕೆ ಕರೆದುಕೊಂಡು ಹೋದರು. ಅಲ್ಲಿ ಸೈನಿಕರು ಯೇಸುವನ್ನೂ ಆ ದುಷ್ಕರ್ಮಿಗಳನ್ನೂ ಶಿಲುಬೆಗಳಿಗೆ ಜಡಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು “ತಲೆಬುರುಡೆಯ ಸ್ಥಳ” ಎಂದು ಕರೆಯಲಾಗುವ ಸ್ಥಳಕ್ಕೆ ಬಂದಾಗ, ಅಲ್ಲಿ ಯೇಸುವನ್ನು ಶಿಲುಬೆಗೆ ಹಾಕಿದರು. ಆ ಅಪರಾಧಿಗಳಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿ ಮತ್ತೊಬ್ಬನನ್ನು ಅವರ ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಅಶೆ ತೆನಿ “ಟಕ್ಲ್ಯಾಚ್ಯಾ ಬುರ್‍ಡ್ಯಾಚೊ ಜಾಗೊ” ಮನ್ತಲ್ಯಾ ಜಾಗ್ಯಾರ್ ಯೆವ್ನ್ ಪಾವಲ್ಲ್ಯಾ ತನ್ನಾ ತೆನಿ ಜೆಜುಕ್ ಕುರ್ಸಾರ್ ಮಾರ್‍ಲ್ಯಾನಿ, ಅನಿ ತ್ಯಾ ದೊಗ್ಯಾ ಚೊರಾಕ್ನಿ, ಎಕ್ಲ್ಯಾಕ್ ಜೆಜುಚ್ಯಾ ಉಜ್ವ್ಯಾಬಾಜುಕ್, ಅನಿ ಎಕ್ಲ್ಯಾಕ್ ಡಾವ್ಯಾ ಬಾಜುಕ್ ಕುರ್ಸಾರ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:33
19 ತಿಳಿವುಗಳ ಹೋಲಿಕೆ  

ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಯೇಸು ತಮಗೆ ಯಾವ ಬಗೆಯ ಮರಣ ಕಾದಿರುವುದೆಂದು ಸೂಚಿಸಿ ಹೇಳಿದ ಮಾತು ಹೀಗೆ ನೆರವೇರುವಂತಾಯಿತು.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು.


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ಯೇಸುವನ್ನು ಕುರಿತು ಪವಿತ್ರಗ್ರಂಥ ಹೇಳುವುದೆಲ್ಲವೂ ನೆರವೇರಿದ ಮೇಲೆ ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಮಾಡಿದರು.


ನೀವು ಶಿಲುಬೆಗೇರಿಸಿ ಕೊಂದುಹಾಕಿದ ಯೇಸುಸ್ವಾಮಿಯನ್ನು ನಮ್ಮ ಪಿತೃಗಳ ದೇವರು ಜೀವಕ್ಕೆ ಎಬ್ಬಿಸಿದ್ದಾರೆ.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು.


‘ನರಪುತ್ರನು ಪಾಪಿಮಾನವರ ಕೈವಶವಾಗಿ, ಶಿಲುಬೆಯ ಮರಣಕ್ಕೀಡಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ,’ ಎಂದು ತಿಳಿಸಿದ್ದನ್ನು ಮರೆತುಬಿಟ್ಟಿರೋ?” ಎಂದರು.


“ನಿಮಗೆ ಗೊತ್ತಿರುವ ಹಾಗೆ ಪಾಸ್ಕಹಬ್ಬಕ್ಕೆ ಇನ್ನು ಎರಡು ದಿನಗಳಿವೆ. ಆಗ ನರಪುತ್ರನನ್ನು ಶಿಲುಬೆಗೇರಿಸಲು ಹಿಡಿದೊಪ್ಪಿಸುವರು,” ಎಂದರು.


ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯಮಾಡುವರು, ಕೊರಡೆಗಳಿಂದ ಹೊಡೆಯುವರು, ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದರು.


ಮುತ್ತಿದೆ ದುರುಳರ ಹಿಂಡು; ಸುತ್ತಿವೆ ಕುನ್ನಿಗಳು I ಕುತ್ತಿವೆ ನನ್ನ ಕೈಗಳು ಮೇಣ್ ಕಾಲುಗಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು