Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:35 - ಕನ್ನಡ ಸತ್ಯವೇದವು C.L. Bible (BSI)

35 ಜನರು ನೋಡುತ್ತಾ ನಿಂತಿದ್ದರು. ಅಲ್ಲಿದ್ದ ಮುಖಂಡರು ಯೇಸುವನ್ನು ಮೂದಲಿಸುತ್ತಾ, “ಇವನು ಇತರರನ್ನು ರಕ್ಷಿಸಿದ; ಇವನು ದೇವರಿಂದಲೇ ಅಭಿಷಿಕ್ತನಾದ ಲೋಕೋದ್ಧಾರಕನು ಮತ್ತು ಅವರಿಂದಲೇ ಆಯ್ಕೆಯಾದವನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಜನರು ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು ಹಾಸ್ಯಮಾಡಿ - ಅವನು ಮತ್ತೊಬ್ಬರನ್ನು ರಕ್ಷಿಸಿದನು; ಅವನು ದೇವರಾರಿಸಿಕೊಂಡ ಕ್ರಿಸ್ತನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಜನರು ನೋಡುತ್ತಾ ಅಲ್ಲಿ ನಿಂತಿದ್ದರು. ಯೆಹೂದ್ಯನಾಯಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು, “ಇವನು ದೇವರಿಂದ ಆರಿಸಲ್ಪಟ್ಟ ಕ್ರಿಸ್ತನಾಗಿದ್ದರೆ ತನ್ನನ್ನು ರಕ್ಷಿಸಿಕೊಳ್ಳಲಿ. ಇವನು ಬೇರೆಯವರನ್ನು ರಕ್ಷಿಸಿದನಲ್ಲವೇ?” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಜನರು ನೋಡುತ್ತಾ ನಿಂತುಕೊಂಡಿದ್ದರು. ಅವರೊಂದಿಗೆ ಅಧಿಕಾರಿಗಳು ಸಹ ಯೇಸುವನ್ನು ಅಪಹಾಸ್ಯಮಾಡಿ, “ಬೇರೆಯವರನ್ನು ರಕ್ಷಿಸಿದ ಈತನು ದೇವರು ಆರಿಸಿಕೊಂಡ ಕ್ರಿಸ್ತನಾಗಿದ್ದರೆ, ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಜುದೆವಾಂಚಿ ಮುಖಂಡಾ ಜೆಜುಕ್ “ತೆನಿ ದುಸ್ರ್ಯಾಕ್ನಿ ಹುರ್‍ವುಲ್ಯಾನ್, ಅತ್ತಾ ತೊ ದೆವಾನ್ ಎಚುನ್ ಕಾಡಲ್ಲೊ ಮೆಸ್ಸಿಯಾ ಹೊಯ್ ಜಾಲ್ಯಾರ್, ಅಪ್ನಾಕುಚ್ ಹುರ್‍ವುನ್ ಘೆಂವ್ದಿ!” ಮನುನ್ ಎಡ್ಸಡ್ತಲೆ ಥೈ ಇಬೆ ಹೊತ್ತಿ ಸಗ್ಳಿ ಲೊಕಾ ಬಗುಲಾಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:35
24 ತಿಳಿವುಗಳ ಹೋಲಿಕೆ  

ಎಣಿಸಬಹುದಿದೆ ನನ್ನೆಲುಬುಗಳೆಲ್ಲವನು I ಹಿಗ್ಗುತಿಹರು ದುರುಗುಟ್ಟಿ ನೋಡೆನ್ನನು II


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಪ್ರಭುವಿನ ಬಳಿಗೆ ಬನ್ನಿ; ಸಜೀವ ಶಿಲೆಯಾದ ಅವರನ್ನು ಮಾನವರು ನಿಷ್ಪ್ರಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು.


ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.


“ಇದಿಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ನೆಲೆಗೊಳಿಸುವೆ ಇವನಲಿ ಎನ್ನಾತ್ಮವನು; ಸಾರುವನಿವನು ಜಗದಲಿ ನನ್ನ ಧರ್ಮವನು.


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಹಾಸ್ಯಾಸ್ಪದನಾದೆ ಸ್ವಜನರೆಲ್ಲರಿಗೆ ಗುರಿಯಾದೆ ಅವರ ದಿನನಿತ್ಯದ ಗೇಲಿ ಲಾವಣಿಗಳಿಗೆ.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


“ಹಿಡಿಯಿರಿ ಬೆನ್ನಟ್ಟಿ, ದೇವನವನನ್ನು ಕೈಬಿಟ್ಟಿಹನು I ರಕ್ಷಿಸುವಂಥವರಾರು ಇನ್ನಿಲ್ಲ” ಎನ್ನುತಿಹರು II


ನೀ ಗಾಯಪಡಿಸಿದವರನು ಪೀಡಿಸುತಿಹರು I ಗಾಯದ ಮೇಲೆ ಬರೆಯೆಳೆಯುತಿಹರು II


ನನಗೆ ಆಪತ್ತೊದಗಲದೊ ಸಂತೋಷಿಸಿದರು ಸಭೆಗೂಡಿ I ಸೂರೆಮಾಡಿದರು ತಿರುತಿರುಗಿ ಆ ಭ್ರಷ್ಟರೊಟ್ಟುಗೂಡಿ II


ಎಲೆ ಮಾನವ, ಎಲ್ಲಿಯತನಕ ಕೆಡಿಸುವೆ ಎನ್ನ ಘನತೆಯ? I ಅದೆಷ್ಟು ಕಾಲ ಹುರುಳಿಲ್ಲದನು ಬಯಸಿ ಅರಸುವೆ ಹುಸಿಯ? II


ಪಿಲಾತನು ಮುಖ್ಯಯಾಜಕರನ್ನೂ ಮುಖಂಡರನ್ನೂ ಜನರನ್ನೂ ಒಟ್ಟಾಗಿ ಕರೆಯಿಸಿ,


ತೂಗುಹಾಕಿದ್ದ ಅಪರಾಧಿಗಳಲ್ಲಿ ಒಬ್ಬನು, “ನೀನು ಕ್ರಿಸ್ತ, ಅಲ್ಲವೆ? ಹಾಗಾದರೆ ನಿನ್ನನ್ನು ನೀನೇ ರಕ್ಷಿಸಿಕೋ, ನಮ್ಮನ್ನೂ ರಕ್ಷಿಸು,” ಎಂದು ಹಂಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು