Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:34 - ಕನ್ನಡ ಸತ್ಯವೇದವು C.L. Bible (BSI)

34 ಆಗ ಯೇಸು, “ಪಿತನೇ, ಇವರನ್ನು ಕ್ಷಮಿಸಿ; ತಾವೇನು ಮಾಡುತ್ತಿರುವರೆಂದು ಇವರು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಬಟ್ಟೆಗಳನ್ನು ಚೀಟುಹಾಕಿ ಹಂಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಆಮೇಲೆ ಆತನ ಬಟ್ಟೆಗಳನ್ನು ಪಾಲುಮಾಡಿ ಚೀಟು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೇಸು, “ತಂದೆಯೇ, ಇವರನ್ನು ಕ್ಷಮಿಸು. ಇವರಿಗೆ ತಾವು ಮಾಡುತ್ತಿರುವುದು ತಿಳಿದಿಲ್ಲ” ಎಂದು ಪ್ರಾರ್ಥಿಸಿದನು. ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳು ಯಾರಿಗೆ ಸೇರಬೇಕೆಂದು ತೀರ್ಮಾನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ಯೇಸು, “ತಂದೆಯೇ, ಇವರನ್ನು ಕ್ಷಮಿಸಿ, ತಾವು ಏನು ಮಾಡುತ್ತಿದ್ದಾರೆಂದು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಉಡುಪನ್ನು ಚೀಟುಹಾಕಿ, ಹಂಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತನ್ನಾ ಜೆಜುನ್ “ಬಾಬಾ ತೆಂಕಾ ಮಾಪ್‍ ಕರ್, ತೆನಿ ಕಾಯ್ ಕರುಲ್ಯಾತ್ ಮನುನ್ ತೆಂಕಾಚ್ ಗೊತ್ತ್ ನಾ”, ಮಟ್ಲ್ಯಾನ್. ಚಿಟಿಯಾ ಕಾಡುನ್ ಕೊನಾಕ್ ಯೆತಾತ್ ಬಗುಂವಾ ಮನುನ್ ತೆನಿ ತೆಚೆ ಕಪ್ಡೆ ವಾಟುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:34
26 ತಿಳಿವುಗಳ ಹೋಲಿಕೆ  

ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.


ಅನಂತರ ಮೊಣಕಾಲೂರಿ, “ಪ್ರಭೂ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡಿ,” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. ಸೌಲನು ಸ್ತೇಫನನ ಕೊಲೆಗೆ ಸಮ್ಮತಿಸಿದ್ದನು.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ. ಹೌದು, ಶಪಿಸದೆ ಆಶೀರ್ವದಿಸಿರಿ.


ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ.


ನನ್ನ ಉಡುಗೆಗಳನ್ನು ಹಂಚಿಕೊಂಡರು I ನನ್ನ ಅಂಗಿಗೋಸ್ಕರ ಚೀಟುಹಾಕಿದರು II


‘ನೀವು ಜೋಸೆಫನಿಗೆ - ನಿನ್ನ ಅಣ್ಣಂದಿರಾದ ನಾವು ನಿನಗೆ ಹಾನಿಮಾಡಿದ್ದೇನೋ ನಿಜ; ಆದರೂ ನಮ್ಮ ಅಪರಾಧವನ್ನು, ಪಾಪವನ್ನು ಕ್ಷಮಿಸು - ಎಂದು ಕೇಳಿಕೊಳ್ಳಬೇಕು, ಅವರು ಹೀಗೆ ವಿಧಿಸಿದ್ದರಿಂದ ನಾವು ಮಾಡಿದ ಅಪರಾಧವನ್ನು ಈಗ ನೀನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತಿದ್ದೇವೆ.” ಈ ಮಾತುಗಳನ್ನು ಕೇಳಿ ಜೋಸೆಫನು ಕಣ್ಣೀರು ಸುರಿಸಿದನು.


ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.


ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.


“ಸಹೋದರರೇ, ನೀವೂ ನಿಮ್ಮ ಅಧಿಕಾರಿಗಳೂ ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನಾನು ಬಲ್ಲೆ.


ಸ್ವಂತ ದುಡಿಮೆಯಿಂದ ಜೀವಿಸುತ್ತೇವೆ; ನಮ್ಮನ್ನು ಶಪಿಸುವವರನ್ನು ಆಶೀರ್ವದಿಸುತ್ತೇವೆ; ಹಿಂಸೆಗೊಳಗಾದಾಗ ಸಹಿಸಿಕೊಳ್ಳುತ್ತೇವೆ.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಅದಕ್ಕೆ ಯೇಸು, “ನಿಮಗೆ ಮೇಲಿನಿಂದ ಕೊಟ್ಟ ಹೊರತು ನನ್ನ ಮೇಲೆ ನಿಮಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದ್ದರಿಂದ ನನ್ನನ್ನು ನಿಮ್ಮ, ಕೈಗೆ ಒಪ್ಪಿಸಿದವನಿಗೇ ಪಾಪ ಹೆಚ್ಚು,” ಎಂದು ನುಡಿದರು.


ಕೊನೆಗೆ ಅವರನ್ನು ಶಿಲುಬೆಗೆ ಏರಿಸಿದರು. ಅವರ ಬಟ್ಟೆಗಳನ್ನು ಯಾವುಯಾವುದು ಯಾರು ಯಾರಿಗೆ ಸಿಗಬೇಕೆಂದು ತಿಳಿಯಲು ಚೀಟುಹಾಕಿ ತಮ್ಮತಮ್ಮೊಳಗೆ ಹಂಚಿಕೊಂಡರು.


ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


“ಓ ಪಿತನೇ, ನಿಮಗೆ ಇಷ್ಟವಾದರೆ ಈ ಕಷ್ಟದ ಕೊಡವನ್ನು ನನ್ನಿಂದ ತೊಲಗಿಸಿರಿ. ಆದರೂ ನನ್ನ ಚಿತ್ತವಲ್ಲ, ನಿಮ್ಮ ಚಿತ್ತವೇ ನೆರವೇರಲಿ,” ಎಂದರು.


“ನಾನು ಪ್ರಾರ್ಥಿಸುವುದು ಇವರಿಗಾಗಿ, ಲೋಕಕ್ಕಾಗಿ ಅಲ್ಲ. ನೀವೇ ನನಗೆ ಕೊಟ್ಟವರಿಗಾಗಿ ಪ್ರಾರ್ಥಿಸುತ್ತೇನೆ.


ಆಗ ಪೌಲನು ಗಟ್ಟಿಯಾಗಿ ಕೂಗುತ್ತಾ, “ನೀನೇನೂ ಹಾನಿಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು