Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:40 - ಕನ್ನಡ ಸತ್ಯವೇದವು C.L. Bible (BSI)

40 ಆದರೆ ಮತ್ತೊಬ್ಬ ಅಪರಾಧಿ ಅವನನ್ನು ಖಂಡಿಸುತ್ತಾ, “ನಿನಗೆ ದೇವರ ಭಯಬೇಡವೇ? ನೀನು ಸಹ ಇದೇ ಶಿಕ್ಷೆಗೆ ಗುರಿಯಾಗಿರುವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಎರಡನೆಯವನು ಅವನನ್ನು ಗದರಿಸಿ - ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದರೆ ಇನ್ನೊಬ್ಬ ದುಷ್ಕರ್ಮಿಯು ಅವನನ್ನು ಗದರಿಸಿ, “ನೀನು ದೇವರಿಗೆ ಹೆದರಬೇಕು! ನಾವೆಲ್ಲರೂ ಬೇಗನೆ ಸಾಯುವೆವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದರೆ ಮತ್ತೊಬ್ಬ ಅಫರಾಧಿಯು ಅವನನ್ನು ಖಂಡಿಸುತ್ತಾ, “ನೀನು ಇದೇ ದಂಡನೆಗೆ ಗುರಿಯಾಗಿದ್ದರೂ ದೇವರಿಗೆ ಭಯಪಡುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತನ್ನಾ ಅನಿ ಎಕ್ಲ್ಯಾನ್ ತೆಕಾ “ತುಕಾಬಿ ತೆಕಾ ಗಾವಲ್ಲಿಚ್ ಶಿಕ್ಷಾ ಗಾವ್ಲಾ, ತುಕಾ ಉಲ್ಲೆಬಿ ದೆವಾಚೆ ಭಿಂಯೆ ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:40
12 ತಿಳಿವುಗಳ ಹೋಲಿಕೆ  

ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ನಿಷ್ಪ್ರಯೋಜಕವಾದ ಕತ್ತಲುಮಯ ಕಾರ್ಯಗಳಿಗೆ ಕೈಹಾಕದಿರಿ. ಅಂಥವುಗಳನ್ನು ಬಯಲಿಗೆಳೆದು ಖಂಡಿಸಿರಿ.


ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ.


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ಜಿನುಗುಟ್ಟುತಿಹುದು ಪಾಪವು ದುಷ್ಟನ ಮನದಲಿ I ದೇವ ಭಯವೇ ಇಲ್ಲ ಅವನ ಕಣ್ಣೆದುರಿನಲಿ II


ಕಷ್ಟಬಂದಾಗ ಅರಸ ಅಹಾಜನು ಸರ್ವೇಶ್ವರನಿಗೆ ಮತ್ತಷ್ಟು ದ್ರೋಹಮಾಡಿದನು.


“ಸಹೋದರನ ಬಗ್ಗೆ ಒಳಗೊಳಗೇ ಹಗೆ ಇಟ್ಟುಕೊಳ್ಳಬೇಡ. ನೆರೆಯವನ ದೋಷಕ್ಕೆ ನೀನು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ಎತ್ತಿ ತೋರಿಸಲೇಬೇಕು.


ತಮ್ಮ ನೋವು ಬಾಧೆಗಳ ನಿಮಿತ್ತವೂ ತಮ್ಮ ಉರಿ ಹುಣ್ಣುಗಳ ನಿಮಿತ್ತವೂ ಸ್ವರ್ಗದ ದೇವರನ್ನು ದೂಷಿಸಿದರು. ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ.


ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.


ತೂಗುಹಾಕಿದ್ದ ಅಪರಾಧಿಗಳಲ್ಲಿ ಒಬ್ಬನು, “ನೀನು ಕ್ರಿಸ್ತ, ಅಲ್ಲವೆ? ಹಾಗಾದರೆ ನಿನ್ನನ್ನು ನೀನೇ ರಕ್ಷಿಸಿಕೋ, ನಮ್ಮನ್ನೂ ರಕ್ಷಿಸು,” ಎಂದು ಹಂಗಿಸಿದನು.


ನಮಗೇನೋ ಶಿಕ್ಷೆ ನ್ಯಾಯವಾಗಿದೆ, ನಮ್ಮ ಕೃತ್ಯಕ್ಕೆ ತಕ್ಕ ಫಲ ಸಿಕ್ಕಿದೆ; ಇವರಾದರೋ, ನಿರಪರಾಧಿ!” ಎಂದನು.


ಅದರಂತೆ ಐದು ಗಂಟೆಗೆ ಗೊತ್ತುಮಾಡಿದವರು ಬಂದಾಗ ಒಬ್ಬೊಬ್ಬನಿಗೆ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು